Get Updates
Get notified of breaking news, exclusive insights, and must-see stories!

ಅಕ್ರಮ ಆಸ್ತಿಗಳಿಕೆ ಪ್ರಕರಣ : ಜಯ ಅರ್ಜಿ ವಿಚಾರಣೆ ಆರಂಭ

ಬೆಂಗಳೂರು, ಜ.5 : ತಮಿಳುನಾಡು ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಅಕ್ರಮ ಆಸ್ತಿಗಳಿಕೆ ಪ್ರಕರಣದ ತೀರ್ಪಿನ ಮೇಲ್ಮನವಿ ವಿಚಾರಣೆ ಇಂದಿನಿಂದ ಕರ್ನಾಟಕ ಹೈಕೋರ್ಟ್‌ನ ವಿಶೇಷ ಪೀಠದಲ್ಲಿ ಆರಂಭವಾಗಿದೆ. ವಿಚಾರಣೆಯನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಬೇಕು ಎಂಬ ಜಯಲಲಿತಾ ಪರ ವಕೀಲರ ಮನವಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

ಸುಪ್ರೀಂಕೋರ್ಟ್ ಆದೇಶದ ಅನ್ವಯ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರ ಏಕಸದಸ್ಯ ಪೀಠವನ್ನು ರಚನೆ ಮಾಡಿದ್ದು, ಸೋಮವಾರದಿಂದ ವಿಶೇಷ ಪೀಠದಲ್ಲಿ ವಿಚಾರಣೆ ಆರಂಭವಾಯಿತು. ದೂರುದಾರ ಮತ್ತು ಬಿಜೆಪಿ ಮುಖಂಡ ಸುಬ್ರಮಣ್ಯ ಸ್ವಾಮಿ ನ್ಯಾಯಾಲಯಕ್ಕೆ ಖದ್ದು ಹಾಜರಾಗಿದ್ದರು. [ಜಯಲಲಿತಾ ಜಾಮೀನು ಅವಧಿ 4 ತಿಂಗಳು ವಿಸ್ತರಣೆ]

ಇಂದು ವಿಚಾರಣೆ ಆರಂಭವಾಗುತ್ತಿದ್ದಂತೆ ಜಯಲಲಿತಾ ಪರ ವಕೀಲರು ಪ್ರಕರಣದಲ್ಲಿ ದೆಹಲಿಯಿಂದ ಬಂದು ಹಿರಿಯ ವಕೀಲರೊಬ್ಬರು ವಾದ ಮಾಡಲಿದ್ದಾರೆ. ಆದ್ದರಿಂದ ವಿಚಾರಣೆಯನ್ನು ಕೆಲವು ದಿನಗಳ ಮಟ್ಟಿಗೆ ಮುಂದೂಡಬೇಕು ಎಂದು ಮನವಿ ಸಲ್ಲಿಸಿದರು, ಆದರೆ, ಕೋರ್ಟ್ ಮನವಿಯನ್ನು ತಿರಸ್ಕರಿಸತು. [ಜಯ ಪ್ರಕರಣ ವಿಚಾರಣೆ : ವಿಶೇಷ ಪೀಠ ರಚನೆ]

Jayalalithaa

ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಮೊದಲು ದೂರು ನೀಡಿದ್ದ ಬಿಜೆಪಿ ನಾಯಕ ಸುಬ್ರಮಣ್ಯ ಸ್ವಾಮಿ ನ್ಯಾಯಾಲಯದಲ್ಲಿ ಖದ್ದು ಹಾಜರಿದ್ದರು ಮತ್ತು ವಾದ ಮಂಡಿಸಲು ಅವಕಾಶ ನಿಡಬೇಕೆಂದು ಮನವಿ ಸಲ್ಲಿಸಿದರುನ್ಯಾಯಮೂರ್ತಿ ಸಿ.ಆರ್.ಕುಮಾರಸ್ವಾಮಿ ಅವರು ಲಿಖಿತ ರೂಪದಲ್ಲಿ ಮನವಿ ಸಲ್ಲಿಸುವಂತೆ ಈ ಸಂದರ್ಭದಲ್ಲಿ ಸೂಚನೆ ನೀಡಿದರು.

2014ರ ಸೆ. 27ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣ ತೀರ್ಪು ನೀಡಿದ್ದ ವಿಶೇಷ ನ್ಯಾಯಾಲ­ಯದ ನ್ಯಾಯಾಧೀಶ ಡಿ.ಕುನ್ಹ ಅವರು, ಜಯಲಲಿತಾ, ವಿ.ಕೆ.ಶಶಿಕಲಾ, ಜೆ.ಇಳವರಸಿ ಮತ್ತು ವಿ.ಎನ್.ಸುಧಾಕರನ್ ತಪ್ಪಿತಸ್ಥರು ಎಂದು ಆದೇಶ ನೀಡಿದ್ದರು. ಜಯಲಲಿತಾ ಅವರಿಗೆ 100 ಕೋಟಿ ಹಾಗೂ ಇತರರಿಗೆ ತಲಾ 10 ಕೋಟಿ ದಂಡ ಮತ್ತು ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಲಾಗಿತ್ತು. [ಅಕ್ರಮ ಆಸ್ತಿಗಳಿಕೆ ಪ್ರಕರಣದ ವಿವರ]

ಜಯಲಲಿತಾ ಮತ್ತು ಇತರ ಮೂವರು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿ ವಿಶೇಷ ಕೋರ್ಟ್ ತೀರ್ಪನ್ನು ಪ್ರಶ್ನಿಸಿದ್ದರು ಮತ್ತು ಜಾಮೀನು ನೀಡುವಂತೆ ಮನವಿ ಸಲ್ಲಿಸಿದ್ದರು. ಕೋರ್ಟ್ ಎಲ್ಲಾ ಆರೋಪಿಗಳಿಗೂ ಜಾಮೀನು ನೀಡಿತ್ತು.

ಜಾಮೀನು ನೀಡುವಾಗ ಪ್ರಕರಣದ ವಿಚಾರಣೆ­ಯ ಮೇಲ್ಮನವಿಯನ್ನು ತ್ವರಿತವಾಗಿ ನಡೆಸುವಂತೆ ಕರ್ನಾಟಕ ಹೈಕೋರ್ಟ್‌ಗೆ ಸೂಚಿಸಿತ್ತು ಮತ್ತು ಇದಕ್ಕಾಗಿ ವಿಶೇಷ ಪೀಠ ರಚನೆ ಮಾಡುವಂತೆ ಆದೇಶಿಸಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+