ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಜೆಪಿ ಕಾರ್ಯಕರ್ತರ ಮನೆ ಮೇಲೆ ಆಯೋಗ ದಾಳಿ

By Nayana
|
Google Oneindia Kannada News

ಬೆಂಗಳೂರು, ಜೂನ್ 10: ಜಯನಗರ ವಿಧಾನಸಭೆ ಚುನಾವಣೆಗೆ ಇನ್ನು ಒಂದು ದಿನ ಮಾತ್ರ ಬಾಕಿ ಉಳಿದಿದೆ. ಇದರೊಂದಿಗೆ ಬಿಜೆಪಿ ಕಾರ್ಯಕರ್ತರು ಅಕ್ರಮವಾಗಿ ಮದ್ಯ, ಹಣ ಹಂಚಿಕೆ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಹಾಗೂ ಪೊಲೀಸರು ಸಾರಕ್ಕಿ ವಾರ್ಡ್, ಜೆಪಿನಗರದ ಮೊದಲ ಹಂತದ ಬಡಾವಣೆಗಳಲ್ಲಿನ ಬಿಜೆಪಿ ಕಾರ್ಯಕರ್ತರು ಸಂಗ್ರಹಿಸಿಟ್ಟ ಹಣ, ಮದ್ಯ ಸಂಗ್ರಹಿಸಿರುವ ದೂರಿನ ಮೇರೆಗೆ ದಾಳಿ ನಡೆಸಿದ್ದಾರೆ. ಬಿಜೆಪಿ ಕಾರ್ಯಕರ್ತ ನರಸಿಂಹರಾಜ್ ಎಂಬುವರ ಮನೆ ಮೇಲೆ ದಾಳಿ ನಡೆಸಲಾಗಿದೆ.

ಚುನಾವಣಾ ತರಬೇತಿಗೆ ಗೈರು ಹಾಜರಾದ 410 ಸಿಬ್ಬಂದಿಗೆ ನೋಟಿಸ್ಚುನಾವಣಾ ತರಬೇತಿಗೆ ಗೈರು ಹಾಜರಾದ 410 ಸಿಬ್ಬಂದಿಗೆ ನೋಟಿಸ್

ಮನೆಯಲ್ಲಿ ಪರಿಶೀಲನೆ ನಡೆಸಿದಾಗ ಯಾವುದೇ ವಸ್ತುಗಳು ದೊರೆತಿಲ್ಲ ಎನ್ನಲಾಗಿದೆ. ಆದರೆ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ಇದರಲ್ಲಿ ಕಾಂಗ್ರೆಸ್‌ನ ಕೈವಾಡವಿದೆ ಎಂದು ಹರಿಹಾಯ್ದಿದ್ದಾರೆ. ಮಾಜಿ ಮೇಯರ್ ಮಂಜುನಾಥರೆಡ್ಡಿ ಅವರು ಸರ್ಕಾರವನ್ನು ಮುಂದಿಟ್ಟುಕೊಂಡು ಈ ರೀತಿ ಮಾಡಿದ್ದಾರೆ. ಸರ್ಚ್ ವಾರೆಂಟ್ ಇಲ್ಲದೇ ಚುನಾವಣಾ ಆಯೋಗ ಹಾಗೂ ಪೊಲೀಸರು ಈ ರೀತಿ ಪರಿಶೀಲನೆ ಮಾಡುವುದು ಎಷ್ಟು ಸರಿ ಅಂತ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Jayanagara poll: Raid on Bjp activist house

ಜಯನಗರ ವಿಧಾನಸಭೆ ಚುನಾವಣೆ ಜೂನ್ 11 ರಂದು ನಡೆಯಲಿದ್ದು, ಈಗಾಗಲೇ ಬಹಿರಂಗ ಪ್ರಚಾರಕ್ಕೆ ತೆರೆಬಿದ್ದಿದೆ. ಭಾನುವಾರ ಅಭ್ಯರ್ಥಿಗಳು ಮನೆಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.

English summary
Election observers and police officers were raided Bjp party worker house last night following allegation of distributing liquor and money to voters in Jayanagara constituency.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X