ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮೈತ್ರಿ: ಮೇಯರ್ ಪಟ್ಟಕ್ಕೆ ಜೆಡಿಎಸ್ ಬಿಗಿಪಟ್ಟು ಮುಂದುವರಿಕೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 21: ಶೀಘ್ರದಲ್ಲೇ ನಡೆಯಲಿರುವ ಬಿಬಿಎಂಪಿ ಮೇಯರ್ ಹುದ್ದೆಯ ಚುನಾವಣೆ ಹಿನ್ನೆಲೆಯಲ್ಲಿ ಮೈತ್ರಿ ಕಸರತ್ತು ಆರಂಭಿಸಿರುವ ಕಾಂಗ್ರೆಸ್ ಮುಂದೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮೇಯರ್ ಪಟ್ಟವನ್ನು ಜೆಡಿಎಸ್ ಪಕ್ಷಕ್ಕೇ ನೀಡುವಂತೆ ಬೇಡಿಕೆಯಿಟ್ಟಿದ್ದಾರೆಂದು ಗೃಹ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಎಚ್ ಡಿ ಕುಮಾರ ಸ್ವಾಮಿ ಜತೆಗೆ ಮಾತುಕತೆ ನಡೆಸಿದ ರಾಮಲಿಂಗಾ ರೆಡ್ಡಿ ಅವರು, ಆನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

JDS's demand for BBMP Mayor seat continues

ಕುಮಾರ ಸ್ವಾಮಿ ಅವರು, ಮೇಯರ್ ಪಟ್ಟಕ್ಕೆ ಪಟ್ಟು ಹಿಡಿದಿದ್ದಾರೆ. ಅಲ್ಲದೆ, ಬಿಬಿಎಂಪಿಯ ಕೆಲವಾರು ಸ್ಥಾಯಿ ಸಮಿತಿಗಳ ಸದಸ್ಯರನ್ನು ಬದಲಾಯಿಸುವಂತೆ ಆಗ್ರಹಿಸಿದ್ದಾರೆ. ಆದರೆ, ಈ ಬಗ್ಗೆ ನಿರ್ಧಾರ ಕೈಗೊಳ್ಳಲು ನನ್ನೊಬ್ಬನಿಂದಲೇ ಸಾಧ್ಯವಿಲ್ಲ. ಅದನ್ನು ಪಕ್ಷದ ನಾಯಕರು ನಿರ್ಧರಿಸುತ್ತಾರೆ.

ಮಾತುಕತೆ ವೇಳೆ ಕಾಂಗ್ರೆಸ್ ಪಕ್ಷವನ್ನು ಪ್ರತಿನಿಧಿಸುವುದಷ್ಟೇ ನನ್ನ ಕೆಲಸ. ಹಾಗಾಗಿ, ಎಚ್ ಡಿಕೆ ಅವರ ಬೇಡಿಕೆಗಳನ್ನು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಇತರ ನಾಯಕರ ಮುಂದಿಡಲಾಗುವುದು ಎಂದು ತಿಳಿಸಿದರು.

English summary
In the wake of preparations for BBMP Mayor election, the talks between Congress and JDS alliance become failure again. On September 21st, Home Minister Ramalinga Reddy and JDS state President HD Kumaraswamy had discussions regarding the mayor post.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X