ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೊಲೀಸ್ ಪೇದೆಗಳಿಗೆ ಥಳಿಸಿದ ಹುನಗುಂದ ಶಾಸಕ

|
Google Oneindia Kannada News

ಬೆಂಗಳೂರು, ಜು. 2 : ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಂಗಳವಾರ ರಾತ್ರಿ ಕಾಶಪ್ಪನವರ್ ಮತ್ತು ಅವರ ಬೆಂಬಲಿಗರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರಕರಣವನ್ನು ದಾಖಲಿಸಲಾಗಿದೆ.

ಮಂಗಳವಾರ ರಾತ್ರಿ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ಯುಬಿ ಸಿಟಿಯ ಸ್ಕೈ ಬಾರ್ ನಲ್ಲಿ ಶಾಸಕ ವಿಜಯಾನಂದ ಕಾಶಪ್ಪನವರ್ ಮತ್ತು ಅವರ ಬೆಂಬಲಿಗರು ಹುಟ್ಟುಹಬ್ಬದ ಪಾರ್ಟಿ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಅವರ ಬೆಂಬಲಿಗರು ದಾಂಧಲೆ ನಡೆಸಿದ್ದಾರೆ.

Vijayanand Kashappanavar

ಸ್ಥಳಕ್ಕೆ ತೆರಳಿದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯ ಕಾನ್ಸ್ ಟೇಬಲ್ ಗಳಾದ ಕಿರಣ್ ಮತ್ತು ಪ್ರಶಾಂತ್ ನಾಯಕ್ ದಾಂಧಲೆ ಬಗ್ಗೆ ಪ್ರಶ್ನಿಸಿದ್ದಾರೆ ಮತ್ತು ಅದನ್ನು ಚಿತ್ರೀಕರಿಸಲು ಮುಂದಾಗಿದ್ದಾರೆ. ಇದರಿಂದ ಕೆರಳಿದ ಶಾಸಕರು ಮತ್ತು ಅವರ ಬೆಂಬಲಿಗರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. [ಪೊಲೀಸ್ ಪೇದೆ ಮೇಲೆ ಶಾಸಕ ಭೈರತಿಯಿಂದ ಹಲ್ಲೆ]

ದೂರು ದಾಖಲು : ಶಾಸಕರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿದ ಇಬ್ಬರು ಪೊಲೀಸ್ ಪೇದೆಗಳು ಶಾಸಕರು ಮತ್ತು ಅವರ ಬೆಂಬಲಿಗರ ವಿರುದ್ಧ ಕಬ್ಬನ್ ಪಾರ್ಕ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆಯಲ್ಲಿ ಶಾಸಕರ ಪಾತ್ರವಿದ್ದರೆ, ಸರ್ಕಾರ ಮತ್ತು ಗೃಹ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಒತ್ತಾಯಿಸಿದ್ದಾರೆ. [ಶಾಸಕ ವಿಜಯಾನಂದ ಕಾಶಪ್ಪನವರಗೆ ಕ್ಲೀನ್ ಚಿಟ್]

ಶಾಸಕರ ಸ್ಪಷ್ಟನೆ : ಬುಧವಾರ ಮಧ್ಯಾಹ್ನ ಘಟನೆ ಕುರಿತು ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ವಿಜಯಾನಂದ ಕಾಶಪ್ಪನವರ್ ಘಟನೆಗೂ ನನಗೂ ಸಂಬಂಧವಿಲ್ಲ. ನಾನು ಕುಟುಂಬ ಸಮೇತವಾಗಿ ಊಟಕ್ಕೆಂದು ಹೋಗಿದ್ದೆವು. ಅಲ್ಲಿ ನನ್ನ ಬೆಂಬಲಿಗರು ಇರಲಿಲ್ಲ. ಈ ಘಟನೆಗೂ ನನಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೇಳಿದ್ದಾರೆ. [ಪೊಲೀಸರು ನಿಮ್ಮನ್ನು ಬಂಧಿಸಿದರೆ ಏನು ಮಾಡಬೇಕು?]

English summary
Bagalkot district Hungund constituency Congress MLA Vijayanand Kashappanavar and his supports beaten police constable on Tuesday, July 1 midnight in Bangalore. Case field against MLA in Cubbon Park Police Station.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X