ಬೆಂಗಳೂರಲ್ಲಿ ಮೇ 28ರಂದು ಉದ್ಯೋಗ ಮೇಳ

Posted By:
Subscribe to Oneindia Kannada

ಬೆಂಗಳೂರು, ಮೇ 26 : ಬೆಂಗಳೂರಿನಲ್ಲಿ ಮೇ 28ರಂದು ಉದ್ಯೋಗ ಮೇಳ ನಡೆಯಲಿದೆ. ಎಸ್ಎಸ್‌ಎಲ್‌ಸಿಯಿಂದ ಪದವಿ ತನಕ ವ್ಯಾಸಂಗ ಮಾಡಿದವರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

'ಡಾನ್ ಬಾಸ್ಕೊ ಟೆಕ್ ಸೊಸೈಟಿಯು ಬನ್ನೇರುಘಟ್ಟ ರಸ್ತೆಯ ಸಂಸ್ಥೆಯ ಆವರಣದಲ್ಲಿ ಮೇ 28ರ ಶನಿವಾರ ಉದ್ಯೋಗ ಮೇಳ ಆಯೋಜಿಸಿದೆ' ಎಂದು ಸಂಸ್ಥೆಯ ಸಹಾಯಕ ಕಾರ್ಯಕ್ರಮ ನಿರ್ದೇಶಕ ರಮೇಶ್‌ ಚೆರಿಯನ್ ಹೇಳಿದ್ದಾರೆ. [ISROದಲ್ಲಿ ಕೆಲಸ ಖಾಲಿ ಇದೆ]

jobs

ನಿರುದ್ಯೋಗಿ ಯುವಕರಿಗೆ ತರಬೇತಿ ನೀಡಿ ಅವರಿಗೆ ಕೆಲಸ ಕೊಡಿಸುವ ಉದ್ದೇಶದಿಂದ ಈ ಮೇಳವನ್ನು ಆಯೋಜನೆ ಮಾಡಲಾಗಿದೆ. ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಡಿಪ್ಲೊಮಾ, ಬಿಇ, ಎಂಬಿಎ ಪದವಿ ಪಡೆದವರು ಮತ್ತು ಫೇಲಾದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ 94490 21175, 98802 05878.

ಉದ್ಯೋಗವಕಾಶಗಳು

* ಕರ್ನಾಟಕ ರಾಜ್ಯ ಉಗ್ರಾಣ ನಿಗಮ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್‌ನಲ್ಲಿ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 4, 2016. [ವಿವಿರಗಳು ಇಲ್ಲಿವೆ]

* ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ವಿಜಯಪುರ ಹಲವಾರು ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಜೂನ್ 20, 2016. [ವಿವರಗಳಿಗೆ ಇಲ್ಲಿ ಕ್ಲಿಕ್ ಮಾಡಿ]

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Don Bosco Tech Society organized job fair at society office in Bannerghatta road, Bengaluru on May 26, 2016.
Please Wait while comments are loading...