ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೊಸ ವರ್ಷಾಚರಣೆಗೆ ಬೆಂಗಳೂರಿನ ಭದ್ರತೆ ಹೇಗಿದೆ?

|
Google Oneindia Kannada News

ಬೆಂಗಳೂರು, ಡಿ. 30 : 10 ವಾಚ್‌ ಟವರ್, ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಹೆಚ್ಚಿನ ಸಿಸಿಟಿವಿ ಕಣ್ಗಾವಲು, ವಾಚಿಂಗ್ ಟವರ್‌ಗೆ ನಿಯೋಜನೆಗೊಂಡ ಸಿಬ್ಬಂದಿಗೆ ಬಂದೂಕು, ಮೂರು ಸಲ ಪುಟ್‌ಪಾತ್‌ ಪರಿಶೀಲನೆ ಮುಂತಾದ ಕ್ರಮಗಳನ್ನು ಹೊಸ ವರ್ಷಾವರಣೆ ಹಿನ್ನಲೆಯಲ್ಲಿ ಬೆಂಗಳೂರು ಪೊಲೀಸರು ಕೈಗೊಂಡಿದ್ದಾರೆ.

ಚರ್ಚ್ ಸ್ಟ್ರೀಟ್‌ನಲ್ಲಿ ಭಾನುವಾರ ಬಾಂಬ್ ಸ್ಫೋಟಗೊಂಡ ಕಾರಣ ಈ ಬಾರಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಡಿ.31ರ ರಾತ್ರಿ 1 ಗಂಟೆಯ ತನಕ ಎಂಜಿ ರಸ್ತೆ ಮತ್ತು ಬ್ರಿಗೇಡ್‌ ರಸ್ತೆಯಲ್ಲಿ ಸಂಭ್ರಮಾಚರಣೆ ಮಾಡಲು ಅವಕಾಶ ಕಲ್ಪಿಸಲಾಗಿದೆ. [ಬೆಂಗಳೂರು ಬಾಂಬ್ ಸ್ಫೋಟ, ಮಹಿಳೆ ಬಲಿ]

mn reddi

ನಗರದಲ್ಲಿ ಕೈಗೊಂಡಿರುವ ಭದ್ರತಾ ಕ್ರಮಗಳ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ. ಪ್ರತಿ ವರ್ಷ ಮಾಡುತ್ತಿದ್ದ ಭದ್ರತೆಗಿಂತಲೂ ಈ ಬಾರಿ ಹೆಚ್ಚಿನ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಎಂ.ಎನ್.ರೆಡ್ಡಿ ಹೇಳಿದ್ದು, ಯಾವುದೇ ಆತಂಕವಿಲ್ಲದೆ ಸಂಭ್ರಮಾಚರಣೆ ಮಾಡುವಂತೆ ಅಭಯ ನೀಡಿದ್ದಾರೆ. [ನೂತನ ವರ್ಷಾಚರಣೆಯನ್ನು ಕೈಬಿಡುವುದೇ ಲೇಸಲ್ಲವೆ?]

ನಗರದಲ್ಲಿ ಸಂಭ್ರಮಾಚರಣೆ ನಡೆಯುವ ಪ್ರಮುಖ ಸ್ಥಳವಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಸ್ಫೋಟ ಸಂಭವಿಸಿದ ಚರ್ಚ್ ಸ್ಟ್ರೀಟ್‌ನಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಹೆಚ್ಚುವರಿಯಾಗಿ ವಿದ್ಯುತ್ ಕಂಬಗಳಿಗೆ ಸಿಸಿ ಟಿವಿಗಳನ್ನು ಅಳವಡಿಸಲಾಗಿದೆ. ವಾಚ್‌ ಟವರ್‌ಗಳನ್ನು ನಿರ್ಮಿಸಲಾಗಿದೆ. [1 ಗಂಟೆವರೆಗೆ ಮಾತ್ರ ಬಾರ್, ಹೋಟೆಲ್ ತೆರೆದಿಡಲು ಒಪ್ಪಿಗೆ]

ನಗರದ ಎಲ್ಲಾ ವಿಭಾಗದಲ್ಲೂ ಆಯಾ ವಿಭಾಗದ ಡಿಸಿಪಿಗಳು ಭದ್ರತೆಯ ಉಸ್ತುವಾರಿ ನೋಡಿಕೊಳ್ಳಲಿದ್ದಾರೆ. ಹೆಚ್ಚುವರಿ ಪೊಲೀಸ್ ಆಯುಕ್ತರು, ಜಂಟಿ ಪೊಲೀಸ್ ಆಯುಕ್ತರಿಗೂ ಸಹ ಒಂದೊಂದು ವಿಭಾಗಗಳ ಭದ್ರತೆಯ ಉಸ್ತುವಾರಿ ನೀಡಲಾಗಿದೆ.

security

10 ವಾಚ್‌ ಟವರ್ : ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್‌ನಲ್ಲಿ 10 ವಾಚಿಂಗ್ ಟವರ್ ನಿರ್ಮಾಣ ಮಾಡಲಾಗಿದೆ. ಹೆಚ್ಚುವರಿಯಾಗಿ 15 ಸಿಸಿಟಿವಿಗಳನ್ನು ಅಳವಡಿಸಲಾಗಿದೆ. ವಾಚಿಂಗ್ ಟವರ್‌ಗೆ ಇಬ್ಬರು ಪೊಲೀಸರನ್ನು ನಿಯೋಜನೆ ಮಾಡಲಾಗುತ್ತದೆ. ಒಬ್ಬರಿಗೆ ಬಂದೂಕು, ಮತ್ತೊಬ್ಬರಿಗೆ ನೈಟ್ ವಿಷನ್ ಕ್ಯಾಮೆರಾ ನೀಡಲಾಗುತ್ತಿದೆ.

ಎಂಜಿ ರಸ್ತೆಯಲ್ಲಿ 10 ಎಸಿಪಿ, 30 ಪೊಲೀಸ್ ಇನ್ಸ್‌ಪೆಕ್ಟರ್, 700 ಪೊಲೀಸ್ ಕಾನ್‌ಸ್ಟೆಬಲ್‌ಗಳನ್ನು ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ. ಹೊಸ ವರ್ಷವನ್ನು ಯಾವುದೇ ಆತಂಕವಿಲ್ಲದೆ ಆಚರಣೆ ಮಾಡಿ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

English summary
Security arrangement has been heightened in and around M.G. Road in Bengaluru city for New Year celebrations. 700 police personnel deployed to monitor law and order situation in M.G.Road.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X