ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಿಬಿಎಂಪಿ ಮೈತ್ರಿ : ಎಚ್.ಡಿ.ಕುಮಾರಸ್ವಾಮಿ ಹೇಳುವುದೇನು?

|
Google Oneindia Kannada News

Recommended Video

H D Kumaraswamy speaks about BBMP mayoral polls scheduled on September 28, 2017

ಬೆಂಗಳೂರು, ಸೆಪ್ಟೆಂಬರ್ 11 : 'ಪಕ್ಷದ ಶಾಸಕರು ಮತ್ತು ಬಿಬಿಎಂಪಿ ಸದಸ್ಯರಿಂದ ಬಿಬಿಎಂಪಿ ಮೇಯರ್ ಪಟ್ಟ ಜೆಡಿಎಸ್ ಪಕ್ಷಕ್ಕೆ ಸಿಗಬೇಕು' ಎಂಬ ಬೇಡಿಕೆ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಸೆ.28ರಂದು ಮೇಯರ್ ಮತ್ತು ಉಪ ಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

'ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಅನಿವಾರ್ಯವಲ್ಲ''ಬಿಬಿಎಂಪಿಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಅನಿವಾರ್ಯವಲ್ಲ'

ಮೇಯರ್ ಚುನಾವಣೆಯ ಬಗ್ಗೆ ಪಕ್ಷದ ಶಾಸಕರು ಮತ್ತು ಬಿಬಿಎಂಪಿ ಸದಸ್ಯರ ಜೊತೆ ಕುಮಾರಸ್ವಾಮಿ ಭಾನುವಾರ ಸಭೆ ನಡೆಸಿದರು. ಬಿಬಿಎಂಪಿಯಲ್ಲಿ ಕಾಂಗ್ರೆಸ್ ಆಡಳಿತ ವೈಖರಿ ಕುರಿತು ಸಭೆಯಲ್ಲಿ ವಿರೋಧ ವ್ಯಕ್ತವಾಯಿತು. ಮೈತ್ರಿ ಮುಂದುವರೆಸುವ ಬಗ್ಗೆಯೂ ಸಭೆಯಲ್ಲಿ ವಿವರವಾದ ಚರ್ಚೆ ನಡೆಯಿತು.

ಸಭೆಯ ಬಳಿಕ ಮಾತನಾಡಿದ ಕುಮಾರಸ್ವಾಮಿ ಅವರು, 'ಯಾವುದೇ ಕಾಂಗ್ರೆಸ್ ನಾಯಕರು ತಮ್ಮನ್ನಾಗಲಿ, ಎಚ್.ಡಿ.ದೇವೇಗೌಡರನ್ನಾಗಲಿ ಬಿಬಿಎಂಪಿ ಮೈತ್ರಿ ಕುರಿತು ಚರ್ಚೆ ನಡೆಸಲು ಭೇಟಿ ಮಾಡಿಲ್ಲ' ಎಂದು ಸ್ಪಷ್ಟಪಡಿಸಿದರು..

ಬಿಬಿಎಂಪಿ ಮೇಯರ್ ಆಯ್ಕೆಗೆ ಸಿದ್ಧತೆ ಆರಂಭ, ಯಾರೊಂದಿಗೆ ಮೈತ್ರಿ?ಬಿಬಿಎಂಪಿ ಮೇಯರ್ ಆಯ್ಕೆಗೆ ಸಿದ್ಧತೆ ಆರಂಭ, ಯಾರೊಂದಿಗೆ ಮೈತ್ರಿ?

ಹಾಲಿ ಬಿಬಿಎಂಪಿ ಮೇಯರ್ ಆಗಿರುವ ಜಿ.ಪದ್ಮಾವತಿ, ಉಪ ಮೇಯರ್ ಎಂ.ಆನಂದ ಅವರ ಅವಧಿ ಸೆ.28ಕ್ಕೆ ಅಂತ್ಯಗೊಳ್ಳಲಿದೆ. ಪ್ರಾದೇಶಿಕ ಆಯುಕ್ತರು ಸೆ.28ರಂದು ನೂತನ ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಮಾಡಲು ಚುನಾವಣಾ ದಿನಾಂಕ ನಿಗದಿ ಮಾಡಿದ್ದಾರೆ. ಮೈತ್ರಿ ಕುರಿತು ಕುಮಾರಸ್ವಾಮಿ ಹೇಳಿದ್ದೇನು?.....

 ಬಿಬಿಎಂಂಪಿ ಮೈತ್ರಿಯಲ್ಲಿ ಕಹಿ?

ಬಿಬಿಎಂಂಪಿ ಮೈತ್ರಿಯಲ್ಲಿ ಕಹಿ?

'ಬಿಬಿಎಂಪಿಯಲ್ಲಿನ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭಾದಿತ ಎಂದು ಕಾಂಗ್ರೆಸ್ ನಾಯಕರು ತಿಳಿದುಕೊಂಡಿದ್ದರೆ ಅದು ತಪ್ಪು' ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇದು ಬಿಬಿಎಂಪಿ ಮೈತ್ರಿ ಮುರಿದು ಬೀಳಲಿದೆಯೇ? ಎಂಬ ಪ್ರಶ್ನೆ ಹುಟ್ಟು ಹಾಕಿದೆ.

 ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ

ಕಾಂಗ್ರೆಸ್ ಆಡಳಿತದ ಬಗ್ಗೆ ಅಸಮಾಧಾನ

'ಜೆಡಿಎಸ್ ಸದಸ್ಯರಿರುವ ವಾರ್ಡ್‌ಗಳಿಗೆ ಅನುದಾನವನ್ನು ಸರಿಯಾಗಿ ಹಂಚಿಕೆ ಮಾಡುತ್ತಿಲ್ಲ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಜೆಡಿಎಸ್ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ. ಚುನಾವಣೆ ಬಂದಾಗ ಕಾಂಗ್ರೆಸ್ ನಾಯಕರ ವರ್ತನೆ ಬದಲಾಗುತ್ತದೆ' ಎಂದು ಕುಮಾರಸ್ವಾಮಿ ಆರೋಪಿಸಿದರು.

 ಮೇಯರ್ ಪಟ್ಟಕ್ಕಾಗಿ ಬೇಡಿಕೆ

ಮೇಯರ್ ಪಟ್ಟಕ್ಕಾಗಿ ಬೇಡಿಕೆ

'ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್ ಪಟ್ಟ ಜೆಡಿಎಸ್ ಪಕ್ಷಕ್ಕೆ ಸಿಗಬೇಕು' ಎಂದು ಶಾಸಕರು, ಬಿಬಿಎಂಪಿ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ. 2015ರ ಬಿಬಿಎಂಪಿ ಚುನಾವಣೆ ನಂತರ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು ಕಾಂಗ್ರೆಸ್ ಮೇಯರ್ ಮತ್ತು ಜೆಡಿಎಸ್ ಉಪ ಮೇಯರ್ ಪಟ್ಟವನ್ನು ಹಂಚಿಕೊಂಡಿವೆ.

 'ಕಾಂಗ್ರೆಸ್ ನವರು ಭೇಟಿ ಮಾಡಿಲ್ಲ'

'ಕಾಂಗ್ರೆಸ್ ನವರು ಭೇಟಿ ಮಾಡಿಲ್ಲ'

'ಬಿಬಿಎಂಪಿ ಮೇಯರ್ ಮತ್ತು ಉಪ ಮೇಯರ್ ಚುನಾವಣೆ ದಿನಾಂಕ ಘೋಷಣೆಯಾದರೂ ಕಾಂಗ್ರೆಸ್ ಪಕ್ಷದ ಯಾವುದೇ ನಾಯಕರು ತಮ್ಮನ್ನು ಅಥವ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿಲ್ಲ' ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ಸೆ.28ರಂದು ಚುನಾವಣೆ

ಸೆ.28ರಂದು ಚುನಾವಣೆ

ಮೇಯರ್ ಮತ್ತು ಉಪ ಮೇಯರ್ ಆಯ್ಕೆ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಈ ಬಾರಿಯ ಮೇಯರ್ ಹುದ್ದೆ ಪರಿಶಿಷ್ಟ ಜಾತಿ (ಸಾಮಾನ್ಯ) ಸದಸ್ಯರಿಗೆ ಮೀಸಲಾಗಿದೆ. ಉಪ ಮೇಯರ್ ಸ್ಥಾನ ಸಾಮಾನ್ಯ ವರ್ಗದ ಮಹಿಳೆಗೆ ಮೀಸಲಾಗಿದೆ.

English summary
JDS state president H.D.Kumaraswamy said, There is a demand from his party legislators and councillors that the BBMP mayor post should go to the JDS. BBMP mayoral polls scheduled on September 28, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X