ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭತ್ತದ ಬೆಂಬಲ ಬೆಲೆ ಪರ್ಯಾಯ ಮಾರ್ಗಕ್ಕೆ ಸಿಎಂ ಕುಮಾರಸ್ವಾಮಿ ಸೂಚನೆ

|
Google Oneindia Kannada News

ಬೆಂಗಳೂರು, ಜನವರಿ 9: ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ವಯ ಅಕ್ಕಿ ಮಿಲ್‌ಗಳು ಠೇವಣಿ ಇಡುವುದಕ್ಕೆ ಪರ್ಯಾಯ ಉಪಾಯ ರೂಪಿಸುವ ಕುರಿತು ಕೂಡಲೇ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.

ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸುವ ಕುರಿತು ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಮಿಲ್ ಮಾಲೀಕರ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು.

 ಭತ್ತದ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್‌ಗೆ 2 ಸಾವಿರ ರೂ.ನಂತೆ ಖರೀದಿ ಭತ್ತದ ಬೆಳೆಗಾರರಿಗೆ ಬಂಪರ್: ಕ್ವಿಂಟಾಲ್‌ಗೆ 2 ಸಾವಿರ ರೂ.ನಂತೆ ಖರೀದಿ

ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಮಾರ್ಗಸೂಚಿಗಳನ್ನು ಬದಲಿಸಿದ್ದು, ಇದರನ್ವಯ ರೈತರು ನೇರವಾಗಿ ಮಿಲ್ ಮಾಲೀಕರಿಗೆ ಭತ್ತ ನೀಡಬೇಕು. ಮಿಲ್‌ಗಳು ಭತ್ತದಿಂದ ಅಕ್ಕಿ ತಯಾರಿಸಿ, ಆಹಾರ್ ನಿಗಮದ ಮೂಲಕ ಅಕ್ಕಿ ಪೂರೈಸಬೇಕು.

HDK directed to search alternative for rice mill surety

ಈ ವಿಧಾನದಲ್ಲಿ ದಾಸ್ತಾನು ಮಾಡುವ ರೈತರ ಭತ್ತಕ್ಕೆ ಭದ್ರತೆಯಾಗಿ ಮಿಲ್ ಮಾಲೀಕರು ಠೇವಣಿ ಇಡಬೇಕು ಎಂದು ಸೂಚಿಸಲಾಗಿದೆ.

ಆದರೆ ಮಿಲ್ ಮಾಲೀಕರು ಆರ್ಥಿಕವಾಗಿ ಸಂಕಷ್ಟದಲ್ಲಿರುವುದರಿಂದ ಹೆಚ್ಚಿನ ಮಿಲ್ ಮಾಲೀಕರು ಭತ್ತ ಖರೀದಿಗೆ ತಮ್ಮ ಮಿಲ್‍ಅನ್ನು ನೋಂದಾಯಿಸಲು ಅಸಹಾಯಕರಾಗಿದ್ದು, ಇದರ ಬದಲಿಗೆ ಪರ್ಯಾಯವಾಗಿ ಆಸ್ತಿ ಅಡಮಾನ, ಪೋಸ್ಟ್ ಡೇಟೆಡ್ ಚೆಕ್ ಪಡೆಯುವುದು ಅಥವಾ ಇನ್ನಾವುದೇ ಮಾರ್ಗೋಪಾಯ ಸೂಚಿಸುವಂತೆ ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ತಿಳಿಸಿದರು.

 ಭತ್ತ ಚೆಲ್ಲಿಕೆ: ಹೆಚ್ಚಿನ ಇಳುವರಿಗೆ ಹುಣಸೂರು ರೈತರ ಹೊಸ ವಿಧಾನ ಭತ್ತ ಚೆಲ್ಲಿಕೆ: ಹೆಚ್ಚಿನ ಇಳುವರಿಗೆ ಹುಣಸೂರು ರೈತರ ಹೊಸ ವಿಧಾನ

ಇದಲ್ಲದೆ ಮಿಲ್ ಮಾಲೀಕರ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆಯೂ ಸೂಚಿಸಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಸಣ್ಣ ನೀರಾವರಿ ಸಚಿವ ಸಿ.ಎಸ್. ಪುಟ್ಟರಾಜು, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೆಗೌಡ, ವಿಧಾನಸಭಾ ಸದಸ್ಯ ಸಿ.ಎನ್. ಬಾಲಕೃಷ್ಣ, ಆಹಾರ ಇಲಾಖೆಯ ಅಧಿಕಾರಿಗಳು ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

English summary
Chief minister HD Kumaraswamy directed to state machinary to find out alternative method for giving surity by rice mills for paddy purchase.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X