ಇಸ್ರೋದಿಂದ ಅಮೆರಿಕದ ನ್ಯಾನೋ, ಮೈಕ್ರೋ ಉಪಗ್ರಹ ಉಡಾವಣೆ
ಬೆಂಗಳೂರು, ಆಗಸ್ಟ್ 05: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) 2015-16ರ ಸಾಲಿನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ನ್ಯಾನೋ ಹಾಗೂ ಮೈಕ್ರೋ ಉಪಗ್ರಹಗಳನ್ನು ಉಡಾವಣೆ ಮಾಡಲು ಯೋಜನೆ ಹಾಕಿಕೊಂಡಿದೆ. ಮೊಟ್ಟ ಮೊದಲ ಬಾರಿಗೆ ಅಮೆರಿಕದ ಉಪಗ್ರಹವನ್ನು ಇಸ್ರೋ ಗಗನಕ್ಕೆ ಹಾರಿಬಿಡಲಿದೆ.
2015-16ನೇ ಸಾಲಿನಲ್ಲಿ ಅಮೆರಿಕದ 9 ನ್ಯಾನೋ ಉಪಗ್ರಹಗಳ ಉಡಾವಣೆಯ ಗುತ್ತಿಗೆಯನ್ನು ಇಸ್ರೋದ ವಾಣಿಜ್ಯ ಅಂಗಸಂಸ್ಥೆ ಆಂಟ್ರಿಕ್ಸ್(Antrix) ಕಾಪೋರೇಷನ್ ಲಿಮಿಟೆಡ್ ಪಡೆದುಕೊಂಡಿದೆ ಎಂದು ಇಸ್ರೋದ ಸಾರ್ವಜನಿಕ ಸಂಪರ್ಕ ಅಧಿಕಾರಿ ದೇವಿಪ್ರಸಾದ್ ಕಾರ್ನಿಕ್ ಪಿಟಿಐಗೆ ತಿಳಿಸಿದ್ದಾರೆ.

ಪಿಎಸ್ಎಲ್ ವಿ(Polar Satellite Launch Vehicle) ಉಡಾಹಕವನ್ನು ಬಳಸಿಕೊಂಡು ಈ ನ್ಯಾನೋ ಹಾಗೂ ಮೈಕ್ರೋ ಉಪಗ್ರಹಗಳನ್ನು ಉಡಾವಣೆ ಮಾಡಲಾಗುತ್ತದೆ. ಇಸ್ರೋ ಸುಮಾರು 19 ರಾಷ್ಟ್ರಗಳ 45 ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ದಾಖಲೆ ಹೊಂದಿದೆ.
ಮೊಟ್ಟ ಮೊದಲ ಪುನರ್ಬಳಕೆ ಉಡಾಹಕ (Reusable Launch Vehicle-Technology Demonstration (RLV-TD)) ದ ಪ್ರಾಯೋಗಿಕ ಹಾರಾಟ ನಡೆಸಲಾಗುವುದೆಂದು ತಿರುವನಂತಪುರದ ವಿಕ್ರಮ್ಸಾರಾಭಾಯಿ ಬಾಹ್ಯಾಕಾಶ ಕೇಂದ್ರದ ನಿರ್ದೇಶಕ ಡಾ. ಕೆ. ಶಿವನ್ ತಿಳಿಸಿದ್ದಾರೆ.
ಸುಮಾರು 250 ಕೋಟಿ ರೂ. ವೆಚ್ಚದಲ್ಲಿ ಸಂಪೂರ್ಣವಾಗಿ ದೇಶಿಯವಾಗಿ ನಿರ್ಮಾಣಗೊಂಡಿರುವ 2.5 ಟನ್ ತೂಕದ ಜಿಎಸ್ಎಲ್ವಿ ಡಿ6 ಉಡಾಹಕ ಆಗಸ್ಟ್ ತಿಂಗಳ ಕೊನೆಯಲ್ಲಿ ಉಡಾವಣೆಗೊಳ್ಳಲಿದೆ. ಉಪಗ್ರಹವನ್ನು ನಿಗದಿತ ಕಕ್ಷೆಗೆ ಸೇರಿಸುವ2 ಹಂತದ, ಸಂಪೂರ್ಣವಾಗಿ ಪುನರ್ಬಳಕೆ ಮಾಡಬಹುದಾದ ಉಡಾಹಕ ಇದಾಗಿದೆ. (ಪಿಟಿಐ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications