ಚಿಕಿತ್ಸೆ ವೇಳೆ ಎಚ್‌ಐವಿ: ಕೇಸ್ ದಾಖಲಿಸದ ಪೊಲೀಸರಿಗೆ ಕೋರ್ಟ್ ತರಾಟೆ

Posted By: Nayana
Subscribe to Oneindia Kannada

ಬೆಂಗಳೂರು, ಏಪ್ರಿಲ್ 13: ಚಿಕಿತ್ಸೆ ವೇಳೆ ನೀಡಿದ ರಕ್ತದಿಂದ ತಮಗೆ ಎಚ್‌ಐವಿ ಸೋಂಕು ತಗುಲಿದೆ ಎಂದು ಆರೋಪಿಸಿ ಮಹಿಳೆಯೊಬ್ಬರು ನೀಡಿದ್ದ ದೂರಿನ ಸಂಬಂಧ ಎಫ್‌ಐ‌ಆರ್ ದಾಖಲಿಸಲು ವಿಳಂಬ ಮಾಡಿರುವ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಒಂದೇ ಸಿರಿಂಜು ಚುಚ್ಚಿ, ಹಲವರಿಗೆ HIV ತಗುಲಿಸಿದ ನಕಲಿ ವೈದ್ಯ

ಪೊಲೀಸರು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಿದ್ದಕ್ಕೆ ಮತ್ತು ಮಡಿವಾಳ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಕುರಿತು ಸರ್ಕಾರಿ ವಕೀಲರನ್ನು ತರಾಟೆಗೆ ತೆಗೆದುಕೊಂಡ ಪೀಠ, ನೀವು ನೀಡುತ್ತಿರುವ ಸಮಜಾಯಿಷಿ ತೃಪ್ತಿಕರವಾಗಿಲ್ಲ. ಒಂದಕ್ಕೊಂದು ತಾಳೆಯಾಗದ ವಿವರಣೆ ನೀಡುತ್ತಿದ್ದೀರಿ. ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ, ವಸ್ತುನಿಷ್ಠವಾಗಿ ಮತ್ತು ಸಮರ್ಥಚಾಗಿ ನಡೆಯಬೇಕು. ಹೀಗಾಗಿ ಕೋರ್ಟ್ ಮೇಲ್ವಿಚಾರಣೆಯಲ್ಲಿ ಪ್ರಕರಣದ ತನಿಖೆ ನಡೆಯಲಿ. ಈ ಸಂಬಂಧ ಪ್ರತಿ 15 ದಿನಗಳಿಗೊಮ್ಮೆ ತನಿಖೆಯ ವರದಿಯನ್ನು ನ್ಯಾಯಾಲಯಕ್ಕೆ ನೀಡಬೇಕು ಎಂದು ಆದೇಶಿಸಿ ವಿಚಾರಣೆ ಮುಂದೂಡಿದೆ.

HC unhappy with police who delayed rigister FIR

ಲಕ್ಕಸಂದ್ರದ 45 ವರ್ಷದ ಮಹಿಳೆಯೊಬ್ಬರು ಪ್ರತಿಷ್ಠಿತ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ 2014ರಲ್ಲಿ ಚಿಕಿತ್ಸೆ ಪಡೆದಿದ್ದರು. ಈ ವೇಳೆ ಅವರಿಗೆ ರಕ್ತ ನೀಡಲಾಗಿತ್ತು. ಆಸ್ಪತ್ರೆಯಲ್ಲಿ ನೀಡಿದ ರಕ್ತದಿಂದ ನನಗೆ ಎಚ್ಐವಿ ಸೋಂಕು ತಗುಲಿದೆ ಎಂಬುದು ಮಹಿಳೆಯ ಆಕ್ಷೇಪಣೆ. ಈ ಕುರಿತಂತೆ ನಾನು ನೀಡಿದ ದೂರನ್ನು ಪೊಲೀಸರು ತಕ್ಷಣ ಸ್ವೀಕರಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ ಮತ್ತು ಎಫ್‌ಐಆರ್ ದಾಖಲಿಸಲು ವಿಳಂಬ ಮಾಡಲಾಗಿದೆ ಎಂದು ದೂರಿರುವ ಮಹಿಳೆ, ಈ ಕುರಿತು ಆಸ್ಪತ್ರೆ ಆಡಳಿತ ಮಂಡಳಿ ಮತ್ತು ಪೊಲೀಸರು ನನ್ನ ಅಹವಾಲಿಗೆ ಮಾನ್ಯತೆ ನೀಡುತ್ತಿಲ್ಲ. ಆದ್ದರಿಂದ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka High Court expressed its disappointment over police who were delayed in filling FIR against hospital authorities allegedly given wrong lab report to a lady.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ