ಹೆಬ್ಬಾಳ ಶಾಸಕ ಜಗದೀಶ್ ಕುಮಾರ್ ಇನ್ನಿಲ್ಲ

ಬೆಂಗಳೂರು, ನವೆಂಬರ್ 23 : ಬೆಂಗಳೂರಿನ ಹೆಬ್ಬಾಳ ಕ್ಷೇತ್ರದ ಬಿಜೆಪಿ ಶಾಸಕ ಆರ್.ಜಗದೀಶ್ ಕುಮಾರ್ (58) ವಿಧಿವಶರಾಗಿದ್ದಾರೆ. ಸೋಮವಾರ ಸಂಜೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ.

ಸೋಮವಾರ ಬಿಜೆಪಿ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಬಳಿಕ ಜಗದೀಶ್ ಕುಮಾರ್ ಅವರು, ವಿಧಾನಸಭೆ ಕಲಾಪಕ್ಕೆ ಆಗಮಿಸಿದ್ದರು. ಎದೆ ನೋವು ಕಾಣಿಸಿಕೊಂಡ ಕಾರಣ ವಿಧಾನಸೌಧದಿಂದ ವಿಕ್ರಂ ಆಸ್ಪತ್ರೆ ತೆರಳಿದ್ದರು. ಹೃದಯಾಘಾತದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

jagadish kumar

ಮಾಜಿ ಸಚಿವ ಕಟ್ಟಾಸುಬ್ರಮಣ್ಯ ನಾಯ್ಡು ಅವರ ಪರಮಾಪ್ತರಾಗಿದ್ದ ಜಗದೀಶ್ ಕುಮಾರ್ ಅವರಿಗೆ 2013ರ ಚುನಾವಣೆಯಲ್ಲಿ ಬಿಜೆಪಿ ಹೆಬ್ಬಾಳ ಕ್ಷೇತ್ರದಿಂದ ಟಿಕೆಟ್ ನೀಡಿತ್ತು. 38,162 ಮತಗಳನ್ನು ಪಡೆದು ಅವರು ಮೊದಲ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. [2013ರ ಚುನಾವಣೆ ಸೋತವರು, ಗೆದ್ದವರು]

ಉತ್ತಮ ಸಂಸದೀಯ ಪಟು : ವಿಕ್ರಂ ಆಸ್ಪತ್ರೆಗೆ ಭೇಟಿ ನೀಡಿ ಜಗದೀಶ್ ಕುಮಾರ್ ಅವರ ಪಾರ್ಥೀವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 'ಜಗದೀಶ್ ಕುಮಾರ್ ಅವರು ಉತ್ತಮ ಸಂಸದೀಯ ಪಟುವಾಗಿದ್ದರು, ಕಾನೂನಿನ ಬಗ್ಗೆ ಅಪಾರ ಜ್ಞಾನ ಹೊಂದಿದ್ದರು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. ಅವರಿಗೆ ಉತ್ತಮ ಭವಿಷ್ಯವಿತ್ತು' ಎಂದು ಸಂತಾಪ ಸೂಚಿಸಿದ್ದಾರೆ.

ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಕೇಂದ್ರ ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ಮಾಜಿ ಸಚಿವ ಸಿ.ಟಿ.ರವಿ, ಸ್ಪೀಕರ್ ಕಾಗೋಡು ತಿಮ್ಮಪ್ಪ ಸೇರಿದಂತೆ ಹಲವಾರು ನಾಯಕರು ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿದರು.

ವಿಭಿನ್ನವಾಗಿ ಪ್ರತಿಭಟನೆ ಮಾಡುತ್ತಿದ್ದರು : ಅಧಿವೇಶನದಲ್ಲಿ ವಿನೂತನವಾಗಿ ಪ್ರತಿಭಟನೆ ನಡೆಸುವ ಮೂಲಕ ಜಗದೀಶ್ ಕುಮಾರ್ ಗಮನಸೆಳೆಯುತ್ತಿದ್ದರು. ಕಳೆದ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಕೊರಳಿಗೆ ಗಾಂಧಿ ಭಾವಚಿತ್ರವನ್ನು ನೇತು ಹಾಕಿಕೊಂಡು ಭಜನೆ ಮಾಡುತ್ತಾ ಸದನಕ್ಕೆ ಆಗಮಿಸಿ ಎಲ್ಲರ ಗಮನ ಸೆಳೆದಿದ್ದರು.

ಅಂದಹಾಗೆ ನವೆಂಬರ್ 17ರಂದು ಬೀದರ್ ಕ್ಷೇತ್ರದ ಕೆಜೆಪಿ ಶಾಸಕ ಮತ್ತು ಮಾಜಿ ಸಚಿವ ಗುರುಪಾದಪ್ಪ ನಾಗಮಾರಪಲ್ಲಿ ಅವರು ವಿಧಿವಶರಾಗಿದ್ದರು. ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ್ದ ಅವರು ಹೃದಯಾಘಾತದಿಂದಾಗಿ ಸಾವನ್ನಪ್ಪಿದ್ದರು. [ಗುರುಪಾದಪ್ಪ ನಾಗಮಾರಪಲ್ಲಿ ನಿಧನ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+