ವಾರಾಂತ್ಯದ ಮಳೆಗೆ ಕಂಗಾಲಾದ ಬೆಂಗಳೂರಿಗರು, ನೆಲ ಕಂಡ ಮರಗಳು
ಬೆಂಗಳೂರಿನಲ್ಲಿ ಶನಿವಾರ ಸಂಜೆಯಿಂದ ಭಾರೀ ಮಳೆಯಾಗಿದೆ. ಜತೆಗೆ ಬಿರುಗಾಳಿಯೂ ಬೀಸಿ ಹಲವೆಡೆ ವಿದ್ಯುತ್ ವ್ಯತ್ಯಯವಾಗಿದೆ. ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕೆ ಉರುಳಿವೆ
ಬೆಂಗಳೂರು, ಮೇ 20: ಬೆಂಗಳೂರಿನಲ್ಲಿ ಶನಿವಾರ ಸಂಜೆ ಸುರಿದ ನಂತರ ಮಳೆಗೆ ವಾರಾಂತ್ಯದ ಸಂಭ್ರಮದಲ್ಲಿದ್ದವರಿಗೆ ಒಂದಿಷ್ಟು ಸಮಸ್ಯೆಗಳಾಗಿವೆ. ಆರ್ ಟಿ ನಗರ, ಲಗ್ಗೆರೆ, ಯಶವಂತಪುರ, ಕಾರ್ಪೋರೇಷನ್, ಜಯನಗರ, ಬಸವನಗುಡಿ, ಶ್ರೀನಿವಾಸನಗರ, ಬ್ಯಾಂಕ್ ಕಾಲೋನಿ ಸೇರಿದಂತೆ ಹಲವೆಡೆ ಬಿರುಗಾಳಿ ಸಹಿತ ಮಳೆ ಸುರಿದಿದೆ.
ಆರ್ ಟಿ ನಗರ-ಮಠದಹಳ್ಳಿ ರಸ್ತೆಯಲ್ಲಿ ವಿದ್ಯುತ್ ಕಂಬ ರಸ್ತೆಗೆ ಉರುಳಿ, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಇನ್ನು ಬಿರುಗಾಳಿ-ಮಳೆಗೆ ಹಲವು ಕಡೆ ಮರಗಳು ನೆಲಕ್ಕೆ ಉರುಳಿವೆ. ತಗ್ಗಿನ ಪ್ರದೇಶದ ಮನೆಗಳಿಗೆ, ಕೆಲವು ಕೊಳಗೇರಿಯಲ್ಲಿ ನೀರು ನುಗ್ಗಿ ಜನರು ಪರದಾಡುವಂತಾಗಿದೆ. ಅದರಲ್ಲೂ ರಸ್ತೆಗಳಲ್ಲಿ ಸಾಲುಗಟ್ಟಿರುವ ವಾಹನಗಳು ಕಾಣುತ್ತಿವೆ.[ರಾಜ್ಯದ ಹಲವೆಡೆ ಮಳೆ, ಸಿಡಿಲಿಗೆ ಸಿಡಿಮದ್ದು ಸಿಡಿದು ಬೆಂಗಳೂರಲ್ಲಿ ಇಬ್ಬರು ಸಾವು]

ಸದಾಶಿವನಗರ, ಡಾಲರ್ಸ್ ಕಾಲೋನಿ, ಸಂಜಯನಗರ ಸೇರಿದಂತೆ ಹಲವು ಕಡೆ ಮರಗಳು ಉರುಳಿದ್ದು, ತೆರವು ಕಾರ್ಯಾಚರಣೆ ನಡೆಯುತ್ತಿದೆ. ರಾಜಾಜಿನಗರದ ರಾಜ್ ಕುಮಾರ್ ರಸ್ತೆ, ಆರಿ ಟಿ ನಗರ ಪೊಲೀಸ್ ಠಾಣೆ ಬಳಿ ಕೂಡ ಮರಗಳು ನೆಲಕ್ಕೆ ಉರುಳಿವೆ. ಆದ್ದರಿಂದ ಮರದ ಕೆಳಗೆ ಆಶ್ರಯಕ್ಕೆಂದು ನಿಲ್ಲಬೇಡಿ. ಸಂಬಂಧಿಕರು, ಸ್ನೇಹಿತರು ಮನೆಯಿಂದ ಹೊರಕ್ಕೆ ಹೋಗಿದ್ದರೆ ಎಚ್ಚರಿಕೆಯಿಂದ ಇರಲು ತಿಳಿಸಿ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ











Click it and Unblock the Notifications