ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜಯನಗರದ ಅಭ್ಯರ್ಥಿ ಆಯ್ಕೆ, ಬಿಜೆಪಿ ಕಾರ್ಪೊರೇಟರ್‌ಗಳ ರಹಸ್ಯ ಸಭೆ!

By Gururaj
|
Google Oneindia Kannada News

ಬೆಂಗಳೂರು, ಮೇ 21 : ಬೆಂಗಳೂರಿನ ಜಯನಗರದ ಬಿಜೆಪಿ ಅಭ್ಯರ್ಥಿ ಯಾರು? ಎಂಬ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಜೂನ್ 11ರಂದು ಚುನಾವಣೆ ನಡೆಯಲಿದ್ದು, ಜೂನ್ 16ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ಬಿಜೆಪಿ ಅಭ್ಯರ್ಥಿಯಾಗಿದ್ದ ಬಿ.ಎನ್.ವಿಜಯ ಕುಮಾರ್ ನಿಧನಿಂದಾಗಿ ಮೇ 12ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿತ್ತು. ಈಗ ಚುನಾವಣೆ ದಿನಾಂಕ ನಿಗದಿಯಾಗಿದೆ. ಆದರೆ, ಬಿಜೆಪಿ ಅಭ್ಯರ್ಥಿ ಯಾರಾಗಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ.

ಮೂರು ಚುನಾವಣೆಗಳತ್ತ ಕರ್ನಾಟಕ ಬಿಜೆಪಿ ನಾಯಕರ ಚಿತ್ತಮೂರು ಚುನಾವಣೆಗಳತ್ತ ಕರ್ನಾಟಕ ಬಿಜೆಪಿ ನಾಯಕರ ಚಿತ್ತ

ದಿ.ವಿಜಯ್ ಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಬಹುದು ಎಂಬ ಬಗ್ಗೆ ಚರ್ಚೆ ನಡೆಯುತ್ತಿತ್ತು. ಆದರೆ, ಬಿಬಿಎಂಪಿಯ ಬಿಜೆಪಿಯ ಸದಸ್ಯರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಜಯನಗರ, ಆರ್.ಆರ್.ನಗರದಲ್ಲೂ ಜೆಡಿಎಸ್‌, ಕಾಂಗ್ರೆಸ್ ಮೈತ್ರಿ!ಜಯನಗರ, ಆರ್.ಆರ್.ನಗರದಲ್ಲೂ ಜೆಡಿಎಸ್‌, ಕಾಂಗ್ರೆಸ್ ಮೈತ್ರಿ!

ಜೂನ್ 11ರಂದು ಜಯನಗರದ ಚುನಾವಣೆ ನಡೆಯಲಿದೆ. ಕಾಂಗ್ರೆಸ್‌ನಿಂದ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಅಭ್ಯರ್ಥಿಯಾಗಿದ್ದಾರೆ. ಜೆಡಿಎಸ್‌ನಿಂದ ಕಾಳೇಗೌಡ ಅವರು ಕಣದಲ್ಲಿದ್ದಾರೆ. ಕಾಂಗ್ರೆಸ್-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸುವ ಸಾಧ್ಯತೆ ಇದೆ. ಕೇಂದ್ರ ಸಚಿವ ಅನಂತ್ ಕುಮಾರ್ ಅವರನ್ನು ಜಯನಗರ ಚುನಾವಣೆ ಉಸ್ತುವಾರಿಯನ್ನಾಗಿ ಬಿಜೆಪಿ ನೇಮಿಸಿದೆ.

ಜಯನಗರದ ಟಿಕೆಟ್‌ಗೆ ಬೇಡಿಕೆ

ಜಯನಗರದ ಟಿಕೆಟ್‌ಗೆ ಬೇಡಿಕೆ

ಜಯನಗರ ಕ್ಷೇತ್ರದ ಬಿಜೆಪಿ ಕಾರ್ಪೊರೇಟರ್‌ಗಳು ಸೋಮವಾರ ರಹಸ್ಯ ಸಭೆ ನಡೆಸಿದ್ದಾರೆ. ಸಿ.ಕೆ.ರಾಮಮೂರ್ತಿ, ಎನ್.ನಾಗರಾಜ್, ಎಸ್.ಕೆ.ನಟರಾಜ್, ಸೋಮಶೇಖರ್, ಗೋವಿಂದನಾಯ್ಡು ಅವರು ಸಭೆ ನಡೆಸಿದರು.

ದಿ.ವಿಜಯ್ ಕುಮಾರ್ ಅವರ ಸಹೋದರ ಪ್ರಹ್ಲಾದ್ ಬಾಬು ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವುದಕ್ಕೆ ಕಾರ್ಪೊರೇಟರ್‌ಗಳು ವಿರೋಧ ವ್ಯಪಡಿಸಿದ್ದಾರೆ. ಕಾರ್ಪೊರೇಟರ್‌ಗಳಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.

ಸಭೆ ನಡೆಸಲಿದ್ದಾರೆ ಯಡಿಯೂರಪ್ಪ

ಸಭೆ ನಡೆಸಲಿದ್ದಾರೆ ಯಡಿಯೂರಪ್ಪ

ಜಯನಗರ ಮತ್ತು ಆರ್.ಆರ್.ನಗರ ಕ್ಷೇತ್ರದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆ ನಡೆದಿದೆ. ಒಂದು ವೇಳೆ ಮೈತ್ರಿ ಮಾಡಿಕೊಂಡರೆ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಕಷ್ಟವಾಗಲಿದೆ ಎಂಬುದು ಸದ್ಯದ ಚರ್ಚೆ.

ಬುಧವಾರ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಈ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳ ಸಭೆ ಕರೆದಿದ್ದಾರೆ. ಈ ಸಭೆಯ ಬಳಿಕ ಜಯನಗರಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ.

ಅನಂತ್ ಕುಮಾರ್ ಸ್ಪಷ್ಟನೆ ನೀಡಿದ್ದರು

ಅನಂತ್ ಕುಮಾರ್ ಸ್ಪಷ್ಟನೆ ನೀಡಿದ್ದರು

ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ಜಯನಗರದ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, 'ತೇಜಸ್ವಿನಿ ಅವರು ಜಯನಗರ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ. ಅವರು ಸ್ಪರ್ಧೆ ಮಾಡಲಿದ್ದಾರೆ ಎಂಬುದು ಕೇವಲ ವದಂತಿ. ಸಮಾಜ ಸೇವಾ ಕಾರ್ಯಗಳಲ್ಲೇ ಅವರು ನೆಮ್ಮದಿಯಿಂದ ಇದ್ದಾರೆ' ಎಂದು ಅನಂತ್ ಕುಮಾರ್ ಸ್ಪಷ್ಟಪಡಿಸಿದ್ದರು.

ನಟಿ, ವಿಧಾನಪರಿಷತ್ ಸದಸ್ಯೆ ತಾರಾ ಅನುರಾಧ ಅವರು ಅಭ್ಯರ್ಥಿಯಾಗಬಹುದು ಎಂಬ ಬಗ್ಗೆ ಚರ್ಚೆ ನಡೆದಿತ್ತು. ಯಾರು ಅಭ್ಯರ್ಥಿ ಎಂಬುದು ಇನ್ನೂ ಅಂತಿಮವಾಗಿಲ್ಲ.

ಜಯನಗರದ ಚುನಾವಣೆ

ಜಯನಗರದ ಚುನಾವಣೆ

ಜಯನಗರದ ಚುನಾವಣೆಗೆ ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಬಿಜೆಪಿ ಉಸ್ತುವಾರಿಯಾಗಿದ್ದಾರೆ. ಜೂನ್ 11ರಂದು ಚುನಾವಣೆ ನಡೆಯಲಿದ್ದು, ಜೂನ್ 16ರಂದು ಮತ ಎಣಿಕೆ ನಡೆಯಲಿದೆ.

ಬಿಜೆಪಿ ನಾಯಕರು ಜಯನಗರದ ಚುನಾವಣೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಕ್ಷೇತ್ರವನ್ನು ಉಳಿಸಿಕೊಳ್ಳಬೇಕು ಎಂದು ತಂತ್ರ ರೂಪಿಸುತ್ತಿದ್ದಾರೆ.

English summary
BBMP BJP corporators demand for the party ticket for Jayanagar assembly constituency, Bengaluru. Jayanagar elections will be held on June 11, 2018.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X