ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಜಯನಗರ: ಕೈ ಕೈ ಮಿಲಾಯಿಸಿದ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರು

|
Google Oneindia Kannada News

ಬೆಂಗಳೂರು, ಮೇ 12: ಚುನಾವಣೆಯ ದಿನವೇ ರಾಜಕೀಯ ವಿರೋಧ ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ಬೆಂಗಳೂರಿನ ಹಂಪಿನಗರದ ಈಜುಕೊಳದ ಸಮೀಪ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ನಾಲ್ವರು ಕಾರ್ಯಕರ್ತರು ಗಾಯಗೊಂಡಿದ್ದಾರೆ.

LIVE: ಇದುವರೆಗೆ ಶೇ. 10.51 ರಷ್ಟು ಮತದಾನ ದಾಖಲು LIVE: ಇದುವರೆಗೆ ಶೇ. 10.51 ರಷ್ಟು ಮತದಾನ ದಾಖಲು

ಸ್ಥಳಕ್ಕೆ ಧಾವಿಸಿದ ಪೊಲೀಸರು ಎರಡೂ ಕಡೆಯ ಮುಖಂಡರನ್ನು ಸಮಾಧಾನಪಡಿಸಿ ಘರ್ಷಣೆಯನ್ನು ತಹಬದಿಗೆ ತಂದರು.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಪಿ ರವಿ ಚನ್ನಣ್ಣನವರ್, ಇದು ಮೇಲ್ನೋಟಕ್ಕೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾಗಿ ಕಾಣಿಸುತ್ತಿದೆ. ಮತಗಟ್ಟೆಯಿಂದ ಕೇವಲ 100 ಮೀಟರ್ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದು ಸೂಕ್ಷ್ಮ ಪ್ರದೇಶವಾಗಿದೆ. ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

karnataka assembly elections 2018 congress bjp members fight in hampinagar

ವಿಜಯನಗರದ ಕಾಂಗ್ರೆಸ್ ಶಾಸಕ ಕೃಷ್ಣಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಕಾರ್ಯಕರ್ತರು, ಇಲ್ಲಿ ಗೂಂಡಾಗಿರಿ ನಡೆಸಲಾಗುತ್ತಿದೆ. ಪೊಲೀಸರು ಕೂಡ ಶಾಸಕರು ಹೇಳಿದಂತೆ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.

ಘಟನೆಯಲ್ಲಿ ಗಾಯಗೊಂಡ ಬಿಜೆಪಿ ಪಾಲಿಕೆ ಸದಸ್ಯ ಆನಂದ್ ಹೊಸೂರ್ ಪ್ರತಿಭಟನೆ ಮಾಡುತ್ತಿರುವಾಗಲೇ ಕುಸಿದು ಬಿದ್ದರು. ಅವನ್ನು ಹೊಯ್ಸಳ ವಾಹನದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಪೊಲೀಸರ ವಿರುದ್ಧ ಆಕ್ರೋಶ
ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಪಾಲಿಕೆ ಸದಸ್ಯನ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದ್ ಅವರು ನ್ಯಾಯಬದ್ಧವಾಗಿ ಚುನಾವಣಾ ಪರಿಶೀಲನೆ ನಡೆಸುತ್ತಿದ್ದರು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಏಕಾಏಕಿ ಹಲ್ಲೆ ನಡೆಸಿದ್ದಾರೆ ಎಂದು ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರವೀಂದ್ರ ಆರೋಪಿಸಿದರು.

ಕೃಷ್ಣಪ್ಪ ಅವರ ಕಡೆಯ ಗೂಂಡಾ ಕಾಂಗ್ರೆಸ್ ಕಾರ್ಯಕರ್ತರು ನಿನ್ನೆಯಿಂದ ಇಲ್ಲಿ ಬೀಡು ಬಿಟ್ಟಿದ್ದಾರೆ. ಅಲ್ಲದೆ ಅವರು ತಮಗೆ ಬೇಕಾದ ಪೋಲೀಸರನ್ನು ಇಲ್ಲಿಗೆ ನಿಯೋಜನೆ ಮಾಡಿಕೊಂಡಿದ್ದಾರೆ. ಪೋಲಿಸರ ಮುಂದೆಯೇ ಹಲ್ಲೆಗೆ ಮುಂದಾಗಿದ್ದಾರೆ. ಪೊಲೀಸರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ ಎಂದು ದೂರಿದರು.

ಬಿಜೆಪಿ ಕಾರ್ಯಕರ್ತರನ್ನು ಕಾಂಗ್ರೆಸ್ಸಿಗರು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ. ಇಂಥ ಹಲ್ಲೆ ಸಂಸ್ಕೃತಿ ಕಾಂಗ್ರೆಸ್‌ನವರದ್ದು. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

English summary
karnataka assembly elections 2018: workers of congress and bjp fought during election in Hampinagar of Vijayanagar constituency on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X