ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನನ್ನ ವಿರುದ್ಧ ಸ್ವಪಕ್ಷೀಯರಿಂದಲೇ ಷಡ್ಯಂತ್ರ: ರಮೇಶ್ ಜಾರಕಿಹೊಳಿ

|
Google Oneindia Kannada News

ಬೆಂಗಳೂರು, ನವೆಂಬರ್ 30: ನನ್ನ ವಿರುದ್ಧ ಕಾಂಗ್ರೆಸ್‌ನ ಕೆಲವು ಪ್ರಭಾವಿ ನಾಯಕರು ಷಡ್ಯಂತ್ರ ರಚಿಸುತ್ತಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ದೂರಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಪಕ್ಷ ಬಿಟ್ಟು ಎಲ್ಲಿಯೂ ಹೋಗಿಲ್ಲ. ಹೋಗುವುದೂ ಇಲ್ಲ. ನನ್ನ ತೇಜೋವಧೆ ಮಾಡಲು ನಮ್ಮ ಪಕ್ಷದ ಕೆಲವು ಸ್ವಯಂಘೋಷಿತ ನಾಯಕರೇ ನನ್ನ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ ಎಂದು ಸಚಿವ ರಮೇಶ್ ಜಾರಕಿಹೊಳಿ ಪರೋಕ್ಷವಾಗಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

ಜಾರಕಿಹೊಳಿ ದೊಡ್ಡವರು, ಅವ್ರ ಬಗ್ಗೆ ಮಾತಾಡಲ್ಲ ಎಂದು ಡಿಕೆಶಿ ಟಾಂಗ್ ಜಾರಕಿಹೊಳಿ ದೊಡ್ಡವರು, ಅವ್ರ ಬಗ್ಗೆ ಮಾತಾಡಲ್ಲ ಎಂದು ಡಿಕೆಶಿ ಟಾಂಗ್

ಇದೇ ಸಮಯದಲ್ಲಿ ಕಾಂಗ್ರೆಸ್‌ನಲ್ಲಿ ಆಂತರಿಕ ಕಿತ್ತಾಟ ಇತ್ತು ಎನ್ನುವುದನ್ನು ಒಪ್ಪಿಕೊಂಡ ಜಾರಕಿಹೊಳಿ ರಾಹುಲ್ ಗಾಂಧಿ ಹಾಗೂ ಸಿದ್ದರಾಮಯ್ಯ ಅವರು ಮಧ್ಯಸ್ತಿಕೆ ವಹಿಸಿಕೊಂಡು ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಿಳಿಸಿದರು.

Jarkiholi alleges that some congress leaders are working against him

ಬಿಜೆಪಿ ಶಾಸಕಾಂಗ ಸಭೆ: ಶಾಸಕರಿಗೆ ಅಧಿಕಾರದ ಭರವಸೆ ನೀಡಿದ ಬಿಎಸ್‌ವೈ ಬಿಜೆಪಿ ಶಾಸಕಾಂಗ ಸಭೆ: ಶಾಸಕರಿಗೆ ಅಧಿಕಾರದ ಭರವಸೆ ನೀಡಿದ ಬಿಎಸ್‌ವೈ

ನಮ್ಮ ನಡುವೆ ಭಿನ್ನಮತ ಇದದ್ದು ನಿಜ. ಅದನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯನವರು ಬಗೆಹರಿಸಿದ್ದಾರೆ. ಅಲ್ಲಿಗೆ ಅದು ಮುಗಿದ ಅಧ್ಯಾಯ. ಆದರೂ ಪದೇ ಪದೇ ನನ್ನ ಮೇಲೆ ಅಪಪ್ರಚಾರ ಮಾಡುವಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದನ್ನು ನಾನು ಸಹಿಸುವುದಿಲ್ಲ ಎಂದು ರಮೇಶ್ ಜಾರಕಿಹೊಳಿ ಆಕ್ರೋಶ ವ್ಯಕ್ತಪಡಿಸಿದರು.

ಮಹತ್ವದ ಬೆಳವಣಿಗೆ: ಡಿ.ಕೆ.ಶಿವಕುಮಾರ್ ಮನೆಗೆ ಯಡಿಯೂರಪ್ಪ ದಿಢೀರ್ ಭೇಟಿ ಮಹತ್ವದ ಬೆಳವಣಿಗೆ: ಡಿ.ಕೆ.ಶಿವಕುಮಾರ್ ಮನೆಗೆ ಯಡಿಯೂರಪ್ಪ ದಿಢೀರ್ ಭೇಟಿ

ಕಳೆದ ಸಚಿವ ಸಂಪುಟ ಸಭೆಯಲ್ಲಿ ರಮೇಶ್ ಜಾರಕಿಹೊಳಿ ಅರ್ಧಕ್ಕೆ ಸಭೆಯಿಂದ ಎದ್ದು ಹೊರಹೋಗಿದ್ದರು. ಕೆಲ ದಿನಗಳ ಹಿಂದೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಆಪ್ತ ಸಹಾಯಕ ಸಂತೋಷ್ ಅವರ ಮದುವೆ ಸಮಾರಂಭದಲ್ಲಿ ಭಾಗವಹಿಸಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿತ್ತು.

English summary
Minister Ramesh Jarkiholi alleges that some congress leaders are working against him in the party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X