ಬೆಂಗಳೂರು: ಹಿಟ್‌ ಆಂಡ್ ರನ್‌ಗೆ ಯುವಕರಿಬ್ಬರು ಬಲಿ

Posted By: Nayana
Subscribe to Oneindia Kannada

ಬೆಂಗಳೂರು, ಏಪ್ರಿಲ್ 10: ಹಿಟ್ ಆಂಡ್ ರನ್ ಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿ ಮುದ್ದಿನಪಾಳ್ಯದ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ಬೆಳಗ್ಗೆ ನಡೆದಿದೆ.

ಉಮೇಶ್(20) ಮತ್ತು ಗೌತಮ್(20) ಮೃತ ದುರ್ದೈವಿಗಳು. ಈ ಯುವಕರು ಬ್ಯಾಡರಹಳ್ಳಿಯ ವಿಘ್ನೇಶ್ವರ ನಗರದವರು ಎಂದು ತಿಳಿದುಬಂದಿದೆ. ಉಮೇಶ್ ಮತ್ತು ಗೌತಮ್ ಇಬ್ಬರು ಒಂದೇ ಪಲ್ಸರ್ ಬೈಕ್ ನಲ್ಲಿ ಹೋಗುತ್ತಿದ್ದರು. ಈ ವೇಳೆ ಮುದ್ದಿನಪಾಳ್ಯದ ಪೆಟ್ರೋಲ್ ಬಂಕ್ ಬಳಿ ವೇಗವಾಗಿ ಟಿಪ್ಪರ್ ಲಾರಿ ಬಂದು ಡಿಕ್ಕಿ ಹೊಡೆದಿದೆ.

Hit and run shatters two lives

ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಚಾಲಕ ಅಲ್ಲಿಂದ ಪರಾರಿಯಾಗಿದ್ದಾನೆ. ಘಟನೆ ನಡೆದ ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಚಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
A tipper lorry killed two youths in Hit and Run accident. This happened in Byadarahalli outskirts of Bengaluru Tuesday morning

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ