ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹದೇವ ಪ್ರಸಾದ್ ನಿಧನ: ಕಣ್ಣೀರಿಟ್ಟ ಸಿದ್ದರಾಮಯ್ಯ

By Ananthanag
|
Google Oneindia Kannada News

ಬೆಂಗಳೂರು, ಜನವರಿ 3: ಸಕ್ಕರೆ, ಸಹಕಾರಿ ಸಚಿವ ಎಚ್.ಎಸ್. ಮಹದೇವ ಪ್ರಸಾದ್ ನಿಧನ ಹೊಂದಿರುವ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದು, ಮಂಗಳವಾರ ಸರಕಾರಿ ರಜೆ ಘೋಷಣೆ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ವೈಯಕ್ತಿಕವಾಗಿ ನಮಗೆ ನಷ್ಟವಾಗಿದೆ, ಪಕ್ಷಕ್ಕೆ ನಷ್ಟವಾಗಿದೆ ಅವರೊಬ್ಬ ಸಜ್ಜನ ರಾಜಕಾರಣಿ ಎಂದು ಹನಿಗಣ್ಣಾದರು. ನಂತರ ಮೂರು ದಿನಗಳ ಕಾಲ ಶೋಕಾಚರಣೆ ಮತ್ತು ಮಂಗಳವಾರ ಸಾರ್ವತ್ರಿಕ ರಜಾ ಘೋಷಣೆ ಮಾಡಿದರು.[ಸಹಕಾರಿ ಸಚಿವ ಮಹದೇವ ಪ್ರಸಾದ್ ಹೃದಯಾಘಾತದಿಂದ ನಿಧನ]

siddaramaiah

ಸಚಿವ ಮಹದೇವ ಪ್ರಸಾದ್ ಮಿತ ಬಾಷಿಯಾಗಿದ್ದು, ಸೌಮ್ಯ, ಸಜನ ರಾಜಕಾರಣಿಯಾಗಿದ್ದರು. ಅವರು ಡಿಸೆಂಬರ್ 31 ರೊಂದು ನನ್ನೊಂದಿಗೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದರು. ಅವರದ್ದು ಮಾದರಿ ಕುಟುಂಬ ಒಬ್ಬನೇ ಮಗ, ಇತ್ತಿಚೆಗೆ ಮೊಮ್ಮೊಗ ಜನಿಸಿದ್ದ. ಪ್ರಸಾದ್ ಅವರು ಯಾರೋಂದಿಗೂ ಜಗಳವಾಡಿದ್ದೇ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.[ವ್ಯಕ್ತಿಚಿತ್ರ : ಸಜ್ಜನ ರಾಜಕಾರಣಿ ಎಚ್ ಎಸ್ ಮಹದೇವ ಪ್ರಸಾದ್]

ಅವರ ಸಾವಿನ ದುಃಖವನ್ನು ಸಹಿಸುವ ಶಕ್ತಿ ಅವರ ಕುಟುಂಬಕ್ಕೆ ನೀಡಲಿ, ಮಹದೇವ ಪ್ರಸಾದ್ ಅವರಿಗೆ ದೇವರು ಚಿರಶಾಂತಿ ನೀಡಲಿ ಎಂದು ಹೇಳಿದರು.

English summary
Cooperative Minister HS. Mahadev Prasad passes away.Laying tears Chief Minister Siddaramaiah on Tuesday declared a holiday, a three-day mourning ritual
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X