• search

ಎಣ್ಣೆ ಮತ್ತಲ್ಲಿ ಪೊಲೀಸರ ಮೇಲೆ ವಿದೇಶಿ ಪ್ರಜೆಗಳ ಅಸಭ್ಯ ವರ್ತನೆ

Subscribe to Oneindia Kannada
For Quick Alerts
ALLOW NOTIFICATIONS
For Daily Alerts

    ಬೆಂಗಳೂರು, ಫೆಬ್ರವರಿ 17 : ಮದ್ಯದ ತಪಾಸಣೆ ಮಾಡುವ ವೇಳೆ ಇಬ್ಬರು ವಿದೇಶಿಯರು ಸೇರಿ ಏಳು ಜನರ ಗುಂಪು ಪಾನ ಮತ್ತರಾಗಿ 1 ಗಂಟೆಗೂ ಹೆಚ್ಚುಕಾಲ ಸಂಚಾರಿ ಪೊಲೀಸರನ್ನ ಕಾಡಿ ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

    ಹೈಗ್ರೌಂಡ್ಸ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ 2ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಎಂ.ಜಿ ರಸ್ತೆಯಿಂದ ಪಾರ್ಟಿ ಮುಗಿಸಿ ಕುಡಿದು ತಮಿಳುನಾಡು ರಿಜಿಸ್ಟ್ರೇಷನ್ ನ ಟಾಟಾ ಸುಮೋದಲ್ಲಿ ಬಂದ ಏಳು ಜನರು ಮದ್ಯದ ತಪಾಸಣೆ ವೇಳೆ ಸಹಕರಿಸದೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ.

    ಸತತ ಒಂದು ಗಂಟೆಗಳ ಕಾಲ ನಾಲ್ವರು ಟ್ರಾಫಿಕ್ ಸಿಬ್ಬಂದಿಗಳನ್ನು ಕಾಡಿದ ಅವರು ಅವಾಂತರ ಸೃಷ್ಟಿಸಿದ್ದಾರೆ. ತಪಾಸಣೆ ವೇಳೆ ಚಾಲಕ ಸುಂದರೇಶ್ ಮದ್ಯ ಸೇವಿಸಿರುವುದು ಸಾಬೀತಾಗಿದೆ. ಇನ್ನುಳಿದಂತೆ ಆರು ಜನರು ಕುಡಿದು ರಸ್ತೆಯಲ್ಲೆಲ್ಲಾ ತೂರಾಟ ನಡೆಸಿ ಸ್ಥಳದಿಂದ ಎಸ್ಕೇಪ್ ಆಗಲು ನಾನಾ ಕಸರತ್ತು ನಡೆಸಿದರು.

    Including two foreigners trouble traffic police

    ಎಂ.ಜಿ.ರಸ್ತೆಯಿಂದ ಪಾರ್ಟಿ ಮಾಡಿ ಬಂದ ಇಬ್ಬರು ಇಟಲಿ ಮಹಿಳೆಯರು, ಮೂವರು ಗಂಡಸರು, ಒಬ್ಬ ತಮಿಳು ಯುವತಿ, ಮತ್ತೊಬ್ಬ ಮಲೆಯಾಳಿ ಯುವತಿ ಸೇರಿ 7 ಜನರ ಗುಂಪು ಪುಂಡಾಟ ನಡೆಸಿದೆ. ಇವರ ತರಲೆ ನಿಲ್ಲಿಸಲಾಗದೇ ಪರದಾಡಿದ ಪೊಲೀಸರು ತಪಾಸಣೆ ನಡೆಸುವಷ್ಟರಲ್ಲಿ ಸುಸ್ತಾಗಿದ್ದರು. ಕೊನೆಗೂ ಚಾಲಕನನ್ನ ತಪಾಸಣೆ ನಡೆಸಿ ಟಾಟಾ ಸುಮೋ ಸೀಜ್ ಮಾಡಿ ಹೈಗ್ರೌಂಡ್ಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    A group of seven people including two Foreigners quarrelled with traffic police who were drunk and came in a Tata Sumo vehicle near MG road in Bengaluru.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more