ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಿಗಮ-ಮಂಡಳಿಗಳ ನೇಮಕದಲ್ಲಿ ನನ್ನ ಹಸ್ತಕ್ಷೇಪವಿಲ್ಲ: ಎಚ್‌ಡಿ ರೇವಣ್ಣ

|
Google Oneindia Kannada News

ಹಾಸನ, ಜನವರಿ 7: ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕದಲ್ಲಿ ನನ್ನ ಹಸ್ತಕ್ಷೇಪವಿಲ್ಲ ಎಂದು ಸಚಿವ ಎಚ್‌ಡಿ ರೇವಣ್ಣ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕ ವಿಚಾರದಲ್ಲಿ ನಾನು ತಲೆ ಹಾಕಿಲ್ಲ, ಅದನ್ನು ಜೆಡಿಎಸ್ ವರಿಷ್ಠರಾದ ದೇವೇಗೌಡರು ಹಾಗೂ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ತೆಗೆದುಕೊಂಡ ನಿರ್ಧಾರ ಅದು ಅವರಿಗೆ ಬಿಟ್ಟ ವಿಚಾರ ಎಂದು ಹೇಳಿದರು.

ನಿಗಮ ಮಂಡಳಿ ನೇಮಕ: ಕಾಂಗ್ರೆಸ್‌ಗೆ ಭಾರಿ ಶಾಕ್ ನೀಡಿದ ಕುಮಾರಸ್ವಾಮಿ ನಿಗಮ ಮಂಡಳಿ ನೇಮಕ: ಕಾಂಗ್ರೆಸ್‌ಗೆ ಭಾರಿ ಶಾಕ್ ನೀಡಿದ ಕುಮಾರಸ್ವಾಮಿ

ಸಚಿವ ಪುಟ್ಟರಂಗಶೆಟ್ಟಿ ಕುರಿತು ಮಾತನಾಡಿದ ಅವರು, ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗದ ನಾಯಕ. ವಿಧಾನಸೌಧದಲ್ಲಿ ಸಿಕ್ಕ ಹಣಕ್ಕೂ, ಅವರಿಗೂ ಯಾವುದೇ ಸಂಬಂಧವಿಲ್ಲ.

I am not interfered in Board and corporation appointment

ಯಾರಾದರೂ ಹಣ ತಂದು ಸಚಿವರ ಹೆಸರು ಹೇಳಿದರೆ. ಅದಕ್ಕೆ ಅವರೇಕೆ ಹೊಣೆಯಾಗುತ್ತಾರೆ. ಇದರ ಹಿಂದೆ ಯಾವುದೋ ಷಡ್ಯಂತ್ರ ಇದೆ ಎಂದು ರೇವಣ್ಣ ಪುಟ್ಟರಂಗಶೆಟ್ಟಿ ಪರ ಮಾತನಾಡಿದರು.

ಇದುವರೆಗೂ ನಾನು ನಿಗಮ ಮಂಡಳಿ ನೇಮಕವಾಗಲಿ ಅಥವಾ ಯಾವ ಖಾತೆಯಲ್ಲೂ ಹಸ್ತಕ್ಷೇಪ ಮಾಡಿಲ್ಲ, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಕೇಳಿದರೆ ಉತ್ತರಿಸುತ್ತೇನೆ ಎಂದರು.

ಕಾಂಗ್ರೆಸ್ ಪಕ್ಷವು ತನ್ನ 20 ಶಾಸಕರ ಪಟ್ಟಿಯನ್ನು ನಿಗಮ ಮಂಡಳಿಗೆ ನೇಮಕ ಮಾಡಿ ಪಟ್ಟಿಯನ್ನು ಸಿಎಂ ಕುಮಾರಸ್ವಾಮಿ ಅಂಕಿತಕ್ಕೆ ನೀಡಿತ್ತು. ಆದರೆ ಕುಮಾರಸ್ವಾಮಿ ಅವರು ಐದು ಜನ ಶಾಸಕರನ್ನು ಬಿಟ್ಟು ಉಳಿದ ಶಾಸಕರ ಹೆಸರುಗಳಿಗೆ ಮಾತ್ರವೇ ಅಂಕಿತ ಹಾಕಿದ್ದಾರೆ.

English summary
Minister HD revanna clarifies that he is not aware about Board and corporation chairman appointments. He dont have any role in thoase appointments.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X