ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಕುಮಾರಬಾಣ

|
Google Oneindia Kannada News

Recommended Video

ಬೆಂಗಳೂರಿನ ಟ್ರಾಫಿಕ್ ಜಾಮ್ ಸಮಸ್ಯೆ ನಿವಾರಣೆಗೆ ಕುಮಾರ ಸ್ವಾಮಿ ಪ್ಲಾನ್ | Oneindia Kannada

ಬೆಂಗಳೂರು, ಅಕ್ಟೋಬರ್ 23: ರಾಜ್ಯ ಜೆಡಿಎಸ್ -ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ 150 ದಿನಗಳನ್ನು ಪೂರೈಸಿದ್ದು, ಐದು ತಿಂಗಳ ಆಡಳಿತದ ಒಂದು ಅವಲೋಕನ ಮಾಡಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಏನೇನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ರಸ್ತೆಗಳ ದುರಸ್ತಿ, ಅಭಿವೃದ್ಧಿ, ಮೇಲು ಸೇತುವೆ ನಿರ್ಮಾಣ, ಮೆಟ್ರೋ ಮೂರನೇ ಹಂತದ ಯೋಜನೆಯ ಕಾರ್ಯಸಾಧ್ಯತೆ ಪರಿಶೀಲನೆ, ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಯೋಜನೆಯಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ಪೆರಿಫೆರಲ್ ರಸ್ತೆ: ದಶಕದ ಬಳಿಕ ಕಡತದ ಧೂಳು ಝಾಡಿಸಿದ ಸರ್ಕಾರ ಪೆರಿಫೆರಲ್ ರಸ್ತೆ: ದಶಕದ ಬಳಿಕ ಕಡತದ ಧೂಳು ಝಾಡಿಸಿದ ಸರ್ಕಾರ

ಈಗಾಗಲೇ ಬೆಂಗಳೂರು ರಸ್ತೆಗಳು ಸೇರಿದಂತೆ ವಿವಿಧ ಕಾರ್ಯಗಳ ಕುರಿತು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಖದ್ದು ಸ್ಥಳಗಳಿಗೆ ಭೇಟಿ ನೀಡಿ ಅಧಿಕಾರಿಗೆ ಚುರುಕು ಮುಟ್ಟಿಸಿದ್ದಾರೆ.

HDK has many projects to curb Bengaluru civic issues

ಬೆಂಗಳೂರು ನಗರದ ಸಂಚಾರ ದಟ್ಟಣೆ ಕಡಿಮಗೊಳಿಸುವ 1450 ಕೋಟಿ ರೂ ಅಂದಾಜು ವೆಚ್ಚದಲ್ಲಿ ಒಟ್ಟು 102 ಕಿಲೋಮೀಟರ್ ಉದ್ದದ ಆರು ಕಾಡಿಡಾರ್ ಐದು ಹಂತಗಳಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ.

ಈ ಯೋಜನೆಯ ಅನ್ವಿರಾನ್‌ಮೆಂಟ್ ಇಂಪ್ಯಾಕ್ಟ್ ಅಸೆಸ್ ಮೆಂಟ್ ವರದಿ ತಯಾರಿಸಲಾಗುತ್ತಿದೆ, ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗುವುದು, ನಂತರವೇ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫೆರಲ್ ರಿಂಗ್ ರಸ್ತೆ! ತುಮಕೂರು ರಸ್ತೆಯಿಂದ ಹೊಸೂರು ರಸ್ತೆವರೆಗೆ ಪೆರಿಫೆರಲ್ ರಿಂಗ್ ರಸ್ತೆ!

ಸುಮಾರು 6500 ಕೋಟಿ ರೂ. ವೆಚ್ಚದಲ್ಲಿ ಪೆರಿಫೆರಲ್ ರಿಂಗ್ ರಸ್ತೆ ನಿರ್ಮಿಸಲು ಉದ್ದೇಶಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಉದ್ದೇಶಿಸಿದೆ. ಈ ಯೋಜನೆಗೆ ಹೈಬ್ರಿಡ್ ಆನ್ಯುಟಿ ಮಾದರಿಯಲ್ಲಿ ಸಂಪನ್ಮೂಲ ಕ್ರೋಢೀಕರಣ ಮಾಡಲಾಗುವುದು.

ತಿಂಗಳೊಳಗೆ ಎಲಿವೇಟೆಡ್ ಪೆರಿಫೆರಲ್ ರಸ್ತೆ ಕಾಮಗಾರಿ: ಎಚ್ಡಿಕೆ ಘೋಷಣೆತಿಂಗಳೊಳಗೆ ಎಲಿವೇಟೆಡ್ ಪೆರಿಫೆರಲ್ ರಸ್ತೆ ಕಾಮಗಾರಿ: ಎಚ್ಡಿಕೆ ಘೋಷಣೆ

ಭೂಸ್ವಾಧೀನ ಪ್ರಕ್ರಿಯೆಗೆ ಇಂದು ಅತಿ ಹೆಚ್ಚು ಅನುದಾನ ಅಗತ್ಯವಿದೆ. ಇದನ್ನು ಕಡಿಮೆಗೊಳಿಸಲು ಇರುವ ವಿವಿಧ ಸಾಧ್ಯತೆಗಳನ್ನು ಪರಿಶೀಲಿಸಲಾಗುತ್ತಿದೆ. ಮುಂದಿನ ಮೂರು ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆಗೆ ಚಾಲನೆ ನೀಡಲಾಗುವುದು. ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಇರುವ ಅಡೆತಡೆಗಳನ್ನು ನಿವಾರಿಸಲು ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

English summary
Chief minister H.D.Kumaraswamy has affirmed many projects to address many issues like traffic jam, garbage, housing and etc.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X