ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚುನಾವಣಾ ತರಬೇತಿಗೆ ಗೈರು ಹಾಜರಾದ 410 ಸಿಬ್ಬಂದಿಗೆ ನೋಟಿಸ್

|
Google Oneindia Kannada News

ಬೆಂಗಳೂರು, ಜೂನ್ 5: ಜಯನಗರ ವಿಧಾನಸಭೆ ಕ್ಷೇತ್ರದ ಚುನಾವಣೆಗಾಗಿ ನಡೆಸಲಾದ ತರಬೇತಿಗೆ ಹಾಜರಾಗದ ಸಿಬ್ಬಂದಿಗೆ ನೋಟಿಸ್ ನೀಡಲಾಗಿದೆ.

ಜೂನ್ 11ರಂದು ನಡೆಯಲಿರುವ ಮತದಾನದ ಪ್ರಕ್ರಿಯೆಯನ್ನು ನಿರ್ವಹಿಸಲು ವಿವಿಧ ಕ್ಷೇತ್ರಗಳಲ್ಲಿನ ನೌಕರರನ್ನು ಚುನಾವಣಾ ಆಯೋಗ ನಿಯೋಜಿಸಿದೆ.

ಕರ್ತವ್ಯಕ್ಕೆ ಹಾಜರಾಗದಿದ್ದರೆ ಬಂಧನ, ಚುನಾವಣಾ ಆಯೋಗ ಎಚ್ಚರಿಕೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ಬಂಧನ, ಚುನಾವಣಾ ಆಯೋಗ ಎಚ್ಚರಿಕೆ

ಈ ಸಂಬಂಧ ನಿಯೋಜಿತ ಸಿಬ್ಬಂದಿಗೆ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಅದಕ್ಕೆ ಬಹುತೇಕ ಸಿಬ್ಬಂದಿ ಗೈರಹಾಜರಾಗಿದ್ದರು.

jayanagar election notice issued to polling officers absent in training

ಸಿಬ್ಬಂದಿಯ ಗೈರನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗ, 410 ನಿಯೀಜಿತ ಸಿಬ್ಬಂದಿಗೆ ನೋಟಿಸ್ ನೀಡಿದೆ.

ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಉಚಿತ ಚಿಕಿತ್ಸೆ ಸೌಲಭ್ಯ! ಚುನಾವಣಾ ಕರ್ತವ್ಯದಲ್ಲಿರುವ ಸಿಬ್ಬಂದಿಗೆ ಉಚಿತ ಚಿಕಿತ್ಸೆ ಸೌಲಭ್ಯ!

ನೋಟಿಸ್ ಪಡೆದ ಸಿಬ್ಬಂದಿ ಚುನಾವಣಾ ಅಧಿಕಾರಯ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ.ಎನ್. ವಿಜಯ್ ಕುಮಾರ್ ಅವರ ನಿಧನದ ಕಾರಣ ಜಯನಗರ ವಿಧಾನಸಭೆ ಕ್ಷೇತ್ರದ ಚುನಾವಣೆಯನ್ನು ಮುಂದೂಡಲಾಗಿತ್ತು. ಜೂನ್ 11ರಂದು ಚುನಾವಣೆ ನಡೆಯಲಿದೆ.

ಜಯನಗರ ವಿಧಾನಸಭಾ ಕ್ಷೇತ್ರ 'ಮಾದರಿ' ಪ್ರಣಾಳಿಕೆಜಯನಗರ ವಿಧಾನಸಭಾ ಕ್ಷೇತ್ರ 'ಮಾದರಿ' ಪ್ರಣಾಳಿಕೆ

ಬಿಜೆಪಿಯು ವಿಜಯ್ ಕುಮಾರ್ ಅವರ ಸಹೋದರ ಬಿ.ಎನ್. ಪ್ರಹ್ಲಾದ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‌ನಿಂದ ರಾಮಲಿಂಗಾರೆಡ್ಡಿ ಅವರ ಪುತ್ರಿ ಸೌಮ್ಯಾ ರೆಡ್ಡಿ, ಜೆಡಿಎಸ್‌ನಿಂದ ಕಾಳೇಗೌಡ ಮತ್ತು ಪಕ್ಷೇತರರಾಗಿ ರವಿಕೃಷ್ಣಾ ರೆಡ್ಡಿ ಅಖಾಡದಲ್ಲಿರುವ ಪ್ರಮುಖ ಅಭ್ಯರ್ಥಿಗಳು.

English summary
jayanagar assembly election 2018: Notice issued to the polling staff who did not attended the training of election process.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X