ಕನ್ನಡ ಸಿನಿಮಾ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ವಿಧಿವಶ
ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಬೆಂಗಳೂರು, ಮೇ 31: ವರನಟ ಡಾ. ರಾಜ್ ಕುಮಾರ್ ಅವರ ಪತ್ನಿ, ಕನ್ನಡ ಚಲನಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ (78) ಅವರು ಬುಧವಾರ ಬೆಳಗ್ಗೆ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಕಳೆದ 16 ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪಾರ್ವತಮ್ಮ ಅವರು ಚಿಕಿತ್ಸೆ ಫಲಕಾರಿಯಾಗದೆ ಬಹು ಅಂಗಾಂಗ ವೈಫಲ್ಯದಿಂದ ಬುಧವಾರ ಮುಂಜಾನೆ 4.40ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ತಜ್ಞ ವೈದ್ಯ ಸಂಜಯ್ ಕುಲಕರ್ಣಿ ಪ್ರಕಟಿಸಿದ್ದಾರೆ.[ದಿ. ಪಾರ್ವತಮ್ಮ ರಾಜ್ ಕುಮಾರ್ ಅವರ ಮರೆಯಲಾರದ ಚಿತ್ರಗಳು]

ಪಾರ್ವತಮ್ಮ ಅವರ ಪಾರ್ಥೀವ ಶರೀರವನ್ನು ಆಸ್ಪತ್ರೆಯಿಂದ ರಾಘವೇಂದ್ರ ರಾಜ್ ಕುಮಾರ್ ಅವರ ನಿವಾಸಕ್ಕೆ ತರಲಾಗಿದೆ. ಸದಾಶಿವ ನಗರದ ಪೂರ್ಣಪ್ರಜ್ಞ ಮೈದಾನದಲ್ಲಿ ಬೆಳಗ್ಗೆ 10 ಗಂಟೆ ನಂತರ ಸಾರ್ವಜನಿಕರು ಅಂತಿಮ ದರ್ಶನ ಪಡೆದುಕೊಳ್ಳಬಹುದು.
ಕಂಠೀರವ ಸ್ಟುಡಿಯೋದಲ್ಲಿ ಸಂಜೆ ವೇಳೆಗೆ ಅಂತಿಮ ಸಂಸ್ಕಾರ ನಡೆಸಲಾಗುವುದು. ಪಾರ್ವತಮ್ಮ ಅವರ ಇಚ್ಛೆಯಂತೆ ಅವರ ಕಣ್ಣುಗಳನ್ನು ದಾನವಾಗಿ ಪಡೆಯಲಾಗಿದೆ ಎಂದು ಕುಟುಂಬ ವರ್ಗ ಹೇಳಿದೆ.[ಪಾರ್ವತಮ್ಮ ಕನ್ನಡ ಚಿತ್ರರಂಗ ಶಕ್ತಿ : ಟ್ವಿಟ್ಟರಲ್ಲಿ ಕಂಬನಿ]

ಡಿಸೆಂಬರ್ 6, 1939ರಲ್ಲಿ ಮೈಸೂರಿನ ಸಾಲಿಗ್ರಾಮದಲ್ಲಿ ಜನಿಸಿದ ಪಾರ್ವತಮ್ಮ ಅವರು ಕನ್ನಡ ಚಲನಚಿತ್ರರಂಗದ ವರನಟ ಡಾ. ರಾಜ್ ಕುಮಾರ್ ಅವರ ಪತ್ನಿಯಾಗಿ, ಚಿತ್ರರಂಗದ ಶಕ್ತಿಯಾಗಿ ಬೆಳೆದವರು.
ಪಾರ್ವತಮ್ಮ ಅವರು ಪುತ್ರರಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್, ಇಬ್ಬರು ಪುತ್ರಿಯರಾದ ಪೂರ್ಣಿಮಾ, ಲಕ್ಷ್ಮಿ, ಸೋದರರಾದ ಎಸ್ಎ ಚಿನ್ನೇಗೌಡ, ಗೋವಿಂದರಾಜ್ ಹಾಗೂ ಶ್ರೀನಿವಾಸ್ ಸೇರಿದಂತೆ ಮೊಮ್ಮಕ್ಕಳು, ಅಪಾರ ಅಭಿಮಾನಿ ವರ್ಗವನ್ನು ಅಗಲಿದ್ದಾರೆ.[ಪಾರ್ವತಮ್ಮ ನಿಧನಕ್ಕೆ ಸದಾನಂದ ಗೌಡ ಸೇರಿ ಹಲವರಿಂದ ಸಂತಾಪ]

ಪೂರ್ಣಿಮಾ ಎಂಟರ್ ಪ್ರೈಸರ್ ಮೂಲಕ ತಮ್ಮ ಮಕ್ಕಳನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದಲ್ಲದೆ, ಸುಧಾರಾಣಿ, ಮಾಲಾಶ್ರೀ, ಪ್ರೇಮಾ, ರಕ್ಷಿತಾ, ರಮ್ಯಾ ಅವರನ್ನು ಚಿತ್ರರಂಗಕ್ಕೆ ಕರೆ ತಂದವರು. ಸರಿ ಸುಮಾರು 80ಕ್ಕೂ ಅಧಿಕ ಚಿತ್ರಗಳನ್ನು ನಿರ್ಮಿಸಿದ್ದರು. [ಪಾರ್ವತಮ್ಮ ನಿಧನ: ಚಿತ್ರಮಂದಿರಗಳು ಬಂದ್, ಹಲವು ಶಾಲೆಗಳಿಗೆ ರಜೆ]
ಡಾ. ರಾಜ್ ಅಭಿನಯದ ಹಾಲು ಜೇನು, ಕವಿರತ್ನ ಕಾಳಿದಾಸ, ಜೀವನ ಚೈತ್ರ , ಶಿವರಾಜ್ ಅಭಿನಯದ ಆನಂದ್, ಓಂ, ಜನುಮದ ಜೋಡಿ, ರಾಘವೇಂದ್ರ ರಾಜ್ ಕುಮಾರ್ ಅಭಿನಯದ ನಂಜುಂಡಿ ಕಲ್ಯಾಣ, ಪುನೀತ್ ಅಭಿನಯದ ಅಪ್ಪು, ಅಭಿ, ಹುಡುಗರು ಸೇರಿದಂತೆ ಅನೇಕ ಹಿಟ್ ಚಿತ್ರಗಳನ್ನು ನೀಡಿದವರು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications