ಹವಾಮಾನ ತಜ್ಞರ ಮಾನ ಉಳಿಸಿದ ಮಳೆರಾಯ!

Posted By: Gururaj
Subscribe to Oneindia Kannada

ಬೆಂಗಳೂರು, ಸೆಪ್ಟೆಂಬರ್ 08 : ಉದ್ಯಾನ ನಗರಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. 48 ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು.

ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಭಾರೀ ಮಳೆ ಆರಂಭವಾಗಿದೆ. ಜಯನಗರ, ಬಸವನಗುಡಿ, ಶಿವಾಜಿನಗರ, ಮಲ್ಲೇಶ್ವರಂ, ಜೆ.ಪಿ.ನಗರ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯ ಕಾರಣ ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ.

ರಾಜ್ಯದ ಜಲಾಶಯಗಳ ನೀರಿನ ಮಟ್ಟ

Heavy rain lashes Bengaluru on September 8, 2017

'ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಆದ್ದರಿಂದ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ' ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸುಂದರ್ ಮೇತ್ರಿ ಹೇಳಿದರು.

ಕೆರೆಯ ಹಾವನು ಕೆರೆಗೆ ಚೆಲ್ಲಿದ ಲಾಲ್ ಬಾಗ್

rain in bengaluru

* ಶಿವಾನಂದ ಸರ್ಕಲ್ ಬಳಿ ಒಂದು ಭಾಗದ ರಸ್ತೆ ಜಲಾವೃತವಾಗಿದೆ. ರಿಚ್ಮಂಡ್ ಸರ್ಕಲ್ ಕಾಫಿ ಡೇ ಬಳಿ ರಸ್ತೆಯಲ್ಲಿ ನೀರು ತುಂಬಿದ್ದು ವಾಹನ ಸಂಚಾರ ನಿಧಾನಗತಿಯಲ್ಲಿ ಸಾಗಿದೆ.

Heavy rain lashes Bengaluru on September 8, 2017

* ಮೆಜೆಸ್ಟಿಕ್ ಸುತ್ತ-ಮುತ್ತ ಭಾರೀ ಮಳೆಯಾಗುತ್ತಿದ್ದು, ಶೇಷಾದ್ರಿಪುರಂ ಅಂಡರ್‌ಪಾಸ್ ಬಳಿ ರಸ್ತೆಗಳು ಜಲಾವೃತವಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Heavy rains lashed Bengaluru on Friday, September 8, 2017 evening.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ