ಪ್ರತ್ಯೇಕ ಧರ್ಮ ವಿವಾದ: ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ

Posted By:
Subscribe to Oneindia Kannada

ಬೆಂಗಳೂರು, ಜನವರಿ 05: ಲಿಂಗಾಯತ ಪ್ರತ್ಯೇಕ ಧರ್ಮ ಕುರಿತಂತೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠವು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ ಹಾಗೂ ಅಲ್ಪ ಸಂಖ್ಯಾತ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.

ಪ್ರತ್ಯೇಕ ಧರ್ಮ ಕುರಿತು ರಾಜ್ಯ ಸರ್ಕಾರ ರಚಿಸಿರುವ ಸಮಿತಿಯನ್ನು ರದ್ದು ಮಾಡಲು ನಕಾರ ವ್ಯಕ್ತಪಡಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಸಮಿತಿಯು ಹೈಕೋರ್ಟ್‌ನ ಅಂತಿಮ ತೀರ್ಪನ್ನು ಪಾಲಿಸಬೇಕು ಎಂದಿದೆ. ಇದೇ ವಿಷಯವಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರಕ್ಕೆ ನೊಟೀಸ್ ಕಳಿಸಿದೆ.

ಧರ್ಮದ ಕುರಿತು ನಿರ್ಣಯ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರ ಇದೆಯೇ ಎಂದು ಹೈಕೋರ್ಟ್ ವಿಭಾಗೀಯ ಪೀಠ ಪ್ರಶ್ನಿಸಿದ್ದು, ಆ ಸಂಬಂಧ ಸ್ಪಷ್ಟೀಕರಣ ನೀಡುವಂತೆ ಅಲ್ಪಸಂಖ್ಯಾತ ಆಯೋಗಕ್ಕೆ ತುರ್ತು ನೊಟೀಸ್ ಕಳಿಸಿದೆ.

High Court Division bench issued notice to the Central and State government.

ಸರ್ಕಾರಗಳು ಧರ್ಮದ ವಿಷಯದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರ್ಕಾರವು ಸಮಾಜದ ಸ್ವಾಸ್ಥ್ಯ ಹಾಳಾಗುವಂತಹಾ ಯಾವುದೇ ನಿರ್ಣಯಗಳನ್ನು ಕೈಗೊಳ್ಳಬಾರದು ಎಂದು ಆತಂಕ ವ್ಯಕ್ತಪಡಿಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The High Court Division bench issued notice to the Central Government, State Government and the Minorities Commission in Lingayatha separate religion issue.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ