ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೊಹಮ್ಮದ್ ನಲಪಾಡ್‌ಗೆ ಮಾ.14ರ ತನಕ ಬಿಡುಗಡೆ ಭಾಗ್ಯವಿಲ್ಲ

|
Google Oneindia Kannada News

ಬೆಂಗಳೂರು, ಮಾರ್ಚ್ 12 : ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್‌ಗೆ ಮಾರ್ಚ್ 14ರ ತನಕ ಬಿಡುಗಡೆ ಭಾಗ್ಯವಿಲ್ಲ. ಕರ್ನಾಟಕ ಹೈಕೋರ್ಟ್ ಜಾಮೀನು ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿದ್ದು, ತೀರ್ಪನ್ನು ಕಾಯ್ದಿರಿಸಿದೆ.

ಕರ್ನಾಟಕ ಹೈಕೋರ್ಟ್‌ನಲ್ಲಿ ಸೋಮವಾರ ಮೊಹಮ್ಮದ್ ನಲಪಾಡ್ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ನಲಪಾಡ್ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು. ಇದು ಕೊಲೆ ಯತ್ನದ ಪ್ರಯತ್ನವಲ್ಲ. ಸಾಮಾನ್ಯ ಪ್ರಕರಣ ಎಂದು ವಾದ ಮಂಡಿಸಿದರು.

ವಿದ್ವತ್ ಮೇಲೆ ಹಲ್ಲೆ : ಮೊಹ್ಮಮದ್ ನಲಪಾಡ್ ಹೇಳಿದ ಘಟನೆಯ ವಿವರವಿದ್ವತ್ ಮೇಲೆ ಹಲ್ಲೆ : ಮೊಹ್ಮಮದ್ ನಲಪಾಡ್ ಹೇಳಿದ ಘಟನೆಯ ವಿವರ

ವಿದ್ವತ್ ಫರ್ಜಿ ಕೆಫೆಯಲ್ಲಿ ಇದ್ದಾನೆ ಎಂಬುದು ನಲಪಾಡ್‌ಗೆ ತಿಳಿದಿರಲಿಲ್ಲ. ಹಲ್ಲೆ ಮಾಡಲು ಇವರು ಆಯುಧಗಳನ್ನು ತೆಗೆದುಕೊಂಡು ಹೋಗಿರಲಿಲ್ಲ. ಕುಡಿದ ಮತ್ತಿನಲ್ಲಿ ನಡೆದ ಗಲಾಟೆ ಇದಾಗಿದೆ ಎಂದು ಸಿ.ವಿ.ನಾಗೇಶ್ ವಾದ ಮಂಡಿಸಿದರು.

High Court reserves order on Mohammed Nalapad bail application

ವಿದ್ವತ್ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಶ್ಯಾಮ ಸುಂದರ್ ವಾದ ಮಂಡನೆ ಮಾಡಿದರು. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ ಹರೀಶ್ ಕುಮಾರ್ ಅವರು ಅರ್ಜಿಯ ತೀರ್ಪನ್ನು ಕಾಯ್ದಿರಿಸಿದರು. ಮಾರ್ಚ್ 14ರ ಬುಧವಾರ ತೀರ್ಪು ಪ್ರಕಟವಾಗಲಿದೆ.

ವೈದ್ಯರಿಗೇ ತಿರುಗುಬಾಣವಾದ ವಿದ್ವತ್ ಡಿಸ್ಚಾರ್ಜ್ ವರದಿವೈದ್ಯರಿಗೇ ತಿರುಗುಬಾಣವಾದ ವಿದ್ವತ್ ಡಿಸ್ಚಾರ್ಜ್ ವರದಿ

ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ ಸೇರಿದಂತೆ 6 ಆರೋಪಿಗಳು ನ್ಯಾಯಾಂಗ ಬಂಧನಲ್ಲಿದ್ದಾರೆ. ಮಾರ್ಚ್ 21ರ ತನಕ ಆರೋಪಿಗಳ ನ್ಯಾಯಾಂಗ ಬಂಧನವನ್ನು ವಿಸ್ತರಣೆ ಮಾಡಲಾಗಿದೆ.

ಫೆ.17ರಂದು ಮೊಹಮ್ಮದ್ ನಲಪಾಡ್ ಮತ್ತು ಆತನ ಸ್ನೇಹಿತರು ಯು.ಬಿ.ಸಿಟಿಯ ಫರ್ಜಿ ಕೆಫೆಯಲ್ಲಿ ವಿದ್ವತ್ ಎಂಬ ಯುವಕನ ಮೇಲೆ ಹಲ್ಲೆ ಮಾಡಿದ್ದರು. ಎಲ್ಲರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಾಗಿದೆ.

English summary
Karnataka high court on Monday reserved its order on Mohammed Nalapad bail application. Verdict will be out on March 14, 2018. Mohammed Nalapad son of Shantinagar Congress MLA N.A.Haris in judicial custody.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X