ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇಂದಿರಾ ಕ್ಯಾಂಟೀನ್ ತೆರವಿಗೆ ಹೈಕೋರ್ಟ್ ಆದೇಶ

|
Google Oneindia Kannada News

ಬೆಂಗಳೂರು, ಮಾರ್ಚ್ 31: ಪುಲಕೇಶಿನಗರದ ವಿವಾದಿತ ಜಾಗದಲ್ಲಿ ನ್ಯಾಯಾಲಯಕ್ಕೆ ನೀಡಿದ್ದ ಮುಚ್ಚಳಿಕೆ ಉಲ್ಲಂಘಿಸಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ ಕಟ್ಟಡವನ್ನು ಆರು ವಾರಗಳಲ್ಲಿ ತೆರವುಗೊಳಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಅದೇಶ ನೀಡಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಚುನಾವಣೆಯ ಮುಖ್ಯ ದಿನಾಂಕಗಳು

ಆಸ್ತಿ ಒಡೆತನಕ್ಕೆ ಸಂಬಂಧಿಸಿದಂತೆ ವ್ಯಾಜ್ಯ ಬಾಕಿ ಇರುವ ಹಿನ್ನೆಲೆಯಲ್ಲಿ ಆ ಜಾಗದಲ್ಲಿ ಕಟ್ಟಡ ನಿರ್ಮಿಸುವುದಿಲ್ಲ ಎಂದು ಬಿಬಿಎಂಪಿಯೇ ಹಿಂದೆ ಕೋರ್ಟ್‌ ಗೆ ಮುಚ್ಚಳಿಕೆ ಬರೆದುಕೊಟ್ಟಿತ್ತು. ಹೀಗಿದ್ದರೂ ಅದೇ ಜಾಗದಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಿಸಿತ್ತು. ಹಾಗಾಗಿ ಇದೀಗ ನ್ಯಾ. ಪಿ.ಎಸ್. ದಿನೇಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಆರು ವಾರಗಳಲ್ಲಿ ಇಂದಿರಾ ಕ್ಯಾಂಟೀನ್ ಕಟ್ಟಡವನ್ನು ತೆರವುಗೊಳಿಸಬೇಕು ಎಂದು ಆದೇಶಿಸಿದೆ.

ಇಂದಿರಾ ಕ್ಯಾಂಟೀನ್ ಯೋಜನೆ ವಿಸ್ತರಣೆ, ಇತರ ಸಂಪುಟದ ನಿರ್ಧಾರಗಳುಇಂದಿರಾ ಕ್ಯಾಂಟೀನ್ ಯೋಜನೆ ವಿಸ್ತರಣೆ, ಇತರ ಸಂಪುಟದ ನಿರ್ಧಾರಗಳು

ಪುಲಕೇಶಿ ನಗರದ ಆ ವಿವಾದಾತ್ಮಕ ಜಾಗದ ಬಗ್ಗೆ ಬಿಬಿಎಂಪಿ ಮತ್ತು ನವೋದಯ ಗೃಹ ನಿರ್ಮಣ ಸಹಕಾರ ಸಂಘ ನಿಯಮಿತದ ನಡುವೆ ಕಾನೂನು ಸಮರ ನಡೆಯುತ್ತಿದೆ. ಅಧೀನ ನ್ಯಾಯಾಲಯ ಪಾಲಿಕೆ ಪರ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ಸಂಘ, ಹೈಕೋರ್ಟ್ ಮೊರೆ ಹೋಗಿತ್ತು.

HC orders shift Pulakeshi nagar Indira canteen

ಆಗ 2011ರಲ್ಲಿ ಹೈಕೋರ್ಟ್ , ವಿವಾದಿತ ಜಾಗದಲ್ಲಿ ಯಥಾಸ್ಥಿತಿಕಾಯ್ದುಕೊಳ್ಳುವಂತೆ ಮಧ್ಯಂತರ ಆದೇಶ ನೀಡಿತ್ತು.ಈ ಮಧ್ಯೆ 2017ರ ಆಗಸ್ಟ್ 10ರಂದು ವಿವಾದಿತ ಜಾಗದಲ್ಲಿ ಯಾವುದೇ ಕಟ್ಟಡವನ್ನು ನಿರ್ಮಿಸುವುದಿಲ್ಲ ಎಂದು ಪಾಲಿಕೆಯು ಮುಚ್ಚಳಿಕೆಯನ್ನು ನೀಡಿತ್ತು.

ಆದರೆ ಕಳೆದ ಡಿಸೆಂಬರ್ ನಲ್ಲಿ ಹೈಕೋರ್ಟ್ ಚಳಿಗಾಲದ ರಜೆ ಇದ್ದ ಅವಧಿಯಲ್ಲಿ ಬಿಬಿಎಂಪಿ ನ್ಯಾಯಾಲಯದ ಆದೇಶ ಹಾಗೂ ತಾನು ನೀಡಿದ್ದ ಮುಚ್ಚಳಿಕೆ ಮರೆತು ಇಂದಿರಾ ಕ್ಯಾಂಟೀನ್ ನಿರ್ಮಿಸಿತ್ತು.

English summary
High court has given direction BBMP to shift Indira canteen at Pulakeshi nagar within six weeks which was constructed in dispute site.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X