ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
  • search

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಇನ್ನೆರಡು ದಿನ ಮುಂದುವರಿಯುವ ಸೂಚನೆ

Subscribe to Oneindia Kannada
For Quick Alerts
ALLOW NOTIFICATIONS
For Daily Alerts
        ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಇನ್ನೆರಡು ದಿನ ಮುಂದುವರಿಯುವ ಸೂಚನೆ

        ಬೆಂಗಳೂರು, ಸೆಪ್ಟೆಂಬರ್ 24: ಬೆಂಗಳೂರಿನಾದ್ಯಂತ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗಿನ ವರೆಗೂ ಸುರಿಯುತ್ತಲೇ ಇರುವ ಧಾರಾಕಾರ ಮಳೆಗೆ ರಾಜಧಾನಿ ತತ್ತರಿಸಿದೆ.ಉದ್ಯಾನ ನಗರಿಯಲ್ಲಿ ವರುಣನ ಆರ್ಭಟ ಇನ್ನೆರಡು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

        ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರಿತಪಿಸುವಂತಾಗಿದೆ. ಮೆಜೆಸ್ಟಿಕ್ ರಾಜಾಜೀನಗರ, ಮಲ್ಲೇಶ್ವರಂ ಮುಂತಾದ ನಗರದ ಹೃದಯ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.

        ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ

        ಮಡಿವಾಳ, ಬೊಮ್ಮನಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ.

        Heavy rain in Bengaluru continuing Monday also

        ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ್ದರಿಂದ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳುವ ಸೂಚನೆ ಇದೆ ಎಂದು ಈ ಮೊದಲೇ ಹವಾಮಾನ ಇಲಾಖೆ ಹೇಳಿತ್ತು. ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಲ್ಲೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

        ಅದರಂತೆ ಬಳ್ಳಾರಿಯಲ್ಲೂ ಧಾರಾಕಾರ ಮಳೆ ಸುರಿದಿದೆ. ಮೈಸೂರು, ಮಡಿಕೇರಿಯಲ್ಲೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರು

        ಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರು

        ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ತಾಪಮಾನ 31 ಡಿಗ್ರಿ ಸೆಲ್ಷಿಯಸ್ ತಲುಪಿದ್ದು, ಬಿಸಿಲ ಧಗೆ ಏರಿ ಜನರು ಪರಿತಪಿಸುವಂತಾಗಿತ್ತು. ನಿನ್ನೆ ಸುರಿದ ಧಾರಾಕಾರ ಮಳೆಗೆ ರಾಜಧಾನಿ ತಂಪಾಗಿದೆ.

        ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

        English summary
        Heavy rain lashes Bengaluru. It is raining in city since sunday night and it is continuing monday morning also.

        Oneindia ಬ್ರೇಕಿಂಗ್ ನ್ಯೂಸ್,
        ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

        X
        We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more