ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್‌ ಮೇಲೆ ಭಾರಿ ವಾಹನಗಳ ಸಂಚಾರ ನಿಷೇಧ

|
Google Oneindia Kannada News

ಬೆಂಗಳೂರು, ಡಿಸೆಂಬರ್ 17: ಎಲೆಕ್ಟ್ರಾನಿಕ್‌ ಸಿಟಿ ಎಲಿವೇಟೆಡ್ ಫ್ಲೈಓವರ್ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಎಲಿವೇಟೆಡ್ ಟೋಲ್ ವೇ ಲಿಮಿಟೆಡ್ ತಿಳಿಸಿದೆ.

ಸೋಮವಾರ ಸಂಜೆ 6 ಗಂಟೆಯ ಬಳಿಕ ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗುತ್ತಿದೆ.

ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ ಹೆಬ್ಬಾಳದ ಮೂಲಕವೇ ಕೆಂಪೇಗೌಡ ಏರ್‌ಪೋರ್ಟ್‌ಗೆ ನಮ್ಮ ಮೆಟ್ರೋ

ಕಾರು, ದ್ವಿಚಕ್ರವಾಹನಗಳು ಸೇರಿದಂತೆ ಲಘು ವಾಹನಗಳ ಸಂಚಾರ ಎಂದಿನಂತೆ ಇರುತ್ತದೆ. ಮರಳು, ಸಿಮೆಂಟ್ ಲಾರಿಗಳು, ದೊಡ್ಡ ಟ್ರಕ್ ಸೇರಿದಂತೆ ಕೇವಲ ಬೃಹತ್ ವಾಹನಗಳು ಸಂಚರಿಸುವಂತಿಲ್ಲ.

Heavy vehicles are banned on Electronic city Flyover

ಮೇಲ್ಸೇತುವೆ ಮೇಲಿನ ರಸ್ತೆ ಮತ್ತು ಜಾಯಿಂಟ್‍ಗಳ ನಿರ್ವಹಣೆ ಹಾಗೂ ಪಾಟ್ ಹೋಲ್ಸ್ ನಿರ್ವಹಣೆಯ ನಡೆಯಲಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಬ್ಬಾಳ ಜಂಕ್ಷನ್ ನಲ್ಲಿ ಸದ್ಯದಲ್ಲೇ ಮಿನಿ ಪಾರ್ಕ್ ನಿರ್ಮಾಣ! ಹೆಬ್ಬಾಳ ಜಂಕ್ಷನ್ ನಲ್ಲಿ ಸದ್ಯದಲ್ಲೇ ಮಿನಿ ಪಾರ್ಕ್ ನಿರ್ಮಾಣ!

ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್‌ಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ, ಈ ಸೇತುವೆ ನಿರ್ಮಾಣವಾಗಿ ಇದೀಗ ಎಂಟು ವರ್ಷಗಳು ಕಳೆದಿದ್ದರಿಂದ ನಿರ್ವಹಣೆಗಾಗಿ ಭಾರಿ ಗಾತ್ರದ ವಾಹನಗಳಿಗೆ ತಡೆ ಹೇರಲಾಗಿದೆ.

English summary
Elevated Toll Way limited said that Heavy vehicles are banned on Electronic city flyover on December 17 Monday Due to some maintenance work.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X