ಸುಪಾರಿ ಕೇಸ್ : ರವಿಬೆಳಗೆರೆಗೆ ಮಧ್ಯಂತರ ಜಾಮೀನು ಮಂಜೂರು
Recommended Video

ಬೆಂಗಳೂರು, ಡಿಸೆಂಬರ್ 13: ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಅವರಿಗೆ ಸೆಷನ್ಸ್ ನ್ಯಾಯಾಲಯದಿಂದ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರಾಗಿದೆ.
ಅನಾರೋಗ್ಯ ಹಾಗೂ ಪೊಲೀಸರಿಂದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳುವುದರಲ್ಲಿ ಆಗಿರುವ ಲೋಪದ ಹಿನ್ನಲೆಯಲ್ಲಿ ಜಾಮೀನು ಮಂಜೂರು ಮಾಡಲಾಗಿದೆ. ಇಬ್ಬರ ಶ್ಯೂರಿಟಿ, 1 ಲಕ್ಷ ರು ಬಾಂಡ್ ಸಲ್ಲಿಸಬೇಕು, ತನಿಖೆಗೆ ಸಹಕರಿಸಬೇಕು ಎಂದು ಷರತ್ತುಗಳನ್ನು ನ್ಯಾಯಾಧೀಶ ಮದುಸೂಧನ್ ವಿಧಿಸಿದ್ದಾರೆ. ಡಿಸೆಂಬರ್ 16ರ ತನಕ ಜಾಮೀನು ನೀಡಲಾಗಿದೆ.

ರವಿ ಬೆಳಗೆರೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸುವಂತೆ 1ನೇ ಎಸಿಎಂಎಂ ನ್ಯಾಯಾಲಯ ಆದೇಶ ನೀಡಿತ್ತು. ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ರವಿ ಬೆಳಗೆರೆ ಅವರನ್ನು ಅನಾರೋಗ್ಯ ನಿಮಿತ್ತ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಯ ಮಧುಮೇಹ ವಿಭಾಗಕ್ಕೆ ಕರೆದೊಯ್ಯಲಾಗಿದೆ.
ಚೇತನಾ ಪ್ರತಿಕ್ರಿಯೆ: 'ಅಪ್ಪನ ಆರೋಗ್ಯ ತೀವ್ರ ಹದೆಗೆಟ್ಟಿತ್ತು. ಈಗ ಜಯದೇವದಲ್ಲಿ ಚಿಕಿತ್ಸೆ ಪಡೆದ ಬಳಿಕ ಬೇರೆ ಕಡೆ ಕರೆದೊಯ್ಯಲಾಗುವುದು, ಜಾಮೀನು ಸಿಕ್ಕಿರುವುದು ಸಂತಸ ತಂದಿದೆ' ಎಂದು ರವಿ ಅವರ ಪುತ್ರಿ ಚೇತನಾ ಅವರು ಪ್ರತಿಕ್ರಿಯಿಸಿದ್ದಾರೆ.
ಜಾಮೀನು ಮಂಜೂರು: ಇದಕ್ಕೂ ಮುನ್ನ ಅನಾರೋಗ್ಯ ಹಿನ್ನಲೆಯಲ್ಲಿ ರವಿ ಬೆಳಗೆರೆ ಅವರಿಗೆ ಮಧ್ಯಂತರ ಜಾಮೀನು ಮಂಜೂರು ಮಾಡುವಂತೆ ರವಿ ಬೆಳಗೆರೆ ಅವರ ವಕೀಲ ದಿವಾಕರ್ ಅವರು ಅರ್ಜಿ ಸಲ್ಲಿಸಿದರು. ಪ್ರತಿನಿತ್ಯ ಇನ್ಸುಲಿನ್ ಇಂಜೆಕ್ಷನ್ ತೆಗೆದುಕೊಳ್ಳಬೇಕು, ಕಾಲಿಗೆ ಗಾಯವಾಗಿದ್ದು, ಹೆಚ್ಚಿನ ಆರೈಕೆ ಅಗತ್ಯವಾಗಿದೆ. ತನಿಖೆಗೆ ನನ್ನ ಕಕ್ಷಿದಾರರು ಇಲ್ಲಿ ತನಕ ಸಹಕರಿಸಿದ್ದಾರೆ, ಮುಂದೆ ಕೂಡಾ ಸಹಕರಿಸುತ್ತಾರೆ.
ಆರೋಪಿಯೊಬ್ಬನ ಹೇಳಿಕೆ ಆಧಾರ ಮೇಲೆ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಯಾವುದೇ ಸರಿಯಾದ ಸಾಕ್ಷಿ ಇನ್ನೂ ಕಲೆ ಹಾಕಿಲ್ಲ ಎಂದು ವಾದಿಸಿದರು. ರವಿ ಪರ ವಕೀಲರ ವಾದವನ್ನು ಮನ್ನಿಸಿದ ನ್ಯಾಯಾಧೀಶರು ಡಿ.16ರ ತನಕ ಮಧ್ಯಂತರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications