ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪಕ್ಷೇತರರ ಬೆಂಬಲ ವಾಪಸಾತಿಯಿಂದ ಸರ್ಕಾರಕ್ಕೆ ಏನೂ ಆಗಲ್ಲ: ಸಿಎಂ

|
Google Oneindia Kannada News

ಬೆಂಗಳೂರು, ಜನವರಿ 15: ಜೆಡಿಎಸ್ ಕಾಂಗ್ರೆಸ್ ಮೈತ್ರಿಕೂಡ ಸರ್ಕಾರಕ್ಕೆ ಇಬ್ಬರು ಪಕ್ಷೇತರರಿಬ್ಬರು ಬೆಂಬಲ ವಾಪಸ್ ಪಡೆದಿದ್ದಕ್ಕೆ ಯಾವುದೇ ಆತಂಕವಿಲ್ಲ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.

ಬ್ರೇಕಿಂಗ್ ನ್ಯೂಸ್ : ಇಬ್ಬರು ಶಾಸಕರಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಬ್ರೇಕಿಂಗ್ ನ್ಯೂಸ್ : ಇಬ್ಬರು ಶಾಸಕರಿಂದ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್

ನಾನೀಗ ನಿರಾಳನಾಗಿದ್ದೇನೆ, ನನ್ನ ಸರ್ಕಾರಕ್ಕೆ ಬೇಕಾದ ಶಾಸಕರ ಸಂಖ್ಯಾಬಲವಿದೆ, ನನ್ನ ನಿಜವಾದ ಶಕ್ತಿ ಏನೆಂಬುದು ನನಗೆ ಗೊತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.

HDK confident govt will safe even after independent MLAs withdrawn support

ಮುಳಬಾಗಿಲು ಕ್ಷೇತ್ರದ ಪಕ್ಷೇತರ ಶಾಸಕ ಎಚ್‌ ನಾಗೇಶ್ ಹಾಗೂ ರಾಣೆಬೆನ್ನೂರು ಕ್ಷೇತ್ರದ ಕೆಪಿಜೆಪಿ ಶಾಸಕ ಆರ್ ಶಂಕರ್ ತಮ್ಮ ಬೆಂಬಲ ವಾಪಸ್ ಪಡೆದ ಬೆನ್ನಲ್ಲೇ ಕೆಪಿಸಿಸಿ ಕರ್ನಾಟಕ ಉಸ್ತುವಾರಿ ಕೆಸಿ ವೇಣುಗೋಪಾಲ್ ತಂಗಿರುವ ಕುಮಾರಕೃಪಾ ಗೆಸ್ಟ್‌ಹೌಸ್‌ಗೆ ದಿಢೀರ್ ಧಾವಿಸಿದ ಕುಮಾರಸ್ವಾಮಿ ಈ ವೇಳೆ ಎದುರಾದ ಮಾಧ್ಯಮಗಳಿಗೆ ಉತ್ತರ ನೀಡುತ್ತಾ, ಇಬ್ಬರು ಶಾಸಕಉ ಬೆಂಬಲ ವಾಪಪಸ್ ಪಡೆದಿರುವುದರಿಂದ ಸರ್ಕಾರಕ್ಕೆ ಏನೂ ಆಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಂಬೈನ ಹೋಟೆಲ್‌ನಲ್ಲಿರುವ ಇಬ್ಬರು ಶಾಸಕರು ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ. ಆದ್ದರಿಂದ, ಸಂಜೆಯ ಹೊತ್ತಿಗೆ ಇಬ್ಬರು ಬೆಂಗಳೂರಿಗೆ ವಾಪಸ್ ಆಗುವ ಸಾಧ್ಯತೆ ಇದೆ.ಇಬ್ಬರು ಪಕ್ಷೇತರ ಶಾಸಕರು ಸರ್ಕಾರಕ್ಕೆ ನೀಡಿರುವ ಬೆಂಬಲ ವಾಪಸ್ ಪಡೆದಿದ್ದಾರೆ. ಬಿಜೆಪಿ ನಮ್ಮ ಶಾಸಕರಿಗೆ ಹಣ ಮತ್ತು ಅಧಿಕಾರದ ಆಮಿಷವೊಡ್ಡಿದೆ.

ಈ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನ ನಡೆಸಿದೆ. ಆದರೆ, ಸರ್ಕಾರ ಸುಭದ್ರವಾಗಿದೆ' ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಹೇಳಿದ್ದಾರೆ.

English summary
Karnataka CM HD Kumaraswamy on 2 Independent MLAs withdraw support from Karnataka government: If 2 MLAs withdraw their support, what will be the numbers? I'm totally relaxed. I know my strength. Whatever is going on in media in the past week, I am enjoying.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X