ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿಗರು ಟೀಕೆಯಲ್ಲೇ ಕಾಲ ದೂಡುತ್ತಿದ್ದಾರೆ: ಎಚ್‌ಡಿಕೆ ವಾಗ್ದಾಳಿ

By Nayana
|
Google Oneindia Kannada News

ಬೆಂಗಳೂರು, ಮೇ 24: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಹೆಚ್.ಡಿ ಕುಮಾರಸ್ವಾಮಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿಯನ್ನು ಮುಂದುವರೆಸಿದ್ದು, ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲ ದೂಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಗುರುವಾರ ಬೆಳಿಗ್ಗೆ ಬೆಂಗಳೂರಿನಲ್ಲಿ ಪಟ್ಟನಾಯಕನಹಳ್ಳಿ ನಂಜಾವಧೂತ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಂತರ ಮಾತನಾಡಿದ ಅವರು, ಬಿಜೆಪಿ ನಾಯಕರು ನಮ್ಮ ಮೇಲೆ ಟೀಕೆ ಮಾಡುವುದನ್ನ ಬಿಡಬೇಕು ಅದರಲ್ಲೇ ಕಾಲ ಕಳೆಯಬಾರದು ಎಂದು ಟಾಂಗ್ ನೀಡಿದರು.

ಕೃಷ್ಣಾದಲ್ಲಿ ಮುಖ್ಯಮಂತ್ರಿ ಭೇಟಿಗೆ ಸಾರ್ವಜನಿಕರಿಗೆ ಅವಕಾಶ!ಕೃಷ್ಣಾದಲ್ಲಿ ಮುಖ್ಯಮಂತ್ರಿ ಭೇಟಿಗೆ ಸಾರ್ವಜನಿಕರಿಗೆ ಅವಕಾಶ!

ಇನ್ನು ಸಾಲ ಮನ್ನಾ ಬಗ್ಗೆ ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ. ಈ ಬಗ್ಗೆ ಅನುಮಾನ ಬೇಡ, ಪ್ರತಿಜ್ಞಾ ವಿಧಿ ಕಾರ್ಯಕ್ರಮ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದರು.

HDK slams bjp leaders on criticism

ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ ಸಿಎಂ ಆದ ನಂತರ ತಂದೆ ಜೊತೆ ಮೊದಲ ಭೇಟಿ ಇದು ಸಾಕಷ್ಟು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ.ರಾಜಕೀಯ ವಿದ್ಯಾಮಾನಗಳ ಬಗ್ಗೆ ಸಲಹೆ ನೀಡಿದ್ದಾರೆ. ರಾಜ್ಯವನ್ನು ಅಭಿವೃದ್ಧಿ ಯತ್ತ ಕೊಂಡೊಯ್ಯುವುದು, ಜನರ ಹಿತಾಸಕ್ತಿ ಕಾಪಾಡುವುದು, ಸುಭದ್ರ ಸರ್ಕಾರ ನೀಡುವುದರ ಬಗ್ಗೆ ಸಲಹೆ ನೀಡಿದ್ದಾರೆ.

ಇನ್ನು ರೈತರ ಸಾಲ ಮನ್ನಾ ವಿಚಾರದ ಕುರಿತು ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿಯವರು, ಕಾಂಗ್ರೆಸ್ ಮುಖಂಡರ ಜೊತೆ ಮಾತನಾಡಿ ಇದರ ಬಗ್ಗೆ ಶೀಘ್ರವೇ ಘೋಷಣೆಮಾಡುತ್ತೇನೆ ರೈತರ ಸಾಲ ಮನ್ನಾ ವಿಚಾರವೇ ನನ್ನ ಮೊದಲ ಆದ್ಯತೆ ಎಂದಿದ್ದಾರೆ.

English summary
Chief minister H.D. Kumar Swamy slammed Bjp leaders who criticizing him since days and said they are wasting their time.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X