ಬೆಂಗಳೂರು ನಗರದಲ್ಲಿ ಧಾರಾಕಾರ ಮಳೆ ಆರಂಭ

Posted By: Gururaj
Subscribe to Oneindia Kannada

ಬೆಂಗಳೂರು, ಆಗಸ್ಟ್. 23 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಆರಂಭವಾಗಿದೆ. ಹಬ್ಬದ ಖರೀದಿಯಲ್ಲಿ ಬ್ಯುಸಿಯಾಗಿದ್ದ ಜನರು, ಊರಿಗೆ ತೆರಳಲು ಸಿದ್ಧರಾಗಿದ್ದ ಜನರಿಗೆ ಮಳೆ ಅಡ್ಡಿ ಉಂಟು ಮಾಡಿದೆ.

ಬೆಳ್ಳಂದೂರು ಕೆರೆ ಬಳಿ ಹೋಗಿದ್ದರೆ ಸರ್ಕಾರದ ಸಾಧನೆ ತಿಳಿಯುತ್ತಿತ್ತು!

Heavy rain lashes Bengaluru on August 23, 2017

ಬುಧವಾರ ಸಂಜೆ 7.30ರ ಸುಮಾರಿಗೆ ನಗರದ ವಿವಿಧ ಬಡಾವಣೆಗಳಲ್ಲಿ ಮಳೆ ಆರಂಭವಾಗಿದೆ. ಜಯನಗರ, ಬಸವನಗುಡಿ, ಬನಶಂಕರಿ ಮುಂತಾದ ಬಡಾವಣೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ.

ಕೆ.ಆರ್.ಮಾರುಕಟ್ಟೆ, ಶಿವಾನಂದ ವೃತ್ತ, ಮಲ್ಲೇಶ್ವರಂ, ಶಿವಾಜಿ ನಗರ, ಮಾಗಡಿ ರಸ್ತೆ, ವಿಜಯನಗರ, ಮೈಸೂರು ರಸ್ತೆ, ಶೇಷಾದ್ರಿಪುರಂ ಸೇರಿದಂತೆ ಹಲವು ಕಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ.

ಕೊಚ್ಚಿಹೋದ ಬೆಂಗಳೂರು, ಸರಕಾರದ ಇಂದಿರಾ ಕ್ಯಾಂಟೀನ್ ಧ್ಯಾನ

ಗೌರಿ-ಗಣೇಶ ಹಬ್ಬದ ಖರೀದಿಯಲ್ಲಿ ತೊಡಗಿದ್ದ ಜನರಿಗೆ ಮಳೆ ಅಡ್ಡಿ ಉಂಟು ಮಾಡಿದೆ. ಮತ್ತೊಂದು ಕಡೆ ಸಾಲು-ಸಾಲು ರಜೆ ಹಿನ್ನಲೆಯಲ್ಲಿ ಹೊರ ಊರುಗಳಿಗೆ ಹೊರಟಿದ್ದ ಜನರಿಗೆ ಮಳೆ ತೊಂದರೆ ಉಂಟು ಮಾಡಿದೆ.

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕೆಎಸ್ಆರ್‌ಟಿಸಿ ಒಂದು ಸಾವಿರ ಹೆಚ್ಚುವರಿ ಬಸ್ಸುಗಳ ವ್ಯವಸ್ಥೆ ಮಾಡಿದೆ. ಇಂದು ರಾತ್ರಿಯಿಂದ ಬಸ್ಸುಗಳು ಬೇರೆ-ಬೇರೆ ಜಿಲ್ಲೆಗಳು ಮತ್ತು ಹೊರ ರಾಜ್ಯಗಳಿಗೆ ತೆರಳಿದೆ. ಆದರೆ, ಮಳೆಯ ಕಾರಣ ವಾಹನ ಸಂಚಾರ ಮಂದಗತಿಯಲ್ಲಿದೆ.

ಗೌರಿ-ಗಣೇಶ ಹಬ್ಬ, ಕೆಎಸ್ಆರ್‌ಟಿಸಿಯಿಂದ 1000 ಹೆಚ್ಚುವರಿ ಬಸ್

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Heavy rains lashed several parts of Bengaluru on Wednesday evening.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ