ಇಂದಿರಾ ಕ್ಯಾಂಟೀನ್ ಇಲ್ಲದ ವಾರ್ಡ್‌ನಲ್ಲಿ ಮೊಬೈಲ್ ಕ್ಯಾಂಟೀನ್

Posted By: Gururaj
Subscribe to Oneindia Kannada

ಬೆಂಗಳೂರು, ನವೆಂಬರ್ 3 : ಕರ್ನಾಟಕ ಸರ್ಕಾರ ಘೋಷಣೆ ಮಾಡಿದಂತೆ ಬೆಂಗಳೂರು ನಗರದ ಎಲ್ಲಾ ವಾರ್ಡ್‌ಗಳಲ್ಲಿ ಇಂದಿರಾ ಕ್ಯಾಂಟೀನ್ ನಿರ್ಮಾಣವಾಗಿಲ್ಲ. ಸ್ಥಳದ ಕೊರತೆಯಿಂದಾಗಿ 15 ವಾರ್ಡ್‌ಗಳಲ್ಲಿ ಕ್ಯಾಂಟೀನ್ ನಿರ್ಮಾಣವಾಗಿಲ್ಲ. ಇಂತಹ ವಾರ್ಡ್‌ಗಳಲ್ಲಿ ಮೊಬೈಲ್ ಕ್ಯಾಂಟೀನ್ ವ್ಯವಸ್ಥೆ ಮಾಡಲಾಗುತ್ತದೆ.

ಜ.1ರಂದು ಕಲಬುರಗಿ ಜಿಲ್ಲೆಯಲ್ಲಿ 13 ಇಂದಿರಾ ಕ್ಯಾಂಟೀನ್ ಓಪನ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಈ ಕುರಿತ ಪ್ರಸ್ತಾಪವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳಿಸಿತ್ತು. ಸಿದ್ದರಾಮಯ್ಯ ಅವರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ. ಸರ್ಕಾರಿ, ಬಿಬಿಎಂಪಿ, ಬಿಡಿಎ ಜಾಗಗಳು ಸಿಗದ ಸ್ಥಳದಲ್ಲಿ ಮೊಬೈಲ್ ಕ್ಯಾಂಟೀನ್ ಆರಂಭಿಸಲು ಬಿಬಿಎಂಪಿ ಸಿದ್ಧತೆ ನಡೆಸುತ್ತಿದೆ.

Indira Canteen set to go mobile in some wards

ನಗರದಲ್ಲಿ ಮೊದಲ ಹಂತದಲ್ಲಿ 100, ಎರಡನೇ ಹಂತದಲ್ಲಿ 51 ಇಂದಿರಾ ಕ್ಯಾಂಟೀನ್ ಆರಂಭಿಸಲಾಗಿದೆ. 15 ವಾರ್ಡ್‌ಗಳಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲು ಸ್ಥಳದ ಕೊರತೆ ಎದುರಾಗಿದೆ. ಇಲ್ಲಿ ಮೊಬೈಲ್ ಕ್ಯಾಂಟೀನ್ ತೆರೆಯಲು ಬಿಬಿಎಂಪಿ ನಿರ್ಧರಿಸಿದ್ದು, ಕೆಲಸ ಆರಂಭಿಸಲಾಗಿದೆ.

ತುಮಕೂರು ನಗರದಲ್ಲಿ ಸ್ಥಾಪನೆಯಾಗಲಿದೆ 4 ಇಂದಿರಾ ಕ್ಯಾಂಟೀನ್

ಟ್ರಕ್, ಚಿಕ್ಕ ಆಟೋಗಳ ಮೂಲಕ ಮೊಬೈಲ್ ಕ್ಯಾಂಟೀನ್‌ಗಳಲ್ಲಿ ಆಹಾರ ಪೂರೈಕೆ ಮಾಡಲಾಗುತ್ತದೆ. ಆಹಾರದ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಆಹಾರ ಇಲಾಖೆಯ ಎಲ್ಲಾ ಮಾರ್ಗಸೂಚಿಗಳನ್ನು ಒಪ್ಪಿ, ಆಹಾರ ಪೂರೈಕೆ ಮಾಡುವ ಗುತ್ತಿಗೆದಾರರಿಗೆ ಹುಡುಕಾಟ ನಡೆಸಲಾಗುತ್ತಿದೆ.

ಪ್ರತಿದಿನ ಮಧ್ಯಾಹ್ನ 12.30ರಿಂದ 2.30ರ ತನಕ ಇಂದಿರಾ ಕ್ಯಾಂಟೀನ್‌ನಲ್ಲಿ ಮಧ್ಯಾಹ್ನದ ಊಟ ಪೂರೈಸಬೇಕು. ವಾರ್ಡ್‌ನ ಒಂದೇ ಸ್ಥಳದಲ್ಲಿ ವಾಹನ ನಿಲ್ಲಿಸಬೇಕೋ ಅಥವ ಮೂರು-ನಾಲ್ಕು ಸ್ಥಳಗಳಲ್ಲಿ ವಾಹನ ನಿಲ್ಲಿಸಿ, ಊಟ ನೀಡಬೇಕೋ? ಎಂಬ ಬಗ್ಗೆ ಬಿಬಿಎಂಪಿ ಇನ್ನೂ ಚಿಂತನೆ ನಡೆಸಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bruhat Bengaluru Mahanagara Palike (BBMP) unable to find government owned land in at least 15 wards in Bengaluru city to set up Indira Canteen. BBMP has decided to operate mobile canteen.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ