ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯದ ಕೆರೆಗಳ ಅಭಿವೃದ್ಧಿ: ಸಿಎಂ ಸುಳಿವು

By Nayana
|
Google Oneindia Kannada News

ಬೆಂಗಳೂರು, ಆಗಸ್ಟ್ 6: ರಾಜ್ಯದ ಕೆರೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡೆಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತಿಳಿಸಿದರು.

ರಾಜ್ಯದ ಕೆರೆಗಳನ್ನು ಸಂರಕ್ಷಿಸಿ ಅಭಿವೃದ್ಧಿ ಪಡಿಸುವ ಕುರಿತು ಸಮಗ್ರ ಯೋಜನೆ ರೂಪಿಸಿ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಎತ್ತಿನಹೊಳೆ ಯೋಜನೆಯಡಿ 527 ಕೆರೆ ಭರ್ತಿಗೆ ಎಚ್ಡಿಕೆ ಸೂಚನೆ ಎತ್ತಿನಹೊಳೆ ಯೋಜನೆಯಡಿ 527 ಕೆರೆ ಭರ್ತಿಗೆ ಎಚ್ಡಿಕೆ ಸೂಚನೆ

ಸಭೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಹಾಗೂ ಅಭಿವೃದ್ಧಿ ಪ್ರಾಧಿಕಾರದ ಕಾರ್ಯನಿರ್ವಹಣೆ ಕುರಿತು ಚರ್ಚಿಸಲು ಕರೆದಿದ್ದ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದರು. ರಾಜ್ಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶದ ಕೆರೆಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಖುದ್ದು ಆಸಕ್ತಿ ವಹಿಸುವುದಾಗಿ ಹೇಳಿದರು.

HDK indicates govt will seek private fund for lakes development

ಹೂಳೆತ್ತುವ ಹೆಸರಲ್ಲಿ ಅನುದಾನ ದುರುಪಯೋಗ ಆಗಬಾರದು. ಕೆರೆಗಳ ಸಂಗ್ರಹಣಾ ಸಾಮರ್ಥ್ಯ ಹೆಚ್ಚಳವಾಗಬೇಕು ಎಂದು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಣ್ಣ ನೀರಾವರಿ ಸಚಿವ ಇಲಾಖೆಯನ್ನು ಬಲಪಡಿಸಿ ಕೆರೆಗಳ ನಿರ್ವಹಣೆಗೆ ಆದ್ಯತೆ ನೀಡಬೇಕಾಗಿದೆ ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.

ಸಭೆಯಲ್ಲಿ ಕಂದಾಯ ಸಚಿವ ಆರ್.ವಿ. ದೇಶಪಾಂಡೆ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್, ಕೃಷಿ ಸಚಿವ ಎನ್.ಎಚ್. ಶಿವಶಂಕರ ರೆಡ್ಡಿ, ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ, ಅರಣ್ಯ ಸಚಿವ ಶಂಕರ್ ಮೊದಲಾದವರು ಉಪಸ್ಥಿತರಿದ್ದರು.

English summary
Chief minister H.D. Kumaraswamy has indicated that the state government will seek private fund to develop lakes in the state. He was reviewing lake development authority activities on Tuesday in Vidhana Soudha.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X