ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಕ್ಟೋಬರ್ 18ರ ತನಕ ಬೆಂಗಳೂರಲ್ಲಿ ಮಳೆ ಮುನ್ಸೂಚನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 16 : ಬೆಂಗಳೂರು ನಗರದಲ್ಲಿ ಅಕ್ಟೋಬರ್ 18ರ ತನಕ ಗುಡುಗು ಸಹಿತ ಮಳೆ ಮುಂದುವರೆಯಲಿದೆ. ನಗರದಲ್ಲಿ 174 ಪ್ರದೇಶಗಳನ್ನು ಪ್ರವಾಹ ಪೀಡಿತ ಎಂದು ಗುರುತಿಸಲಾಗುತ್ತದೆ.

ಎಕೋಸ್ಪೇಸ್ ಸರ್ವೀಸ್ ರಸ್ತೆಯಲ್ಲಿ ವಾಹನಕ್ಕಿಂತ ದೋಣಿಯೇ ಭೇಷ್ಎಕೋಸ್ಪೇಸ್ ಸರ್ವೀಸ್ ರಸ್ತೆಯಲ್ಲಿ ವಾಹನಕ್ಕಿಂತ ದೋಣಿಯೇ ಭೇಷ್

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ನಗರದಲ್ಲಿ ಅಕ್ಟೋಬರ್ 18ರ ತನಕ ಮಳೆ ಮುಂದುವರೆಯಲಿದೆ ಎಂದು ಹೇಳಿದೆ. ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಕೇಂದ್ರ ಮಾಹಿತಿ ನೀಡಿದೆ.

Heavy rain to continue till October 18 at Bengaluru city

ಬಂಗಾಳಕೊಲ್ಲಿ ಮತ್ತು ಅರಬ್ಬೀ ಸಮುದ್ರದ ಕೆಲವು ಭಾಗಗಳಲ್ಲಿ ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನಗಳ ಕಾಲ ಇದೇ ರೀತಿಯ ವಾತಾವರಣ ಮುಂದುವರೆಯಲಿದೆ.

ಬೆಂಗಳೂರು ಮಳೆಗೆ ಮತ್ತೊಂದು ಬಲಿ, ನೀರಿನಲ್ಲಿ ಕೊಚ್ಚಿ ಹೋದ ಬಾಲಕಿಬೆಂಗಳೂರು ಮಳೆಗೆ ಮತ್ತೊಂದು ಬಲಿ, ನೀರಿನಲ್ಲಿ ಕೊಚ್ಚಿ ಹೋದ ಬಾಲಕಿ

ಅಂಕಿ ಅಂಶಗಳ ಪ್ರಕಾರ ಅಕ್ಟೋಬರ್ 1ಕ್ಕೆ ಮುಂಗಾರು ಅಂತ್ಯವಾಗಿ ಹಿಂಗಾರು ಪ್ರಾರಂಭವಾಗಬೇಕು. ಆದರೆ, ನೈಋತ್ಯದ ಗಾಳಿ ಇನ್ನೂ ಪ್ರಬಲವಾಗಿ ಬೀಸುತ್ತಿದೆ. ಆದ್ದರಿಂದ, ಅಕ್ಟೋಬರ್ 18ರ ತನಕ ಗುಡುಗು ಸಹಿತ ಮಳೆ ಮುಂದುವರೆಯುವ ಮನ್ಸೂಚನೆ ನೀಡಲಾಗಿದೆ.

ಚಿತ್ರಗಳು: ಮತ್ತೆ ಇಂಥ ದೃಶ್ಯಗಳು ಬೆಂಗಳೂರಿನಲ್ಲಿ ಕಾಣಿಸದಿರಲಿ

ಪ್ರವಾಹ ಪೀಡಿತ ಪ್ರದೇಶ : ಬೆಂಗಳೂರು ನಗರದಲ್ಲಿ 174 ಪ್ರದೇಶಗಳನ್ನು ಪ್ರವಾಹ ಪೀಡಿತ ಎಂದು ಗುರುತಿಸಲು ನಿರ್ಧರಿಸಲಾಗಿದೆ. ಎಲ್ಲಿ ಮಳೆ ಹಾನಿ ಹೆಚ್ಚಾಗಿದೆ? ಎಂದು ಕಂದಾಯ ಇಲಾಖೆ ಅಧಿಕಾರಿಗಳು ನಿರ್ಧರಿಸಿ ಪ್ರವಾಹ ಪೀಡಿತ ಪ್ರದೇಶಗಳನ್ನು ಪಟ್ಟಿ ಮಾಡಲಿದ್ದಾರೆ.

ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮಳೆ ಮುನ್ಸೂಚನೆ, ಎಷ್ಟು ಮಳೆಯಾಗುತ್ತದೆ ಎನ್ನುವ ಕ್ಷಣ-ಕ್ಷಣದ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸುತ್ತದೆ. ಇದರಿಂದ ತಕ್ಷಣ ಕ್ರಮ ಕೈಗೊಳ್ಳಲು ಸಹಾಯಕವಾಗಲಿದೆ.

English summary
Karnataka State Natural Disaster Monitoring Centre (KSNDMC) said that, Heavy rain to continue till October 18, 2017 at Bengaluru city.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X