ಬಿಬಿಎಂಪಿ ಮೈತ್ರಿ : ಸೆ.3ಕ್ಕೆ ಜೆಡಿಎಸ್ ಮಹತ್ವದ ಸಭೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 30 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮುಂದುವರೆಯುವ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗಿಲ್ಲ. ಸೆಪ್ಟೆಂಬರ್ 3ರಂದು ಜೆಡಿಎಸ್ ಬಿಬಿಎಂಪಿ ಸದಸ್ಯರ ಸಭೆ ಕರೆದಿದ್ದು, ಅಂದು ಮೈತ್ರಿ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

ಮಂಗಳವಾರ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಪದ್ಮನಾಭನಗರದಲ್ಲಿನ ನಿವಾಸದಲ್ಲಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿ ಬಿಬಿಎಂಪಿಯಲ್ಲಿನ ಮೈತ್ರಿ ಬಗ್ಗೆ ಮಾತುಕತೆ ನಡೆಸಿದರು. ಈ ಮಾತುತೆ ವೇಳೆಯಲ್ಲಿ ಸೆ.3ರಂದು ಪಕ್ಷದ ಬಿಬಿಎಂಪಿ ಸದಸ್ಯರ ಸಭೆ ಕರೆಯಲು ನಿರ್ಧರಿಸಲಾಯಿತು.[ಬಿಬಿಎಂಪಿಯಲ್ಲಿ ಯಾರಿಗೆ ಬೆಂಬಲ?, ಜೆಡಿಎಸ್ ನಡೆ ನಿಗೂಢ]

JDS-Congress alliance in BBMP : JDS calls corporators meeting

ಸದ್ಯ, ಮೇಯರ್ ಆಗಿರುವ ಬಿ.ಎನ್.ಮಂಜುನಾಥ್ ರೆಡ್ಡಿ (ಕಾಂಗ್ರೆಸ್) ಮತ್ತು ಉಪ ಮೇಯರ್ ಎಸ್.ಪಿ.ಹೇಮಲತಾ (ಜೆಡಿಎಸ್) ಅವರ ಅಧಿಕಾರಾವಧಿ ಸೆಪ್ಟೆಂಬರ್ 14ರಂದು ಕೊನೆಗೊಳ್ಳಲಿದೆ. ಸೆ.19ರಂದು ನೂತನ ಮೇಯರ್ ಆಯ್ಕೆಗೆ ಚುನಾವಣೆ ನಿಗದಿಯಾಗಿದೆ.[ಮೇಯರ್ ಪಟ್ಟಕ್ಕೆ ಬೇಡಿಕೆ ಇಟ್ಟ ಜೆಡಿಎಸ್!]

ಈ ಬಾರಿಯ ಚುನಾವಣೆಯಲ್ಲಿ ಮೇಯರ್ ಪಟ್ಟ ಹಿಂದುಳಿದ ವರ್ಗ (ಬಿ) ಮಹಿಳೆ ಮತ್ತು ಉಪ ಮೇಯರ್ ಪಟ್ಟ ಸಾಮಾನ್ಯ ವರ್ಗಕ್ಕೆ ಮೀಸಲಾಗಿದೆ. ಸೆ.3ರಂದು ನಡೆಯುವ ಸಭೆಯಲ್ಲಿ ಮೈತ್ರಿ ಮುಂದುವರೆಸಲು ಒಪ್ಪಿಗೆ ಸಿಕ್ಕರೆ ಉಪ ಮೇಯರ್ ಯಾರಾಗಬೇಕು? ಎಂದೂ ತೀರ್ಮಾನ ಕೈಗೊಳ್ಳಲಾಗುತ್ತದೆ.

ಮೈತ್ರಿಗೆ ಭಂಗವಿಲ್ಲ : 'ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿಗೆ ಭಂಗ ಉಂಟಾಗಿಲ್ಲ. ಮೈತ್ರಿ ಮುಂದುವರೆಯುವ ವಿಶ್ವಾಸವಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಬೆಂಗಳೂರಿನಲ್ಲಿ ಹೇಳಿದರು.

ಅಂದಹಾಗೆ 2015ರಲ್ಲಿ ನಡೆದ ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ 100, ಕಾಂಗ್ರೆಸ್ 76, ಜೆಡಿಎಸ್ 14 ಸ್ಥಾನಗಳಲ್ಲಿ ಜಯಗಳಿಸಿದೆ. 8 ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಜೆಡಿಎಸ್-ಕಾಂಗ್ರೆಸ್ ಮೈತ್ರಿಯಿಂದಾಗಿ ಬಿಜೆಪಿಗೆ ಮೇಯರ್ ಸ್ಥಾನ ಕೈತಪ್ಪಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Bruhat Bengaluru Mahanagara Palike (BBMP) mayoral election scheduled on September 19, 2016. JDS called party corporators meeting on September 3 to decide about alliance in BBMP.
Please Wait while comments are loading...