ಕಾಂಗ್ರೆಸ್ ನಾಯಕರ ಕಚೇರಿ, ಮನೆಯ ಮೇಲೆ ಐಟಿದಾಳಿ

Posted By:
Subscribe to Oneindia Kannada

ಬೆಂಗಳೂರು/ ಬೆಳಗಾವಿ, ಜನವರಿ 19: ಬೆಳ್ಳಂಬೆಳಗ್ಗೆ ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಕಾಂಗ್ರೆಸ್ ಮುಖಂಡರ ಮನೆ ಮೇಲೆ ಕರ್ನಾಟಕ ಮತ್ತ ಗೋವಾ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು ಮಹತ್ವದ ದಾಖಲೆಗಳನ್ನು ಪರಿಶೀಲಿಸಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಸಣ್ಣ ಕೈಗಾರಿಕೋದ್ಯಮ ಸಚಿವ ರಮೇಶ್ ಜಾರಕಿಹೊಳಿ, ಮತ್ತೊಬ್ಬ ನಾಯಕ ಜಾವೇದ್ ಮುಲ್ಲಾ ಮತ್ತು ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಮನೆ ಮೇಲೆ ದಾಳಿ ಮಾಡಲಾಗಿದೆ. ಅಲ್ಲದೆ ಇನ್ನು 15ಕಡೆ ಐಟಿ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.[ಐಟಿ ದಾಳಿ: 6.7 ಕೋಟಿ ಹಣ, ಬಂದಿದ್ದೆಲ್ಲಿ? ತಂದವರಾರು?]

IT raid on house and office in Bangalore and Belgaum of Congress leader

ಬೆಳಗಿನಿಂದಲೇ ರಮೇಶ್ ಜಾರಕಿಹೊಳಿ ಮನೆ ಮತ್ತು ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು ಮಹತ್ವದ ದಾಖಲೆಗಳನ್ನು ಪರಿಶೀಲಿಸಿದರು. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬೆಳಗಾವಿಯ ಹನುಮಾನ್ ನಗರದ ಶುಗರ್ ಕಾರ್ಖಾನೆ, ಕಚೇರಿ ಮತ್ತು ಕುವೆಂಪು ನಗರದಲ್ಲಿರುವ ಅವರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಬೆಂಗಳೂರು ಮತ್ತು ಬೆಳಗಾವಿಯಲ್ಲಿ ಏಕಕಾಲಕ್ಕೆ ಕರ್ನಾಟಕ ಮತ್ತು ಗೋವಾ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿ ಯಾರ ಯಾರ ಮನೆಯಲ್ಲಿ ಏನೇನು ಪರಿಶೀಲಸಿದ್ದಾರೆ ಎಂಬುದು ತಿಳಿಯಬೇಕಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
IT raid on a house in Bangalore and Belgaum Congress leader. small industry Minister Ramesh jarakiholi, leader Javed mullah and the raid on the house of the congress women's unit president Laxmi hebbalkar.
Please Wait while comments are loading...