ಹೊಸಕೋಟೆ ಶಾಸಕ ಎಂಟಿಬಿ ನಾಗರಾಜು ಮನೆ ಮೇಲೆ ಐಟಿದಾಳಿ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 9: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂಟಿಬಿ ನಾಗರಾಜು ಬೆಂಗಳೂರು ನಿವಾಸದ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

ಗುರುವಾರ ಬೆಳಗ್ಗೆ ಇದ್ದಕ್ಕಿದ್ದಂತೆ ಬೆಂಗಳೂರಿನ ಗೂಡಾಚಾರ್ ಪಾಳ್ಯದಲ್ಲಿರುವ ಶಾಸಕ ಎಂಟಿಬಿ ನಾಗರಾಜು ಮನೆಯ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ ಶಾಸಕರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.[ಕಾಂಗ್ರೆಸ್ ನಾಯಕರ ಕಚೇರಿ, ಮನೆಯ ಮೇಲೆ ಐಟಿದಾಳಿ]

IT raid on Hoskote Councillor MTB Nagaraj's house in Bengaluru

ದಾಳಿಯಲ್ಲಿ ಮಹತ್ವದ ದಾಖಲೆ ಪತ್ರಗಳನ್ನು ಪರಿಶೀಲಿಸಿರುವ ಆದಾಯ ತೆರಿಗೆ ಅಧಿಕಾರಿಗಳು ಇನ್ನೂ ಪರಿಶೀಲನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ನಗದು, ಚಿನ್ನಾಭರಣ ವಶಪಡಿಸಿಕೊಂಡಿರುವ ಬಗ್ಗೆ ತಿಳಿದು ಬಂದಿಲ್ಲ. ಅಲ್ಲದೆ ಶಾಸಕರ ಯಾವ ಯಾವ ಸಂಬಂಧಿಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬುದು ತಿಳಿಯಬೇಕಿದೆ.

ಈ ಹಿಂದೆ ಕಾಂಗ್ರೆಸ್ ಮುಖಂಡ ರಮೇಶ್ ಜಾರಕೀ ಹೊಳಿ ಮತ್ತು ಕೆಪಿಸಿಸಿಯ ರಾಜ್ಯ ಮಹಿಳಾ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದರು. ಈ ದಾಳಿಯಿಂದಾಗಿ 2017ರಲ್ಲಿ ಮೂರು ಜನ ಕಾಂಗ್ರೆಸ್ ಮುಖಂಡರ ಮನೆಗಳ ಮೇಲೆ ಐಟಿದಾಳಿ ನಡೆದಂತಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Income Tax officer raid on Hoskote Councillor MTB Nagaraj's house in Bengaluru. and verification the important document.
Please Wait while comments are loading...