ರಾಜ್ಯ ಸರ್ಕಾರದಿಂದ ಎಸ್ಐಟಿ ಅಧಿಕಾರಿಗಳ ಮೇಲೆ ಒತ್ತಡ – ಎಚ್ಡಿಕೆ

Subscribe to Oneindia Kannada

ಬೆಂಗಳೂರು, ಮೇ 19: ಜಂತಕಲ್ ಮೈನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ (ಗುರುವಾರ) ಎಸ್ಐಟಿ ವಿಚಾರಣೆಗೆ ಹಾಜರಾಗಿದ್ದೆ. ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ್ದೇನೆ. ರಾಜ್ಯ ಸರ್ಕಾರದಿಂದ ಎಸ್ಐಟಿ ಅಧಿಕಾರಿಗಳ ಮೇಲೆ ಒತ್ತಡ ಹೇರುವ ಕೆಲಸ ನಡೆಯುತ್ತಿದೆ ಎಂದು ಜಾತ್ಯಾತೀತ ಜನತಾದಳದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಮಾಗಡಿಯಲ್ಲಿ ಇಂದು ಸುದ್ದಿಗಾರರ ಜತೆಗೆ ಅವರು ಮಾತನಾಡಿದ ಅವರು, "ಪ್ರಾದೇಶಿಕ ಪಕ್ಷವನ್ನ ಕಟ್ಟಿ ಹಾಕಲು ರಾಷ್ಟ್ರೀಯ ಪಕ್ಷಗಳು ಮುಂದಾಗಿವೆ. ಆದರೆ ಇದಕ್ಕೆಲ್ಲ ನಾನು ಹೆಸರುವ ಪ್ರಶ್ನೆಯೇ ಇಲ್ಲ. ಈಗಾಗಲೇ ರಾಜ್ಯಾದ್ಯಂತ ನಾನು ಪ್ರವಾಸ ಮಾಡಿದ್ದೇನೆ. ಪ್ರವಾಸ ಮಾಡಿ ಜನರ ಭಾವನೆಯನ್ನ ಅರಿತಿದ್ದೇನೆ," ಎಂದು ಕುಟುಕಿದರು.

Jantakal mining probe: SIT officials in pressure from Government – HD Kumaraswamy

ಜಂತಕಲ್ ಗಣಿಗಾರಿಕೆ ಹಗರಣದಲ್ಲಿ ನನ್ನನ್ನು ಸಿಲುಕಿಸುವ ಮೂಲಕ ನನ್ನ ಜನಪ್ರೀಯತೆಗೆ ರಾಷ್ಟ್ರೀಯ ಪಕ್ಷಗಳು ಮಸಿ ಬಳಿಯಲು ಪ್ರಯತ್ನಿಸುತ್ತಿವೆ. ನಾನು ಯಾರಿಗೂ ತಲೆ ಬಾಗುವುದೂ ಇಲ್ಲ. ನಾನು ಹೆದರುವುದೂ ಇಲ್ಲ ಎಂದು ಕುಮಾರಸ್ವಾಮಿ ಗುಡುಗಿದ್ದಾರೆ.

ಇದೇ ವೇಳೆ ಜನಾರ್ಧನ್ ರೆಡ್ಡಿ ಜಂತಕಲ್ ಗಣಿಗಾರಿಕೆ ಪ್ರಕರಣದಲ್ಲಿ ಇಂದು ಎಸ್ಐಟಿ ಮುಂದೆ ವಿಚಾರಣೆಗೆ ಹಾಜಾರಾಗಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
“Special Investigation Team officials are in pressure from government. But no one can do nothing to my image,” said JDS state president HD Kumaraswamy, who is facing charges in Jantakal Mining case.
Please Wait while comments are loading...