ಭಾರತದ ಅತೀದೊಡ್ಡ ರಾಜಕೀಯ ಸಮೀಕ್ಷೆ. ನೀವು ಭಾಗವಹಿಸಿದ್ದೀರಾ?
 • search

ವಜ್ರಮಹೋತ್ಸವದಲ್ಲಿ ಗುಟುಕು ನೀರು ಕುಡಿಯದಂತೆ ಶಾಸಕರಿಗೆ ಎಚ್ಡಿಕೆ ಸೂಚನೆ

Subscribe to Oneindia Kannada
For Quick Alerts
ALLOW NOTIFICATIONS
For Daily Alerts
    ವಜ್ರಮಹೋತ್ಸವದಲ್ಲಿ ಗುಟುಕು ನೀರು ಕುಡಿಯದಂತೆ ಶಾಸಕರಿಗೆ ಎಚ್ಡಿಕೆ ಸೂಚನೆ | Oneindia Kannada

    ಬೆಂಗಳೂರು, ಅಕ್ಟೋಬರ್ 25: 60ರ ಸಂಭ್ರಮದ ಹಿನ್ನಲೆಯಲ್ಲಿ ವಿಧಾನಸೌಧ ಬಣ್ಣ ಬಣ್ಣದ ದೀಪಗಳಿಂದ ಅಲಂಕೃತಗೊಂಡು ಝಗಮಗಿಸುತ್ತಿದೆ. ವಿಧಾನಸೌಧ ವಜ್ರಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಇದಕ್ಕಾಗಿ ಕೋಟಿಗಟ್ಟಲೇ ಹಣವನ್ನು ಸುರಿಯಲಾಗಿದೆ.

    ಕಂಗೊಳಿಸುತ್ತಿದೆ ವಿಧಾನಸೌಧ: ವಜ್ರಮಹೋತ್ಸವದ ಕಾರ್ಯಕ್ರಮ ಪಟ್ಟಿ

    ವಜ್ರಮಹೋತ್ಸವದಲ್ಲಿ ಪಾಲ್ಗೊಂಡ ಪ್ರತಿಯೊಬ್ಬರ ಊಟಕ್ಕೆ ಸಾವಿರಾರು ರೂಪಾಯಿ ಹಣ ಖರ್ಚು ಮಾಡಿರುವುದಕ್ಕೆ ಜೆಡಿಎಸ್ ರಾಜ್ಯಾದ್ಯಕ್ಷ ಎಚ್,ಡಿ ಕುಮಾರಸ್ವಾಮಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

    ಗ್ಯಾಲರಿ:ವಿಧಾನಸೌಧ ವಜ್ರಮಹೋತ್ಸವಕ್ಕೆ ಭರ್ಜರಿ ತಯಾರಿ

    JDS MLA's they will not take part in any other event of diamond jubilee of Vidhana Soudha

    ಇನ್ನು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಶಾಸಕರಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಿ. ಆದರೆ, ಯಾರೂ ಸಹ ಅಲ್ಲಿ ಊಟ ಮಾಡಬಾರದು. ಅಷ್ಟೇ ಅಲ್ಲದೇ ಕಾರ್ಯಕ್ರಮದಲ್ಲಿ ಒಂದು ಗುಟುಕು ನೀರು ಕುಡಿಯದೆ ರಾಷ್ಟ್ರಪತಿ ಭಾಷಣ ಮುಗಿಯುತ್ತಿದ್ದಂತೆಯೇ ಎಲ್ಲರೂ ವಿಧಾನಸೌಧದಿಂದ ಹೊರಬರಬೇಕು ಎಂದು ಸೂಚಿಸಿದ್ದಾರೆ.

    ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿಗಳು ಹೇಳಿದ್ದೇನು?

    ಮಧ್ಯಾಹ್ನ 1.30ಕ್ಕೆ ವಿಧಾನಸೌಧದ ಹುಲ್ಲುಹಾಸಿನ ಮೇಲೆ ಭೋಜನಕೂಟವನ್ನು ಏರ್ಪಡಿಸಲಾಗಿದೆ. ಮಧ್ಯಾಹ್ನ 3ರಿಂದ 5ರವರೆಗೆ ವಿಧಾನಸೌಧ ಕಟ್ಟಡ ನಿರ್ಮಾಣ ಕುರಿತಾದ ಸಾಕ್ಷ್ಯಚಿತ್ರ ಹಾಗೂ ವಿಧಾನಮಂಡಲ ಶಾಸನಸಭೆ ನಡೆದುಬಂದ ಹಾದಿ ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ.

    ಸಂಜೆ 5ರಿಂದ 6ರವರೆಗೆ ವಿವಿಧ ಜಾನಪದ ತಂಡಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ. ಸಂಜೆ 6ರಿಂದ 6.30ರವರೆಗೆ ಗೌರವ ಸಮರ್ಪಣೆ 6.30ರಿಂದ ಹಂಸಲೇಖ ಹಾಗೂ ತಂಡದಿಂದ ರಸಮಂಜರಿ ಪ್ರಸ್ತುತಗೊಳ್ಳಲಿದೆ.

    ಸಮಾನಾಂತರವಾಗಿ ವಿಧಾನಸೌಧ ಕಟ್ಟಡದ ಮೇಲೆ 3ಡಿ ಮ್ಯಾಪಿಂಗ್ ಮೂಲಕ ಸರ್ಕಾರದ ಯೋಜನೆಗಳ ಚಿತ್ರ ಪ್ರದರ್ಶನಗೊಳ್ಳಲಿದೆ.

    ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

    English summary
    The JDS legislators boycott luncheon in Vidhana Soudha to oppose lavish spending for the diamond jubilee celebration. Legislators to leave Vidhana Soudha after president speach, they will not take part in any other event.

    Oneindia ಬ್ರೇಕಿಂಗ್ ನ್ಯೂಸ್,
    ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

    X
    We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more