ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂನ್‌ 11ಕ್ಕೆ ಜಯನಗರ ವಿಧಾನಸಭಾ ಕ್ಷೇತ್ರ ಚುನಾವಣೆ

By Nayana
|
Google Oneindia Kannada News

ಬೆಂಗಳೂರು, ಮೇ 17: ಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಜೂನ್‌ 11 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಜಯನಗರ ಶಾಸಕ ಬಿಜೆಪಿ ಅಭ್ಯರ್ಥಿ ಬಿಎನ್ ವಿಜಯಕುಮಾರ್ ಹೃದಯಾಘಾತದಿಂದ ನಿಧನರಾದ ಕಾರಣಕ್ಕೆ ಮುಂದೂಡಲಾಗಿದ್ದ ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಜೂನ್‌ 11 ರಂದು ನಡೆಯಲಿದೆ. ಜೂನ್‌ 16ರಂದು ಮತ ಎಣಿಕೆ ನಡೆಯಲಿದೆ.

ಚುನಾವಣೆ ಆಯೋಗ ಈ ಕುರಿತು ಶುಕ್ರವಾರ ಅಧಿಸೂಚನೆ ಪ್ರಕಟಿಸಲಿದೆ.ಮೇ 18 ರಿಂದ ನಾಮಪತ್ರ ಸಲ್ಲಿಸಬಹುದಾಗಿದೆ. ಕಾಂಗ್ರೆಸ್‌ ನಿಂದ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಕಣದಲ್ಲಿದ್ದಾರೆ. ಆದರೆ ಬಿಜೆಪಿ ಅಭ್ಯರ್ಥಿ ಯಾರು ಎನ್ನುವುದು ಇನ್ನೂ ಕೂಡ ಘೋಷಣೆಯಾಗಿಲ್ಲ. ಅದೇ ರೀತಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಜಾಲಹಳ್ಳಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮತದಾರರ ಚೀಟಿ ದೊರೆತ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿತ್ತು. ರಾಜರಾಜೇಶ್ವರಿ ವಿಧಾನಭಾ ಕ್ಷೇತ್ರಕ್ಕೆ ಮೇ 28ರಂದು ಚುನಾವಣೆ ನಿಗದಿಯಾಗಿದೆ.

Jayanagar assembly constituency election on June 11
English summary
Election commission has declared election for Jayanagar constituency on June 11. It was postponed after demise of sitting MLA and Bjp candidate B.N. Vijaykumar recently.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X