ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಾನು ರಾಹುಲ್ ಭೇಟಿಗೆ ಹೋಗುತ್ತಿಲ್ಲ: ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಅ.4: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿ ಮಾಡಲು ದೆಹಲಿಗೆ ಹೋಗುತ್ತಿಲ್ಲ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಗುರುವಾರ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಚಿವ ಸಂಪುಟ ವಿಸ್ತರಣೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಜತೆ ಚರ್ಚೆ ನಡೆಸಲು ದೆಹಲಿಗೆ ತೆರಳುತ್ತಿದ್ದೇನೆ ಎನ್ನುವ ಮಾತು ಸುಳ್ಳು ನಾನು ರಾಹುಲ್ ಗಾಂಧಿಯನ್ನು ಭೇಟಿ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ರಾಮನಗರದಲ್ಲಿ ಸಿಎಂ ವಿರುದ್ಧವೇ ಗರಂ ಆದ ಜೆಡಿಎಸ್ ಕಾರ್ಯಕರ್ತರು ರಾಮನಗರದಲ್ಲಿ ಸಿಎಂ ವಿರುದ್ಧವೇ ಗರಂ ಆದ ಜೆಡಿಎಸ್ ಕಾರ್ಯಕರ್ತರು

ಗುರುವಾರ(ಅ.4) ಸಂಜೆ 7.30ಕ್ಕೆ ನವದೆಹಲಿಗೆ ತೆರಳಲಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಾಳೆ ಮತ್ತು ನಾಡಿದ್ದು ದೆಹಲಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಸಚಿವ ಹೆಚ್.ಡಿ ರೇವಣ್ಣ ಸಾಥ್ ನೀಡಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

HDK clarifies he will not meet Rahul in Delhi

ಈ ಕುರಿತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮಾದಾವರದಲ್ಲಿ ಪ್ರತಿಕ್ರಿಯಿಸಿರುವ ಸಿಎಂ ಹೆಚ್.ಡಿ ಕುಮಾರಸ್ವಾಮಿ, ನಾಳೆ ಕೆಲ ಕೇಂದ್ರ ಸಚಿವರನ್ನ ಭೇಟಿ ಮಾಡಲು ದೆಹಲಿಗೆ ತೆರಳುತ್ತಿದ್ದೇನೆ. ಸರ್ಕಾರಿ ಕೆಲಸದ ನಿಮಿತ್ತ ದೆಹಲಿಗೆ ಹೋಗುತ್ತಿದ್ದೇನೆ. ಈ ವೇಳೆ ಎಐಸಿಸಿ ಅಧ್ಯಕ್ಷರನ್ನ ಭೇಟಿ ಮಾಡುತ್ತಿಲ್ಲ ಎಂದು ತಿಳಿಸಿದರು.

ದೇವೇಗೌಡರು ಹಾಸನ ಬಿಡಲ್ಲ: ಜೆಡಿಎಸ್ ಗೆ 9 ಸೀಟು ತಪ್ಪಲ್ ದೇವೇಗೌಡರು ಹಾಸನ ಬಿಡಲ್ಲ: ಜೆಡಿಎಸ್ ಗೆ 9 ಸೀಟು ತಪ್ಪಲ್

ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಕಸರತ್ತು ನಡೆಯುತ್ತಿದ್ದು ಈ ಹಿನ್ನೆಲೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ನವದೆಹಲಿಗೆ ತೆರಳಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿತ್ತು.

English summary
Chief minister H.D.Kumaraswamy has clarified that he will not meet AICC president Rahul Gandhi during his visit to Delhi on Friday. He also said that he will meet union ministers to discuss about development works.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X