ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ರತ್ನಪ್ರಭಾ ಅಧಿಕಾರ ಸ್ವೀಕಾರ

Posted By:
Subscribe to Oneindia Kannada

ಬೆಂಗಳೂರು, ನವೆಂಬರ್ 30: ಕರ್ನಾಟಕ ಸರ್ಕಾರದ ನೂತನ ಮುಖ್ಯಕಾರ್ಯದರ್ಶಿಯಾಗಿ ಕೆ. ರತ್ನಪ್ರಭಾ ಅವರು ಇಂದು (ಗುರುವಾರ) ಅಧಿಕಾರ ಸ್ವೀಕರಿಸಿದರು.

ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಾಗಿ ಕೆ. ರತ್ನಪ್ರಭಾ ನೇಮಕ

1981ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಶ್ರೀಮತಿ ಕೆ. ರತ್ನಪ್ರಭಾ ಅವರು ವಿಧಾನಸೌಧದಲ್ಲಿ ಅಧಿಕಾರ ಸ್ವೀಕರಿಸಿದರು. ಈ ಮೂಲಕ ರಾಜ್ಯದ ಮೂರನೇ ಮಹಿಳಾ ಮುಖ್ಯಕಾರ್ಯದರ್ಶಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

K Ratna Prabha takes charge as chief secretary to government of Karnataka

ಸುಭಾಷ್ ಚಂದ್ರ ಕುಂಟಿಯಾ ಅವರ ಅಧಿಕಾರವಧಿ ಡಿಸೆಂಬರ್ 30 ಕೊನೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಭಾಷ್ ಚಂದ್ರ ಕುಂಟಿಯಾ ಅವರು ರತ್ನಪ್ರಭಾ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

2000ರಲ್ಲಿ ತೆರೆಸಾ ಭಟ್ಟಾಚಾರ, 2006ರಲ್ಲಿ ಮಾಲತಿದಾಸ್ ಎನ್ನುವರ ಮುಖ್ಯಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಇದೀಗ ಮೂರನೇ ಮಹಿಳಾ ಮುಖ್ಯಕಾರ್ಯದರ್ಶಿಯಾಗಿ ರತ್ನಪ್ರಭಾ ಅವರು ಅಧಿಕಾರ ವಹಿಸಿಕೊಂಡರು.

ಮುಖ್ಯಕಾರ್ಯದರ್ಶಿ ರೇಸ್‍ ನಲ್ಲಿ ಪಟ್ಟನಾಯಕ್, ವಿಜಯಭಾಸ್ಕರ್ ಅವರ ಹೆಸರುಗಳು ಕೇಳಿಬಂದಿದ್ದವು. ಕೊನೆಗಳಿಗೆಯಲ್ಲಿ ರಾಜ್ಯ ಸರ್ಕಾರ ರತ್ನಪ್ರಭಾ ಅವರನ್ನು ಮುಖ್ಯಕಾರ್ಯದರ್ಶಿಯಾಗಿ ಮತ್ತು 1983ರ ಬ್ಯಾಚ್ ನ ಐಎಎಸ್ ಅಧಿಕಾರಿ T.M ವಿಜಯ್ ಭಾಸ್ಕರ್ ಅವರನ್ನು ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಕ ಮಾಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
1981 batch IAS officer K Ratna Prabha takes charge as chief secretary to government of Karnataka on November 30 in Vidhan Soudha, Bengaluru.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ