ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್‌-ಜೆಡಿಎಸ್‌ ಹೊಂದಾಣಿಕೆಯಿಂದಾಗಿ ಸೋಲು : ಬಿಎಸ್‌ವೈ

By Gururaj
|
Google Oneindia Kannada News

Recommended Video

ಜಯನಗರದಲ್ಲಿ ಬಿಜೆಪಿ ಸೋಲಿಗೆ ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಕಾರಣ ಅಂದ್ರು ಬಿ ಎಸ್ ವೈ | Oneindia Kannada

ಬೆಂಗಳೂರು, ಜೂನ್ 13 : 'ಜಯನಗರದ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡ ಕಾರಣ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳಿಂದ ಪರಾಭವಗೊಳ್ಳುವಂತಾಯಿತು' ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಬುಧವಾರ ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, 'ಜಯನಗರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಬಿ.ಎನ್.ಪ್ರಹ್ಲಾದ್ ಅವರು ಕಡಿಮೆ ಅಂತರದಿಂದ ಸೋತಿದ್ದಾರೆ. ನಮ್ಮ ಕಾರ್ಯಕರ್ತರು ಚುನಾವಣೆಯಲ್ಲಿ ಹಗಲಿರುಳು ಕೆಲಸ ಮಾಡಿದ್ದಾರೆ, ಅವರಿಗೆ ಕೃತಜ್ಞತೆ ಸಲ್ಲಿಸುವೆ' ಎಂದರು.

ಜಯನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಏದುಸಿರುಬಿಟ್ಟ ಮೈತ್ರಿಕೂಟಜಯನಗರದಲ್ಲಿ ಬಿಜೆಪಿಯನ್ನು ಸೋಲಿಸಲು ಏದುಸಿರುಬಿಟ್ಟ ಮೈತ್ರಿಕೂಟ

'ಕಡೆಗಳಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಕ್ಷೇತ್ರದಲ್ಲಿ ಹೊಂದಾಣಿಕೆ ಮಾಡಿಕೊಂಡವು. ಆದ್ದರಿಂದ, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಅಲ್ಪ ಮತಗಳ ಅಂತರದಿಂದ ಪರಾಭವಗೊಳ್ಳುವಂತಾಯಿತು' ಎಂದು ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದರು.

Jayanagar elections : We lost because of Congress-JDS alliance says BSY

'ಬಿ.ಎನ್.ಪ್ರಹ್ಲಾದ್ ಬಾಬು ಅವರು ಹೊಸ ಮುಖ. ಜನರಿಗೆ ಅವರ ಪರಚಯವಿರಲಿಲ್ಲ. ಆದರೂ ಹೆಚ್ಚು ಮತಗಳನ್ನು ಪಡೆದಿದ್ದಾರೆ. ಎಲ್ಲಾ ಕಾರ್ಯಕರ್ತರ ಶ್ರಮದಿಂದ ಇಷ್ಟು ಮತಗಳು ಸಿಕ್ಕಿವೆ' ಎಂದು ಯಡಿಯೂರಪ್ಪ ಹೇಳಿದರು.

ಮೈತ್ರಿ ಸರ್ಕಾರದ ಗೆಲುವಲ್ಲ, ಕಾಂಗ್ರೆಸ್ ಗೆಲುವು: ಸಿದ್ದರಾಮಯ್ಯಮೈತ್ರಿ ಸರ್ಕಾರದ ಗೆಲುವಲ್ಲ, ಕಾಂಗ್ರೆಸ್ ಗೆಲುವು: ಸಿದ್ದರಾಮಯ್ಯ

ಜಯನಗರ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಬುಧವಾರ ನಡೆಯಿತು. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ 54,457 ಮತಗಳನ್ನು ಪಡೆದು ಜಯಗಳಿಸಿದರು. ಬಿಜೆಪಿಯ ಬಿ.ಎನ್.ಪ್ರಹ್ಲಾದ್ 51,568 ಮತಗಳನ್ನು ಪಡೆದಿದ್ದಾರೆ.

English summary
By the Congress-JDS alliance in Jayanagar assembly constituency BJP candidate lost the elections said Karnataka BJP president B.S.Yeddyurappa. Jayanagar elections result 2018 announced on June 13, 2018 and Former minister Ramalinga Reddy daughter Sowmya Reddy wins elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X