ಜಂತಕಲ್ ಅಕ್ರಮ ಗಣಿಗಾರಿಕೆ: 'ಎಸ್ಐಟಿ'ಗೆ ದಾಖಲೆ ಸಲ್ಲಿಸಿದ ಜನಾರ್ದನ ರೆಡ್ಡಿ

Subscribe to Oneindia Kannada

ಬೆಂಗಳೂರು, ಜೂನ್ 13: ಜಂತಕಲ್ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಎಸ್ಐಟಿಗೆ ಹಾಜರಾದ ಮಾಜಿ ಸಚಿವ ಜನಾರ್ದನ ರೆಡ್ಡಿ ಬರೋಬ್ಬರಿ ಎರಡು ಗಂಟೆಗೂ ಹೆಚ್ಚಿನ ಅವಧಿಯ ವಿಚಾರಣೆ ನಂತರ ಹೊರ ಬಂದಿದ್ದಾರೆ.

ಈ ಸಂದರ್ಭದ ಮಾತನಾಡಿದ ರೆಡ್ಡಿ, "10 ವರ್ಷಗಳಿಂದ ಸಾಕ್ಷ್ಯಗಳನ್ನು ಕಾಪಾಡಿಕೊಂಡು ಬಂದಿದ್ದೇನೆ. ವಿಶೇಷ ತನಿಖಾ ತಂಡ (ಎಸ್ಐಟಿ) ಮುಂದೆ ಹಾಜರಾಗಿ ಆರೋಪಕ್ಕೆ ಪೂರಕವಾದ ದಾಲೆಗಳನ್ನು ನೀಡಿದ್ದೇನೆ. ತನಿಖೆಯ ದೃಷ್ಟಿಯಿಂದ ಹೆಚ್ಚಿನ ಮಾಹಿತಿ ನೀಡಲು ಇಚ್ಛಿಸುವುದಿಲ್ಲ," ಎಂದು ಹೇಳಿದ್ದಾರೆ.

ಜಂತಕಲ್ ಮೈನಿಂಗ್ ಕಂಪೆನಿಯಿಂದ ಕುಮಾರಸ್ವಾಮಿ 150 ಕೋಟಿ ಲಂಚ ಪಡೆದಿದ್ದಾರೆ ಎಂದು 2007ರಲ್ಲಿ ಜನಾರ್ದನ ರೆಡ್ಡಿ ಆರೋಪಿಸಿದ್ದರು. ಆ ಸಂದರ್ಭದಲ್ಲಿ ಈ ಪ್ರಕರಣದ ದೊಡ್ಡ ಮಟ್ಟಕ್ಕೆ ಸದ್ದು ಮಾಡಿತ್ತು. ಹಲವು ಏರಿಳಿತಗಳನ್ನು ಕಂಡ ಈ ಪ್ರಕರಣದ ಹಿಂದಿನ ವಿಚಾರಣೆಯಲ್ಲಿ ತಮಗೆ ಸಾಕ್ಷ್ಯಗಳನ್ನು ಒದಗಿಸಲು ಮೂರು ವಾರಗಳ ಕಾಲಾವಕಾಶ ಬೇಕು ಎಂದು ಜನಾರ್ದನ ರೆಡ್ಡಿ ಕೇಳಿಕೊಂಡಿದ್ದರು.

Breaking: ಜಂತಕಲ್ ಮೈನಿಂಗ್: ಎಚ್ಡಿಕೆ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಇದೀಗ ಮೂರು ವಾರಗಳ ನಂತರ ಮತ್ತೆ ಜನಾರ್ದನ ರೆಡ್ಡಿ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ ಸಾಕ್ಷ್ಯಗಳನ್ನು ನೀಡಿದ್ದಾರೋ ಇಲ್ಲವೋ ಎಂಬುದರ ಬಗ್ಗೆ ಯಾವುದೇ ಮಾಹಿತಿಗಳು ಸಿಕ್ಕಿಲ್ಲ.

Janthakal mining case: Janardhana Reddy apear before SIT

ಇನ್ನು ಇದೇ ಅಕ್ರಮ ಗಣಿಗಾರಿಕೆಗೆ ಪ್ರಕರಣದಲ್ಲಿ ಜಂತಕಲ್ ಮೈನಿಂಗ್ ಕಂಪೆನಿಯಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಎಸ್ಐಟಿ ವಿಶೇಷ ನ್ಯಾಯಾಲಯ ವಜಾ ಮಾಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Former minister Janardhana Reddy appeared before Special Investigation Team in the Janthakal mining company case.
Please Wait while comments are loading...