ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಾಂಗ್ರೆಸ್ ಜೊತೆ 'ಕೈ' ಜೋಡಿಸಲು ಸಿದ್ಧ ಅಂದ್ರು ಎಚ್ಡಿಕೆ

|
Google Oneindia Kannada News

ಬೆಂಗಳೂರು, ಸೆ. 01 : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಮತ್ತು ಉಪ ಮೇಯರ್ ಪಟ್ಟದ ದೋಸ್ತಿಯ ಮಾತುಕತೆ ಬಹುತೇಕ ಅಂತಿಮ ಹಂತಕ್ಕೆ ತಲುಪಿದೆ. 'ಕಾಂಗ್ರೆಸ್ ಪಕ್ಷದ ಜೊತೆಗೆ ಕೈ ಜೋಡಿಸಲು ಸಿದ್ಧ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಶಾಸಕ ಜಮೀರ್ ಅಹಮದ್ ಖಾನ್ ನಿವಾಸದಲ್ಲಿ ಸೋಮವಾರ ಸಂಜೆ ಜೆಡಿಎಸ್ ಶಾಸಕರ, ನಾಯಕರ ಸಭೆ ನಡೆಸಿದ ನಂತರ ಪತ್ರಿಕಾಗೋಷ್ಠಿ ನಡೆಸಿದ ಎಚ್.ಡಿ.ಕುಮಾರಸ್ವಾಮಿ ಅವರು, 'ಬೆಂಗಳೂರು ನಗರದ ಅಭಿವೃದ್ಧಿಗಾಗಿ ಕಾಂಗ್ರೆಸ್ ಜೊತೆ ಮೈತ್ರಿಗೆ ಸಿದ್ಧವಾಗಿದ್ದೇವೆ' ಎಂದು ಹೇಳಿದ್ದಾರೆ. [ಬಿಬಿಎಂಪಿ ಗದ್ದುಗೆ ಯಾರಿಗೆ?]

'ಬೆಂಗಳೂರು ನಗರದ ಜೆಡಿಎಸ್ ಶಾಸಕರ ಅಭಿಪ್ರಾಯ ಸಂಗ್ರಹಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಕಳೆದ 5 ವರ್ಷದಲ್ಲಿ ಪಾಲಿಕೆಯಲ್ಲಿ ಬಿಜೆಪಿಯ ದುರಾಡಳಿತದಿಂದಾಗಿ ಬೆಂಗಳೂರು ನಗರದ ಅಭಿವೃದ್ಧಿಗೆ ಕುತ್ತು ಬಂದಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಜೊತೆ ಕೈಜೋಡಿಸಲು ನಿರ್ಧರಿಸಲಾಗಿದೆ' ಎಂದು ಕುಮಾರಸ್ವಾಮಿ ಸಮರ್ಥಿಸಿಕೊಂಡರು. [ಮೈತ್ರಿ ಮಾತುಕತೆ : ಯಾರು, ಏನು ಹೇಳಿದರು?]

ಕಾಂಗ್ರೆಸ್ ಮೈತ್ರಿ ಲೆಕ್ಕಾಚಾರದ ಕುರಿತು ಚರ್ಚೆ ನಡೆಸಲು ಇಂದು ಸಭೆ ನಡೆಸಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಬೆಂಗಳೂರಿನ ಶಾಸಕರು ಪಾಲ್ಗೊಳ್ಳಲಿದ್ದಾರೆ. ಮೈತ್ರಿ ಲೆಕ್ಕಾಚಾರದ ವಿವರಗಳು ಚಿತ್ರಗಳಲ್ಲಿ......

ಪಾಲಿಕೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಆಡಳಿತ

ಪಾಲಿಕೆಯಲ್ಲಿ ಕಾಂಗ್ರೆಸ್ -ಜೆಡಿಎಸ್ ದೋಸ್ತಿ ಆಡಳಿತ

ಕಾಂಗ್ರೆಸ್ ಜೊತೆ ಸೇರಿ ಬಿಬಿಎಂಪಿಯಲ್ಲಿ ಆಡಳಿತ ನಡೆಸಲು ಜೆಡಿಎಸ್ ಒಪ್ಪಿಗೆ ನೀಡಿದೆ. 'ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷದೊಂದಿಗೆ ಕೈ ಜೋಡಿಸುವುದರಿಂದ ಬಿಬಿಎಂಪಿಯ ಹಾಗೂ ನಗರದ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಕಾಂಗ್ರೆಸ್ ಮೊದಲ ಆದ್ಯತೆ, ಭ್ರಷ್ಟ ಬಿಜೆಪಿ ಬೇಡ

ಕಾಂಗ್ರೆಸ್ ಮೊದಲ ಆದ್ಯತೆ, ಭ್ರಷ್ಟ ಬಿಜೆಪಿ ಬೇಡ

'ಹಿಂದೆ ಐದು ವರ್ಷ ಬಿಬಿಎಂಪಿಯಲ್ಲಿ ಆಡಳಿತ ನಡೆಸಿದ ಬಿಜೆಪಿಯ ದುರಾಡಳಿತ ಹಾಗೂ ಭ್ರಷ್ಟಾಚಾರದಿಂದಾಗಿ ನಗರದ ಅಭಿವೃದ್ಧಿ ಆಗಿಲ್ಲ. ಬಿಬಿಎಂಪಿಯ ಮೇಲೆ 9,600 ಕೋಟಿ ರೂ.ಗಳ ಸಾಲ ಹೆಚ್ಚಲು ಬಿಜೆಪಿಯ ದುರಾಡಳಿತವೇ ಕಾರಣ' ಎಂದು ಕುಮಾರಸ್ವಾಮಿ ಅವರು ಆರೋಪಿಸಿದ್ದಾರೆ.

ಇಂದು ಕಾಂಗ್ರೆಸ್ ಮಹತ್ವ ಸಭೆ

ಇಂದು ಕಾಂಗ್ರೆಸ್ ಮಹತ್ವ ಸಭೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರ ನೇತೃತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ನಡೆಯಲಿದ್ದು, ಮೈತ್ರಿ ಬಗ್ಗೆ ಮಾತುಕತೆ ನಡೆಯಲಿದೆ. ನಂತರ ಜೆಡಿಎಸ್‌ ನಾಯಕರಿಗೆ ಕಾಂಗ್ರೆಸ್‌ ಪಕ್ಷದವರು ಆಹ್ವಾನ ನೀಡುವ ಸಾಧ್ಯತೆ ಇದೆ.

ಬಹುಮತ ಪಡೆಯಲು ಬೇಕು 131 ಮತ

ಬಹುಮತ ಪಡೆಯಲು ಬೇಕು 131 ಮತ

ಮೇಯರ್ ಚುನಾವಣೆಯಲ್ಲಿ ಮತದಾನದ ಅಧಿಕಾರ ಹೊಂದಿದ ಪಾಲಿಕೇತರ ಸದಸ್ಯರ ಪಟ್ಟಿಯನ್ನು ಬಿಬಿಎಂಪಿ ಸಿದ್ಧಪಡಿಸಿದೆ. ಪಟ್ಟಿಯಂತೆ ಪಾಲಿಕೇತರ 62 ಸದಸ್ಯರು ಮತದಾನದ ಅವಕಾಶ ಪಡೆದಿದ್ದಾರೆ. ಒಟ್ಟು 260 ಸದಸ್ಯರು ಮತದಾನದ ಅವಕಾಶ ಪಡೆದಿದ್ದು ಬಹುಮತಕ್ಕೆ 131 ಮತಗಳ ಅಗತ್ಯವಿದೆ.

ಮೈತ್ರಿಕೂಟದ ನಂಬರ್ ಲೆಕ್ಕಾಚಾರ

ಮೈತ್ರಿಕೂಟದ ನಂಬರ್ ಲೆಕ್ಕಾಚಾರ

ಬಿಜೆಪಿ ಮತ್ತು ಪಕ್ಷೇತರ ಸದಸ್ಯರು ಸೇರಿದರೆ 127 ಸ್ಥಾನಗಳಾಗುತ್ತದೆ. ಕಾಂಗ್ರೆಸ್ ಮತ್ತು ಜೆಡಿಎಸ್, ಪಕ್ಷೇತರ ಮೈತ್ರಿಕೂಟ ಸೇರಿದರೆ 133 ಮತಗಳಾಗುತ್ತದೆ. ಬಹುಮತಕ್ಕೆ 131 ಮ್ಯಾಜಿಕ್ ನಂಬರ್ ಆಗಿದೆ.

English summary
JDS state president H.D.Kumaraswamy on Monday said, his party will go with the Congress in BBMP in the interest of Bengaluru city development.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X