ಲೋಕಾಯುಕ್ತ ಕೋರ್ಟಿನಿಂದ ಕುಮಾರಸ್ವಾಮಿ ದಂಪತಿಗೆ ಸಮನ್ಸ್

Posted By:
Subscribe to Oneindia Kannada

ಬೆಂಗಳೂರು, ಜನವರಿ 17: ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಅವರಿಗೆ ಲೋಕಾಯುಕ್ತ ಕೋರ್ಟಿನಿಂದ ಸಮನ್ಸ್ ಜಾರಿಯಾಗಿದೆ. ಇಬ್ಬರು ಫೆಬ್ರವರಿ 8ಕ್ಕೆ ವಿಚಾರಣೆಗೆ ಹಾಜರಾಗಬೇಕೆಂದು ಲೋಕಾಯುಕ್ತ ನ್ಯಾಯಾಲಯ ಸೂಚಿಸಿದೆ.

ಜಂತಕಲ್ ಮೈನಿಂಗ್ ಗುತ್ತಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಕೀಲ ವಿನೋದ್ ಎಂಬುವರು ಖಾಸಗಿ ದೂರು ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಲೋಕಾಯುಕ್ತ ನ್ಯಾಯಾಲಯ ಫೆಬ್ರವರಿ 8ಕ್ಕೆ ವಿಚಾರಣೆಗೆ ಖುದು ಹಾಜರಾಗಬೇಕೆಂದು ಸೂಚಿಸಿ, ವಿಚಾರಣೆಯನ್ನು ಮುಂದೂಡಿದೆ. [2011:ಎಚ್ಡಿಕೆ ದಂಪತಿ ಪ್ರಕರಣ ರದ್ದು ಹೈಕೋರ್ಟ್ ತೀರ್ಪು]

Jantakal mining case: HD Kumaraswamy and Anitha gets summons from Lokayukta Court

ಈ ಪ್ರಕರಣವನ್ನು 2011ರಲ್ಲೇ ಹೈಕೋರ್ಟ್ ರದ್ದುಗೊಳಿಸಿತ್ತು. ವಕೀಲ ವಿನೋದ್ ಅವರು ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿದ್ದರು. ಸುಪ್ರೀಂಕೋರ್ಟ್ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆಸುವಂತೆ ಸೂಚನೆ ನೀಡಿತ್ತು.

ಸುಪ್ರೀಂ ಸೂಚನೆ ಮೇರೆಗೆ ದೂರುದಾರರು ಮತ್ತು ಆರೋಪಿಗಳು ವಿಚಾರಣೆಗೆ ಹಾಜರಾಗುವಂತೆ ಲೋಕಾಯುಕ್ತ ನ್ಯಾಯಾಲಯ ಸೂಚನೆ ನೀಡಿತ್ತು. ಆದರೆ, ಎಚ್.ಡಿ.ಕುಮಾರಸ್ವಾಮಿ ಹಾಗೂ ಪತ್ನಿ ಅನಿತಾ ಅವರು ವಿಚಾರಣೆಗೆ ಇಂದು(ಜನವರಿ 17) ಹಾಜರಾಗಿರಲಿಲ್ಲ. ಹೀಗಾಗಿ ಫೆ.8ಕ್ಕೆ ಹಾಜರಾಗಬೇಕೆಂದು ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿದೆ.

ಜಂತಕಲ್ ಮೈನಿಂಗ್ ಲೈಸನ್ಸ್ ಹಾಗೂ ವಿಶ್ವಭಾರತಿ ಗೃಹ ನಿರ್ಮಾಣ ಸಹಕಾರ ಸಂಘ ಡಿನೋಟಿಫೈ ಅವ್ಯವಹಾರ ಪ್ರಕರಣವನ್ನು ರದ್ದುಗೊಳಿಸಿ ಹೈಕೋರ್ಟ್ 2011ರಲ್ಲಿ ತೀರ್ಪು ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The controversial mining company license issue is back to haunt former Karnataka chief minister and Janata Dal-Secular state president H D Kumaraswamy. The special Lokayukta court on Tuesday issued summons to Kumaraswamy and his wife Anita to appear before the court on February 8. The summons came after the Supreme Court reversed the Karnataka HC order in September last year.
Please Wait while comments are loading...