ಬ್ರಿಗೇಡ್ ಗ್ರೂಪ್ ಕಚೇರಿಗಳ ಮೇಲೆ ಐಟಿ ದಾಳಿ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 02: ಬೆಂಗಳೂರು ಹಾಗೂ ಮೈಸೂರಿನಲ್ಲಿರುವ ಬ್ರಿಗೇಡ್ ಗ್ರೂಪ್ ಕಚೇರಿಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಯಶವಂತಪುರದಲ್ಲಿರುವ ಬ್ರಿಗೇಡ್ ಗೇಟ್ ವೇ ಪ್ರಾಪರ್ಟೀಸ್ ಸೇರಿದಂತೆ ಮೈಸೂರಿನ ಗೋಕುಲಂನಲ್ಲಿರುವ ಬ್ರಿಗೇಡ್ ಗ್ರೂಪ್ ಕಚೇರಿಗಳ ಮೇಲೆ ಏಕಕಾಲಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

IT raid on brigade group in Bengaluru and Mysuru

ಬ್ರಿಗೇಡ್ ಗ್ರೂಪ್ ಕಳೆದ ವರ್ಷ ನವೆಂಬರ್ ನಲ್ಲಿ ಕೇಂದ್ರ ಸರ್ಕಾರ ಬಹುಮುಖ ಬೆಲೆಯ ನೋಟುಗಳ ಅಮಾನ್ಯ ಮಾಡಿದ ಬಳಿಕ ನೂರಾರು ಕೋಟಿ ಅಕ್ರಮ ಹಣವನ್ನು ಬ್ಯಾಂಕುಗಳಿಗೆ ಜಮಾ ಮಾಡಿತ್ತು.

ಅಮಾನ್ಯ ಮಾಡಿದ್ದ 500 ಹಾಗೂ 1000 ರೂಪಾಯಿ ನೋಟುಗಳನ್ನು ಬದಲಾವಣೆ ಮಾಡಿಕೊಳ್ಳುವ ಸಲುವಾಗಿ ನೂರಾರು ಕೋಟಿ ಅಕ್ರಮ ಹಣವನ್ನು ಬ್ಯಾಂಕುಗಳಿಗೆ ಜಮಾ ಮಾಡಿದ ಆರೋಪಕ್ಕೆ ಗುರಿಯಾಗಿತ್ತು.

ಒಟ್ಟು 200 ಐಟಿ ಅಧಿಕಾರಿಗಳು ರಾಜ್ಯದ ವಿವಿಧೆಡೆ ಇರುವ ಬ್ರಿಗೇಡ್ ಗ್ರೂಪ್ ಗಳ ಮೇಲೆ ದಾಳಿ ನಡೆಸಿದ್ದಾರೆ.ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The income tax (IT) department conducted raids on brigade group office in Bengaluru and Mysuru today morning.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ