ರಾಜ ಕಾಲುವೆ ಒತ್ತುವರಿ : 14 ಅಧಿಕಾರಿಗಳ ಅಮಾನತು

By: ವಿಕಾಸ್ ನಂಜಪ್ಪ
Subscribe to Oneindia Kannada

ಬೆಂಗಳೂರು, ಆಗಸ್ಟ್ 10 : ಬೆಂಗಳೂರಲ್ಲಿ ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಸಹಕಾರ ನೀಡಿದ ಆರೋಪದ ಮೇಲೆ 14 ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಬಿಬಿಎಂಪಿ ನಗರದಲ್ಲಿ ರಾಜ ಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸುತ್ತಿದೆ. [ಒತ್ತುವರಿಗೆ ಸಹಕಾರ ನೀಡಿದ ಅಧಿಕಾರಿಗಳಿಗೆ ಯಾವ ಶಿಕ್ಷೆ?]

ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಾಣ ಮಾಡಲು 20 ಅಧಿಕಾರಿಗಳು ಸಹಕಾರ ನೀಡಿದ್ದಾರೆ. ಅಧಿಕಾರಿಗಳ ಹೆಸರುಗಳನ್ನು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಬಿಡುಗಡೆ ಮಾಡಿದೆ. ಅಧಿಕಾರಿಗಳನ್ನು ಅಮಾನತು ಮಾಡಿ ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.[ರಾಜ ಕಾಲುವೆ ಒತ್ತುವರಿ, ಈಗ ಅಧಿಕಾರಿಗಳಿಗೆ ಶಿಕ್ಷೆ]

Illegal constructions in Bengaluru, 14 officials suspended

ಕ್ರಮ ಕೈಗೊಳ್ಳಲು ಸೂಚಿಸಿರುವ 20 ಅಧಿಕಾರಿಗಳಲ್ಲಿ 6 ಅಧಿಕಾರಿಗಳು ನಿವೃತ್ತರಾಗಿದ್ದಾರೆ. ಬಿಬಿಎಂಪಿ ಗುರುತಿಸಿರುವ 20 ಅಧಿಕಾರಿಗಳು ಅಕ್ರಮವಾಗಿ ಕಟ್ಟಡ ನಿರ್ಮಾಣ ಮಾಡಲು ಸಹಕಾರ ನೀಡಿದ್ದಾರೆ ಎಂಬುದು ಪ್ರಾಥಮಿಕವಾಗಿ ಸಾಬೀತಾಗಿದೆ.[ಮನೆ ಕಳೆದುಕೊಂಡವರಿಂದ ಬಿಬಿಎಂಪಿಗೆ ಪ್ರಶ್ನೆಗಳ ಸುರಿಮಳೆ]

ಬಿಬಿಎಂಪಿ ಪಟ್ಟಿ ಮಾಡಿರುವ 20 ಅಧಿಕಾರಿಗಳ ಪೈಕಿ ಸೇವೆಯಲ್ಲಿರುವ ಎಲ್ಲರನ್ನೂ ತಕ್ಷಣದಿಂದಲೇ ಅಮಾನತು ಮಾಡಲಾಗಿದೆ. ಬಿಬಿಎಂಪಿ ವಿಶೇಷ ಆಯುಕ್ತ (ಕಾಮಗಾರಿ) ಅವರಿಂದ ಈ ಬಗ್ಗೆ ತನಿಖೆ ಆದೇಶ ನೀಡಲಾಗಿದೆ.[ರಾಜಕಾಲುವೆ ಒತ್ತುವರಿ ತೆರವಿನಲ್ಲೂ ಪ್ರಭಾವದ ಒಳಸುಳಿ]

ನಿವೃತ್ತರಾಗಿರುವ ಅಧಿಕಾರಿಗಳು ಕಾನೂನು ಹೋರಾಟ ನಡೆಸಬೇಕಾಗಿದೆ. ಅವರ ವಿರುದ್ಧ ಪ್ರಕರಣ ದಾಖಲಿಸಲು ಮತ್ತು ವಿಚಾರಣೆ ನಡೆಸಲು ನಿರ್ಧರಿಸಲಾಗಿದೆ.

officials

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Karnataka government has suspended 14 officials after it was alleged that they were involved in allowing illegal constructions to take place in Bengaluru.
Please Wait while comments are loading...