ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಇನ್ನೆರಡು ದಿನ ಮುಂದುವರಿಯುವ ಸೂಚನೆ

|
Google Oneindia Kannada News

Recommended Video

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಇನ್ನೆರಡು ದಿನ ಮುಂದುವರಿಯುವ ಸೂಚನೆ

ಬೆಂಗಳೂರು, ಸೆಪ್ಟೆಂಬರ್ 24: ಬೆಂಗಳೂರಿನಾದ್ಯಂತ ಭಾನುವಾರ ರಾತ್ರಿಯಿಂದ ಸೋಮವಾರ ಬೆಳಗ್ಗಿನ ವರೆಗೂ ಸುರಿಯುತ್ತಲೇ ಇರುವ ಧಾರಾಕಾರ ಮಳೆಗೆ ರಾಜಧಾನಿ ತತ್ತರಿಸಿದೆ. ಉದ್ಯಾನ ನಗರಿಯಲ್ಲಿ ವರುಣನ ಆರ್ಭಟ ಇನ್ನೆರಡು ದಿನ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ಪರಿತಪಿಸುವಂತಾಗಿದೆ. ಮೆಜೆಸ್ಟಿಕ್ ರಾಜಾಜೀನಗರ, ಮಲ್ಲೇಶ್ವರಂ ಮುಂತಾದ ನಗರದ ಹೃದಯ ಭಾಗದಲ್ಲಿ ಭಾರೀ ಮಳೆ ಸುರಿದಿದ್ದು, ರಸ್ತೆಯಲ್ಲಿ ನೀರು ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ

ಮಡಿವಾಳ, ಬೊಮ್ಮನಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮಳೆ ಎಡಬಿಡದೆ ಸುರಿಯುತ್ತಿದೆ.

Heavy rain in Bengaluru continuing Monday also

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ್ದರಿಂದ ಬೆಂಗಳೂರಿನಲ್ಲಿ ಭಾರೀ ಮಳೆ ಬೀಳುವ ಸೂಚನೆ ಇದೆ ಎಂದು ಈ ಮೊದಲೇ ಹವಾಮಾನ ಇಲಾಖೆ ಹೇಳಿತ್ತು. ಬೆಂಗಳೂರು ಮಾತ್ರವಲ್ಲದೆ ಉತ್ತರ ಕರ್ನಾಟಕ ಭಾಗದಲ್ಲೂ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತು.

ಅದರಂತೆ ಬಳ್ಳಾರಿಯಲ್ಲೂ ಧಾರಾಕಾರ ಮಳೆ ಸುರಿದಿದೆ. ಮೈಸೂರು, ಮಡಿಕೇರಿಯಲ್ಲೂ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.ಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರು

ಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರುಬೆಂಗಳೂರಲ್ಲಿ 31 ಡಿಗ್ರಿ ತಲುಪಿದ ಉಷ್ಣಾಂಶ: ಬಸವಳಿದ ಜನರು

ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ತಾಪಮಾನ 31 ಡಿಗ್ರಿ ಸೆಲ್ಷಿಯಸ್ ತಲುಪಿದ್ದು, ಬಿಸಿಲ ಧಗೆ ಏರಿ ಜನರು ಪರಿತಪಿಸುವಂತಾಗಿತ್ತು. ನಿನ್ನೆ ಸುರಿದ ಧಾರಾಕಾರ ಮಳೆಗೆ ರಾಜಧಾನಿ ತಂಪಾಗಿದೆ.

English summary
Heavy rain lashes Bengaluru. It is raining in city since sunday night and it is continuing monday morning also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X